ಭಟ್ಕಳ (Bhatkal) : ಮುಂದೂಡಲ್ಪಟ್ಟ ಭಟ್ಕಳ ತಾಲೂಕು ೧೧ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು (Kannada Sammelan) ಜ.೭ರಂದು ನಡೆಸಲು ನಿರ್ಧರಿಸಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಈ ಹಿಂದೆ ನಿರ್ಧರಿಸಿದಂತೆ ಡಿಸೆಂಬರ್ ೩೧ರಂದು ಅಳಿವೆಕೋಡಿ ಶ್ರೀ ದುರ್ಗಾಪರಮೇಶ್ವರಿ (Durgaparameshwari) ಸಭಾಭವನದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ (Kannada Sammelan) ನಡೆಯಬೇಕಿತ್ತು. ಆದರೆ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಏಳು ದಿನ ಶೋಕಾಚರಣೆ ಇದ್ದುದರಿಂದ ಸಮ್ಮೇಳನವನ್ನು ಮುಂದೂಡಲಾಗಿತ್ತು. ಇದೀಗ ಭಟ್ಕಳ ತಾಲೂಕು ೧೧ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದೇ ಸಭಾಭವನದಲ್ಲಿ ಡಿ.೭ರಂದು ಮಂಗಳವಾರ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಭಟ್ಕಳ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ತಿಳಿಸಿದ್ದಾರೆ.
ಇದನ್ನೂ ಓದಿ : ಒಂದೇ ದಿನ ಮೊಣಕಾಲು ಬದಲಾವಣೆಯ ಐದು ಶಸ್ತ್ರಚಿಕಿತ್ಸೆ ಯಶಸ್ವಿ