ಶಿರಸಿ (Sirsi): ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೆಮ್ಮೆಯ ಉತ್ಸವವಾದ ಕದಂಬೋತ್ಸವವನ್ನು (Kadambotsav) ಏ. ೧೨ ಮತ್ತು ೧೩ರಂದು ಬನವಾಸಿಯಲ್ಲಿ (Banavasi) ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಘೋಷಣೆ ಮಾಡಿದರು. ಅವರು ಶನಿವಾರ ಶಿರಸಿ ತಹಸೀಲ್ದಾರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ವಿಷಯ ತಿಳಿಸಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಶಾಸಕ ಶಿವರಾಮ ಹೆಬ್ಬಾರ ಮಾತನಾಡಿ, ಕದಂಬೋತ್ಸವದಲ್ಲಿ ರಾಷ್ಟ್ರ, ರಾಜ್ಯ ಮಟ್ಟದ ಮೇರು ಕಲಾವಿದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಳೆದ ಬಾರಿ ಅರ್ಜಿ ಹಾಕಿ ಅವಕಾಶ ದೊರೆಯದ ಕಲಾವಿದರಿಗೆ ಆದ್ಯತೆ ನೀಡಬೇಕು. ವಿವಿಧ ಸಮಿತಿಗಳ ರಚನೆಯಲ್ಲಿ ಜನಪ್ರತಿನಿಧಿಗಳನ್ನು ಸೇರಿಸಿಕೊಳ್ಳಬೇಕು. ಕೆ.ಎಸ್.ಆರ್.ಟಿ.ಸಿ. ಮೂಲಕ ಸೂಕ್ತ ಸಾರಿಗೆ ವ್ಯವಸ್ಥೆ ಒದಗಿಸಬೇಕು. ಪೊಲೀಸ್ ಇಲಾಖೆಯಿಂದ ಅಗತ್ಯ ಭದ್ರತೆ ಒದಗಿಸಬೇಕು. ಈ ಬಾರಿಯ ಪಂಪ ಪ್ರಶಸ್ತಿಯನ್ನು (Pampa Award) ಕದಂಬೊತ್ಸವ (Kadambotsav) ವೇದಿಕೆಯಲ್ಲಿಯೇ ನೀಡಲಾಗುವುದು ಎಂದರು.

ಇದನ್ನು ಓದಿ : Micro Finance/ ಮೈಕ್ರೋ ಫೈನಾನ್ಸ್‌ಗೆ ಮತ್ತೊಂದು ಬಲಿ

ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಕದಂಬೋತ್ಸವ ಪ್ರತಿಯೊಬ್ಬರ ಉತ್ಸವವಾಗಬೇಕು. ಇದು ನಮ್ಮೆಲ್ಲರ ಉತ್ಸವ ಎಂಬ ಭಾವನೆಯಿಂದ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ಕದಂಬೋತ್ಸವವನ್ನು ಯಶಸ್ವಿಗೊಳಿಸೋಣ ಎಂದರು.

ಇದನ್ನು ಓದಿ : Abandoned car/ ಕೋಟಿ ಹಣ ಪತ್ತೆಯಾದ ಕಾರು ದರೋಡೆಯಾಗಿತ್ತು

ಕದಂಬೋತ್ಸವ ಯಶಸ್ವಿ ಆಚರಣೆಗಾಗಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಒಳಗೊಂಡ ಕಾರ್ಯಕಾರಿ ಸಮಿತಿ, ಸ್ವಾಗತ ಸಮಿತಿ, ಹಣಕಾಸು ಸಮಿತಿ, ಪ್ರಚಾರ ಸಮಿತಿ, ಸಾಂಸ್ಕೃತಿಕ ಸಮಿತಿ, ವೇದಿಕೆ ಸಮಿತಿ, ವಸತಿ ಸಮಿತಿ, ಸಾರಿಗೆ ಸಮಿತಿ, ಕ್ರೀಡಾ ಸಮಿತಿ, ಆರೋಗ್ಯ ಸಮಿತಿ, ಊಟೋಪಚಾರ , ಭದ್ರತಾ ಸಮಿತಿ ಮುಂತಾದ ಸಮಿತಿಗಳನ್ನು ರಚಿಸಲಾಯಿತು.

ಇದನ್ನು ಓದಿ : JEE Mains/ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಆರ್.ಎನ್.ಎಸ್. ಸಾಧನೆ

ಸಭೆಯಲ್ಲಿ ಶಿರಸಿ ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡರ, ಉಪ ವಿಭಾಗಾಧಿಕಾರಿ ಕಾವ್ಯರಾಣಿ ಹಾಗೂ ಬನವಾಸಿ ಗ್ರಾಮ ಪಂಚಾಯತ ಸೇರಿದಂತೆ ವಿವಿಧ ಗ್ರಾಮ ಪಂಚಾಯತಗಳ ಜನಪ್ರತಿನಿಧಿಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಇದನ್ನು ಓದಿ : Special buses/ ಶಿವರಾತ್ರಿ ಪ್ರಯುಕ್ತ ವಿಶೇಷ ಹೆಚ್ಚುವರಿ ಸಾರಿಗೆ ವ್ಯವಸ್ಥೆ