ಕಾರವಾರ (Karwar) : ಮಹಾರಾಷ್ಟ್ರದ (Maharashtra) ಪುಣೆಯ (Pune) ಉದ್ಯಮಿಯೋರ್ವನ ಭೀಕರ ಹತ್ಯೆ ಮಾಡಿದ ಘಟನೆ ಕಾರವಾರ ತಾಲೂಕಿನ ಹಣಕೋಣದಲ್ಲಿ ನಡೆದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಬೆಳಿಗ್ಗೆ ೫.೩೦ರ ವೇಳೆ ಘಟನೆ ನಡೆದಿದೆ. ವಿನಾಯಕ ನಾಯ್ಕ(೫೨) ಹತ್ಯೆಗೊಳಗಾದ ವ್ಯಕ್ತಿ. ಚಾಕು, ತಲ್ವಾರ್ ನಿಂದ ಕಡಿದು ಆರೋಪಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಐವರು ಅಪರಿಚಿತರಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ವಿನಾಯಕ ಪತ್ನಿ ಮೇಲೆ ಸಹ ಹಲ್ಲೆ ನಡೆಸಲಾಗಿದೆ. ಅವರನ್ನು ಕಾರವಾರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ : ನಾಳೆ ಭಟ್ಕಳದಲ್ಲಿ ದಸರಾ ಕ್ರೀಡಾಕೂಟ
ಹಣಕೋಣ ಮೂಲದ ವಿನಾಯಕ ಗ್ರಾಮದ ಜಾತ್ರೆಯಿದ್ದ ಹಿನ್ನಲೆಯಲ್ಲಿ ಪತ್ನಿ ಸಮೇತ ಕಳೆದ ವಾರ ಊರಿಗೆ ಆಗಮಿಸಿದ್ದರು. ಇಂದು ಬೆಳಿಗ್ಗೆ ಪುನಃ ಪುಣೆಗೆ ಹೋಗುವವರಿದ್ದರು. ಅದಕ್ಕೂ ಮುನ್ನ ನಸುಕಿನ ಜಾವ ಅಪರಿಚಿತರು ನುಗ್ಗಿ ಕೊಲೆ ಮಾಡಿದ್ದಾರೆ. ಚಿತ್ತಾಕುಲ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.
ಸುದ್ದಿಗೆ ಸಂಬಂಧಿಸಿದ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂನಲ್ಲಿ ಮತ್ತು ಫೇಸ್‌ಬುಕ್ ನಲ್ಲಿ ವೀಕ್ಷಿಸಬಹುದು.
ವಿಡಿಯೋ ಸಹಿತ ಇದನ್ನೂ ಓದಿ : ಧರಣಿ ನಿರತರನ್ನು ವಶಕ್ಕೆ ಪಡೆದ ಪೊಲೀಸರು