ಭಟ್ಕಳ : ಇಲ್ಲಿನ ಚೌಥನಿಯ ಶ್ರೀ ಕಾಳಿಕಾಂಬಾ (kalikamba) ದೇವಸ್ಥಾನದಲ್ಲಿ  ಕ್ಷೇತ್ರದ ಶ್ರೀ ಕಾಳಿಕಾಂಬಾ ಮಹಿಳಾ ಸಂಘದವರಿಂದ ಸಾಮೂಹಿಕ ಲಲಿತ ಸಹಸ್ರನಾಮ ಕುಂಕುಮಾರ್ಚನೆ ಕಾರ್ಯಕ್ರಮವು ಬಹಳ ವಿಶೇಷವಾಗಿ ನೆರವೇರಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕಲಶ ಪ್ರತಿಷ್ಠಾಪನೆ ಮಾಡಿ ದೇವಿಯನ್ನು ಆರಾಧಿಸಿ ಪೂಜಿಸಲಾಯಿತು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಶ್ರೀ ಕಾಳಿಕಾಂಬಾ (Kalikamba) ದೇವಸ್ಥಾನದ ಆಡಳಿತ ಸಮಿತಿ, ಭೂದಾನ ಯೋಜನಾ ಸಮಿತಿ, ವಿಶ್ವಕರ್ಮ ಬ್ರಾಹ್ಮಣ ಯುವಕ ಸಂಘ, ಶ್ರೀ ಕಾಳಿಕಾಂಬಾ ಮಹಿಳಾ ಸಂಘ, ಶ್ರೀ ಕಾಳಿಕಾಂಬಾ ಭಜನಾ ಮಂಡಳಿಯವರು ಉಪಸ್ಥಿತರಿದ್ದರು. ಪ್ತಧಾನ ಅರ್ಚಕ ವಾಸುದೇವ ಪುರೋಹಿತರ ಪೌರೋಹಿತ್ಯದಲ್ಲಿ ನಡೆದ ಕಾರ್ಯಕ್ರಮ ಅನ್ನ ಸಂತರ್ಪಣೆಯೊಂದಿಗೆ ಸಂಪನ್ನಗೊಂಡಿತು.

ಸುದ್ದಿಗೆ ಸಂಬಂಧಿಸಿದ ವಿಡಿಯೋವನ್ನು  ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂ, ಮತ್ತು  ಫೇಸ್‌ಬುಕ್‌ ನಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ : ಕಾರವಾರದಿಂದ ತಿರುಪತಿಗೆ ರೈಲು ಓಡಿಸಲು ಆಗ್ರಹ