ಭಟ್ಕಳ ಡೈರಿ ವರದಿ
ಭಟ್ಕಳ: ತಾಲೂಕಿನ ಮುರುಡೇಶ್ವರ ಸಮೀಪದ ಕಾಯ್ಕಿಣಿ ಗ್ರಾಮದ ಬಾಕಡಕೇರಿ–ಬಸ್ತಿ ಪ್ರದೇಶದಲ್ಲಿ ಶ್ರೀ ಶಾರದೋತ್ಸವ ಸೇವಾ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ನಾಲ್ಕನೇ ವರ್ಷದ ಶಾರದೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಭಕ್ತರ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು.
ಶಾರದೋತ್ಸವದ ಅಂಗವಾಗಿ ಶಾರದಾ ಮಾತೆಯ ಮೂರ್ತಿಯನ್ನು ಟ್ಯಾಬ್ಲೊದಲ್ಲಿ ಮೆರವಣಿಗೆಯ ಮೂಲಕ ಉತ್ಸವ ಸ್ಥಳಕ್ಕೆ ಕರೆತರಲಾಯಿತು. ಚಂಡೆ ವಾದನ, ಮಹಿಳೆಯರಿಂದ ಪೂರ್ಣಕುಂಭ ಸ್ವಾಗತ ಹಾಗೂ ಭಕ್ತರ ಜಯಘೋಷದೊಂದಿಗೆ ನಡೆದ ಮೆರವಣಿಗೆ ಉತ್ಸವದ ಮೆರುಗನ್ನು ಹೆಚ್ಚಿಸಿತು. ನಂತರ ಶಾರದಾ ಮಾತೆಗೆ ವಿಶೇಷ ಪೂಜೆ ಹಾಗೂ ಮಹಾಪೂಜೆ ನೆರವೇರಿಸಲಾಯಿತು. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಸಂಜೆ ವಿಸರ್ಜನಾ ಪೂಜೆ ಹಾಗೂ ಫಲಾವಳಿ ವಸ್ತುಗಳ ಹರಾಜು ಕಾರ್ಯಕ್ರಮ ನಡೆಯಿತು. ಬಳಿಕ ಶಾರದಾ ಮಾತೆಯ ಮೂರ್ತಿಯನ್ನು ಭವ್ಯ ಮೆರವಣಿಗೆಯಲ್ಲಿ ದೇವಿಕಾನ ಹೊಳೆಗೆ ಕೊಂಡೊಯ್ದು ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಸರ್ಜಿಸಲಾಯಿತು. ವಿಸರ್ಜನಾ ಮೆರವಣಿಗೆಯಲ್ಲಿ ಮಹಿಳೆಯರು ಹಾಗೂ ಪುಟಾಣಿ ಮಕ್ಕಳು ಪ್ರದರ್ಶಿಸಿದ ನೃತ್ಯ ಮತ್ತು ಭಜನಾ ನೃತ್ಯಗಳು ಸಾರ್ವಜನಿಕರ ಗಮನ ಸೆಳೆದವು. ಮೆರವಣಿಗೆಯುದ್ದಕ್ಕೂ ಭಕ್ತಿಭಾವದ ವಾತಾವರಣ ಕಂಡುಬಂದಿದ್ದು, ಸ್ಥಳೀಯರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಈ ವರ್ಷದ ಶಾರದಾ ಮಾತೆಯ ಮೂರ್ತಿಯನ್ನು ಶ್ರೀ ಲೋಕೇಶ ಮಾದೇವ ಬಾಕಡ ಅವರು ದಾನವಾಗಿ ನೀಡುವ ಮೂಲಕ ಉತ್ಸವದ ಧಾರ್ಮಿಕ ಕಾರ್ಯಕ್ಕೆ ಕೊಡುಗೆ ನೀಡಿದರು.
ಇದನ್ನೂ ಓದಿ :




