ಭಟ್ಕಳ (Bhatkal) : ಉತ್ತರ ಕನ್ನಡ (uttar kannada) ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ಪತ್ರಕರ್ತರೂ (journalist) ಆದ ಬಿ.ಎನ್. ವಾಸರೆ ಹಾಗೂ ಇತರೆ ಪತ್ರಕರ್ತರ ಮೇಲೆ ದಾಂಡೇಲಿ ಸಿಪಿಐ ಅನುಚಿತ ವರ್ತನೆಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ತೀವ್ರವಾಗಿ ಖಂಡಿಸಿದೆ (kasapa condemns).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ದಾಂಡೇಲಿಯ (Dandeli) ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರ ವಿರುದ್ಧದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಅಲ್ಲಿನ ಸಿಪಿಐ ಭೀಮಣ್ಣ ಸೂರಿ ಅವರು ಮಾಡಿದ ದರ್ಪ, ಅನುಚಿತ ನಡೆ ಖಂಡನೀಯ. ಇದನ್ನು ಭಟ್ಕಳ ತಾಲೂಕು ಸಾಹಿತ್ಯ ಪರಿಷತ್ ಘಟಕವು ತೀವ್ರವಾಗಿ ಖಂಡಿಸುತ್ತದೆ(Kasapa condemns) ಎಂದು ಅದು ತಿಳಿಸಿದೆ.
ಇದನ್ನೂ ಓದಿ : ರೈಲ್ವೆ ನಿಲ್ದಾಣದಲ್ಲಿ ಟ್ಯಾಕ್ಸಿ ಸ್ಟ್ಯಾಂಡ್ ನಿರ್ಮಾಣಕ್ಕೆ ಮನವಿ
ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ,ಪತ್ರಕರ್ತರಿಗೆ ರಕ್ಷಣೆ ನೀಡಬೇಕಾದ ಪೋಲೀಸ್ ಅಧಿಕಾರಿಗಳು ಈ ರೀತಿಯಲ್ಲಿ ಸಂಯಮ ಕಳೆದುಕೊಂಡಿದ್ದಲ್ಲದೆ ವಿದ್ಯಾರ್ಥಿಗಳನ್ನು ಅವಾಚ್ಯ ಪದಗಳಿಂದ ನಿಂದಿಸಿದ ಪ್ರಾಂಶುಪಾಲರ ಪರವಾಗಿ ನಿಂತಿರುವುದನ್ನು ಮಾಧ್ಯಮದ ಮೂಲಕ ಗಮನಿಸಲಾಗಿದೆ.ಇದು ದುರದೃಷ್ಟಕರ ಸಂಗತಿಯಾಗಿದೆ. ತಪ್ಪಿತಸ್ಥರ ವಿರುದ್ದ ಸೂಕ್ತ ವಿಚಾರಣೆ ನಡೆಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಆನಂದಾಶ್ರಮ ಕಾನ್ವೆಂಟ್ ಪ್ರೌಢಶಾಲೆಗೆ ವೀರಾಗ್ರಣಿ ಪ್ರಶಸ್ತಿ