ಭಟ್ಕಳ : ಭಟ್ಕಳ (Bhatkal) ತಾಲೂಕ ೧೧ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು (Kannada Sammelan) ಡಿಸೆಂಬರ್‌ ೩೧ರಂದು ಇಲ್ಲಿನ ಅಳಿವೆಕೋಡಿ ಶ್ರೀ ದುರ್ಗಾಪರಮೇಶ್ವರಿ (Durgaparameshwari) ಸಭಾಭವನದಲ್ಲಿ ಆಯೋಜಿಸಲಾಗಿದೆ. ಈ ಬಾರಿಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಸಾಹಿತಿ ನಾರಾಯಣ ಯಾಜಿ ಶಿರಾಲಿಯವರನ್ನು ಆಯ್ಕೆಮಾಡಲಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮ್ಮೇಳನಾಧ್ಯಕ್ಷರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಈ ಸಮ್ಮೇಳನಕ್ಕೆ (Kannada Sammelan) ಸಾಹಿತಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ಸಾಹಿತ್ಯಾಸಕ್ತರು, ಸಾರ್ವಜನಿಕರು ಹಾಗೆಯೇ ಎಲ್ಲ ಕನ್ನಡದ ಮನಸುಗಳು ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು  ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಕೋರಿದ್ದಾರೆ.

ಇದನ್ನೂ ಓದಿ : Tulsi Gowda/ ತುಳಸಿ ಅಜ್ಜಿಯ ಅದ್ಬುತ ಪಯಣ

ಸಮ್ಮೇಳನಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಪಿ. ಆರ್. ನಾಯ್ಕ, ಕಸಾಪ ಭಟ್ಕಳ ಘಟಕದ ಗೌರವ ಕೋಶಾಧ್ಯಕ್ಷ ಶ್ರೀಧರ ಶೇಟ, ಸಂಘಟನಾ ಕಾರ್ಯದರ್ಶಿ ಸಂತೋಷ ಆಚಾರ್ಯ, ಸದಸ್ಯರಾದ ಎಂ.ಪಿ. ಭಂಡಾರಿ, ಪೂರ್ಣಿಮಾ ಕರ್ಕಿಕರ, ಕೃಷ್ಣ ಮೊಗೇರ, ಗಣೇಶ ಯಾಜಿ ಮುಂತಾದವರು ಉಪಸ್ಥಿತರಿದ್ದರು.

ವಿಡಿಯೋ ಸಹಿತ ಇದನ್ನೂ ಓದಿ : ಬಾವಿಗೆ ಬಿದ್ದ ಮೃತ ವಿದ್ಯಾರ್ಥಿಯ ಕುಟುಂಬಸ್ಥರಿಂದ ಪ್ರತಿಭಟನೆ