ಕಾರವಾರ : ಕಾಳಿನದಿ ಯೋಜನೆ ೧ನೇ ಹಂತ ಸೂಪಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳಿ ಬೀಳುತ್ತಿದೆ. ಹೀಗಾಗಿ ಕಾಳಿ ನದಿಯಲ್ಲಿ ಪ್ರವಾಹ (Kali river flood) ಸಂಭವ ಇರುವುದರಿಂದ ಮೊದಲನೆಯ ಮುನ್ನೆಚ್ಚರಿಕೆಯ ಸೂಚನೆ ನೀಡಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಸೂಪಾ ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿದೆ. ಸೂಪಾ ಆಣಿಕಟ್ಟೆಯ ಜಲಾಶಯದ ನೀರಿನ ಮಟ್ಟವು ಸತತವಾಗಿ ಏರುತ್ತಿದೆ. ಸೂಪಾ ಜಲಾಶಯದ ಗರಿಷ್ಠ ಮಟ್ಟವು ೫೬೪ ಮೀಟರ ಆಗಿದ್ದು, ಸೂಪಾ ಜಲಾಶಯದ ನೀರಿನ ಸಂಗ್ರಹಣ ಸಾಮರ್ಥ್ಯವು ೧೪೭.೫೫ ಟಿ.ಎಂ.ಸಿ. ಆಗಿದೆ. ಜಲಾಶಯದ ಇಂದಿನ ನೀರಿನ ಮಟ್ಟವು ಬೆಳಗ್ಗೆ ೮ ಗಂಟೆಗೆ ೫೫೧.೬೦ (೬೭.೨೨%) ಮೀಟರ್ ಆಗಿದೆ. ೯೯.೧೭೫ ಟಿ.ಎಂ.ಸಿ. ನೀರು ಸಂಗ್ರಹವಾಗಿದೆ. ಇದು ಜಲಾಶಯದ ಒಟ್ಟು ಸಾಮರ್ಥ್ಯದ ೬೭.೨೨% ಆಗಿದೆ. ಈ ದಿನದ ಸೂಪಾ ಜಲಾಶಯದ ಒಳಹರಿವು ಸುಮಾರು ೨೫೯೯೭ ಕ್ಯೂಸೆಕ್ಸ್ ಆಗಿದೆ.
ಇದನ್ನೂ ಓದಿ : ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
ಇದೇ ರೀತಿಯಲ್ಲಿ ಜಲಾಶಯಕ್ಕೆ ನೀರಿನ ಒಳ ಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ. ಆದ್ದರಿಂದ ಆಣೆಕಟ್ಟು ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿಯಾದ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರ ಬಿಡಲಾಗುತ್ತದೆ (Kali river flood) ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಡಿಯೋ ಸಹಿತ ಇದನ್ನೂ ಓದಿ : ಗುಡ್ಡಕುಸಿತ; ಸಮರೋಪಾದಿಯಲ್ಲಿ ದುರಸ್ತಿ ಕಾರ್ಯ
ಆಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ಇತ್ಯಾದಿಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕೆಂದು ತಿಳಿಸಲಾಗಿದೆ. ಸೂಪಾ ಆಣೆಕಟ್ಟೆಯ ಕೆಳಭಾಗದ ನದಿ ಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ ಮತ್ತು ಇತರೆ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೂ ನಡೆಸದಂತೆ ಕರ್ನಾಟಕ ವಿದ್ಯುತ್ ನಿಗಮದ ಕಾರ್ಯನಿರ್ವಾಹಕ ಅಭಿಯಂತರು ವಿನಂತಿಸಿದ್ದಾರೆ.