ಭಟ್ಕಳ: ಕಾಂತಾರ ಚಾಪ್ಟರ್–೧ ಸಿನಿಮಾದಲ್ಲಿ ನಟಿಸಿ ಸಿನಿರಸಿಕರ ಗಮನ ಸೆಳೆದ ನಟಿ (Kantara actress) ಆಯಿರಾ ಕೃಷ್ಣ ಅವರು ತಮ್ಮ ಹುಟ್ಟೂರಾದ ಭಟ್ಕಳ (Bhatkal) ತಾಲೂಕಿನ ಮೂಡಭಟ್ಕಳ ಹಾಗೂ ಮುಟ್ಟಳ್ಳಿ ಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿದರು.

ಈ ವಿಡಿಯೋವನ್ನು ಯೂಟ್ಯೂಬ್, ಫೇಸ್‌ಬುಕ್‌ ಮತ್ತು  ಇನ್ಸ್ಟಾಗ್ರಾಂ ನಲ್ಲಿ ವೀಕ್ಷಿಸಬಹುದು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಮೂಡಭಟ್ಕಳದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಮುಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿದ ನಟಿ (Kantara actress),  ತಮ್ಮ ಆಹಾರ ಇಂಡಿಯಾ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ಬ್ಯಾಗ್, ನೋಟ್ ಪುಸ್ತಕಗಳು ಹಾಗೂ ಜ್ಯಾಮಿಟ್ರಿ ಬಾಕ್ಸ್‌ಗಳನ್ನು ವಿತರಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

Youth arrested/ ಗಾಂಜಾ ಸೇವಿಸಿದ ತೆರ್ನಮಕ್ಕಿ ಯುವಕ ಬಂಧನ

ಈ ವೇಳೆ ಮಾತನಾಡಿದ ಅವರು, ಆಹಾರ ಇಂಡಿಯಾ ಸಂಸ್ಥೆಗೆ ಈಗ ಐದು ವರ್ಷಗಳು ಪೂರ್ಣಗೊಂಡಿದ್ದು, ಕೋವಿಡ್ ಸಂದರ್ಭ ಜನರಿಗೆ ನೆರವು ನೀಡುವ ಉದ್ದೇಶದಿಂದ ಸಂಸ್ಥೆಯನ್ನು ಆರಂಭಿಸಲಾಗಿತ್ತು. ಆ ಸಮಯದಲ್ಲಿ ತಾಲೂಕು ಸೇರಿದಂತೆ ಒಟ್ಟು ೧೧ ಜಿಲ್ಲೆಗಳಲ್ಲಿ ಫುಡ್ ಕಿಟ್‌ಗಳನ್ನು ವಿತರಿಸಲಾಗಿತ್ತು ಎಂದು ಹೇಳಿದರು.

Murudeshwar/ ಮುರ್ಡೇಶ್ವರ ಬೀಚ್‌ನಲ್ಲಿ ಪ್ರತಿ ದಿನ ಗಾಂಜಾ ಮಾರಾಟ

ರಾಜ್ಯದ ವಿವಿಧ ಭಾಗಗಳಷ್ಟೇ ಅಲ್ಲದೆ ತಮಿಳುನಾಡಿನ ಬಡ ಕುಟುಂಬಗಳು ವಾಸಿಸುವ ಪ್ರದೇಶಗಳಲ್ಲಿನ ಶಾಲೆಗಳನ್ನು ಗುರುತಿಸಿ, ಅಲ್ಲಿ ಶಿಕ್ಷಣಕ್ಕೆ ಅಗತ್ಯವಿರುವ ಪರಿಕರಗಳನ್ನು ಒದಗಿಸುವ ಕಾರ್ಯವೂ ನಡೆಸಲಾಗಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ತಾಲೂಕಿನ ಅಂತರ ಪ್ರದೇಶಗಳ ಸರ್ಕಾರಿ ಶಾಲೆಗಳನ್ನು ಗುರುತಿಸಿ, ಅಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯ ನೀಡುವ ಉದ್ದೇಶ ಹೊಂದಿದ್ದೇವೆ ಎಂದು ಅವರು ಹೇಳಿದರು.

Holi celebration/ ಭಟ್ಕಳ ತಾಲೂಕು ಆಡಳಿತ ಸೌಧದಲ್ಲಿ ಹೋಳಿ ಸಂಭ್ರಮ

ಈ ಸಂದರ್ಭದಲ್ಲಿ ಮೂಡಭಟ್ಕಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವೆಂಕಟೇಶ ನಾಯ್ಕ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯ್ಕ, ಮುಖ್ಯ ಶಿಕ್ಷಕಿ ಗೀತಾ ಶಿರೂರು, ಭಾಸ್ಕರ ನಾಯ್ಕ, ಮಂಜುನಾಥ ನಾಯ್ಕ, ಕೃಷ್ಣ ನಾಯ್ಕ ಕಾಟಿಮನೆ ಮತ್ತಿತರರು ಉಪಸ್ಥಿತರಿದ್ದರು.

Bhatkal/ ಹೋಟೆಲ್‌ಗೆ ನುಗ್ಗಿ ಗಲಾಟೆ; ಒಬ್ಬನ ಮೇಲೆ ಹಲ್ಲೆ