ಭಟ್ಕಳ (Bhatkal) : ತಾಲೂಕಿನ ಗೊಂಡ ಸಮುದಾಯದವರ ಆರಾಧ್ಯ ದೈವ, ಇಲ್ಲಿನ ಕೋಕ್ತಿ ಶ್ರೀ ಜಟಗಾ ಮಹಾಸತಿ ದೇವಿಯ ಜಾತ್ರೆ (Kokti Jathre) ಶ್ರದ್ಧಾ ಭಕ್ತಿ ಸಂಭ್ರಮದೊಂದಿಗೆ ನೆರವೇರಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ತಾಲೂಕಿನಲ್ಲಿ ಮಕರ ಸಂಕ್ರಾಂತಿಯ (Makar Sankranti) ಆನಂತರ ನಡೆಯುವ ಎರಡನೇ ಜಾತ್ರೆ ಇದಾಗಿದೆ. ಕೋಕ್ತಿ ಮಹಾಸತಿ ದೇವಸ್ಥಾನದಲ್ಲಿ ಪಟ್ಟಣದ ಮಧ್ಯದಲ್ಲಿದೆ. ಇದು ಇಂದಿಗೂ ಗ್ರಾಮೀಣ ಪದ್ಧತಿಯಲ್ಲೇ ನಡೆದುಕೊಂಡು ಬರುತ್ತಿದೆ. ಗೊಂಡ (Gond) ಸಮಾಜದ ಜಾನಪದ ಶೈಲಿಯಲ್ಲಿ ಈ ಜಾತ್ರೆ ನಡೆಯುತ್ತಿದೆ.
ವಿಡಿಯೋ ಸಹಿತ ಇದನ್ನೂ ಓದಿ: Under Pass/ ಗ್ರಾಮಸ್ಥರಿಂದ ಸಂಸದ ಕಾಗೇರಿ ತರಾಟೆಗೆ
ದೇವಸ್ಥಾನ ಪ್ರಮುಖವಾಗಿ ಗೊಂಡ ಸಮಾಜದವರೇ ನಂಬಿಕೊಂಡು ಬಂದ ಸ್ಥಳವಾಗಿದೆ. ಪ್ರತಿ ವರ್ಷದ ಜಾತ್ರೆಯಲ್ಲಿಯೂ ಸಂಪ್ರದಾಯಕ್ಕೆ ಧಕ್ಕೆ ಬರದಂತೆ ಜಾತ್ರೆ ಆಚರಿಸಿಕೊಂಡು ಬರಲಾಗುತ್ತಿದೆ. ಪಟ್ಟಣದ ಮಧ್ಯದಲ್ಲಿ ಈ ಜಾತ್ರೆ ನಡೆಯುತ್ತಿದ್ದರೂ ಗ್ರಾಮೀಣ ಭಾಗದ ಜನರೇ ಹೆಚ್ಚಾಗಿ ಇಲ್ಲಿ ಭಾಗವಹಿಸುತ್ತಾರೆ.
ಇದನ್ನೂ ಓದಿ: ಮುರ್ಡೇಶ್ವರದಲ್ಲಿ ಮದ್ಯ ಮಾರಾಟ ನಿಷೇಧ
ಜಾತ್ರೆಯಲ್ಲಿ ಕಬ್ಬಿನ ಕುಡಿಯನ್ನು ಖರೀದಿಸುವುದು ಒಂದು ಪದ್ಧತಿಯಾಗಿದೆ. ಇಲ್ಲಿ ಕಬ್ಬಿನ ಕುಡಿಯನ್ನು ಕೊಂಡು ಕೊಳ್ಳುವುದಕ್ಕೂ ಒಂದು ವಿಶೇಷ ಮಹತ್ವವಿದೆ. ಸುಗ್ಗಿಯ ಸಂಭ್ರಮದಲ್ಲಿರುವ ರೈತರು ತಮ್ಮ ಬಿಡುವಿನ ವೇಳೆಯಲ್ಲಿ ಜಾತ್ರೆಯಲ್ಲಿ ಬಂದು ಮನೆ ಮನೆಗೆ ಕಬ್ಬು ಕೊಂಡೊಯ್ಯಲಿ, ಆ ಕುಡಿಯು ಸಹಸ್ರ ಕುಡಿಯಾಗಿ ಮನೆ ಯಜಮಾನನ ಸಂಪತ್ತು ವೃದ್ಧಿಯಾಗಲಿ ಎನ್ನುವುದು ಹಿಂದಿನಿಂದ ಬಂದ ಪದ್ಧತಿಯಾಗಿದೆ. ಆದರೆ ಈ ಕಬ್ಬಿನ ಕುಡಿ ಖರೀದಿ ಇತ್ತೀಚಿನ ವರ್ಷಗಳಲ್ಲಿ ಕಡಿಮೆಯಾಗುತ್ತ ಸಾಗಿದೆ.
ಇದನ್ನೂ ಓದಿ: ಜ.೧೮ರಂದು ದಂಡಿನ ದುರ್ಗಾದೇವಿ ವರ್ಧಂತಿ ಮಹೋತ್ಸವ
ಇನ್ನೊಂದು ಪ್ರತೀತಿಯೆಂದರೆ ಹಿಂದಿನ ಜಾತ್ರೆಯ ನಂತರ ಈಗಿನ ಜಾತ್ರೆಯ ತನಕ ಮದುವೆಯಾಗಿರುವ ಗೊಂಡ ಸಮಾಜದ ನೂತನ ವಧು-ವರರು ಜಾತ್ರೆಗೆ ಬಂದು ಇಲ್ಲಿನ ಕೋಕ್ತಿ ಕೆರೆಯಲ್ಲಿ ಸ್ನಾನ ಮಾಡಿ ದೇವರ ದರ್ಶನವನ್ನು ಪಡೆಯುತ್ತಾರೆ. ವಾಪಾಸು ಮನೆಗೆ ಹೋಗುವಾಗ ಕಬ್ಬಿನ ಕುಡಿಯನ್ನು ತೆಗೆದುಕೊಂಡು ಹೋದರೆ ಅವರ ಕುಟುಂಬದ ಕುಡಿ ಮುಂದುವರಿಯುವುದು ಎನ್ನುವ ನಂಬಿಕೆ ಕೂಡಾ ಇಲ್ಲಿ ಅಡಗಿದೆ.
ವಿಡಿಯೋ ಸಹಿತ ಇದನ್ನೂ ಓದಿ: ಅಳಿವೆಕೋಡಿ ಮಾರಿ ಜಾತ್ರೆಯ ಅದ್ದೂರಿ ವಿಸರ್ಜನಾ ಮೆರವಣಿಗೆ
ಆದರೆ ಕಳೆದ ಹಲವಾರು ವರ್ಷಗಳಿಂದ ಕೋಕ್ತಿ ಕೆರೆಯಲ್ಲಿ ಹೂಳು ತುಂಬಿ ನೀರು ಕಲುಷಿತಗೊಂಡಿದೆ. ಸ್ನಾನ ಮಾಡಲು ಯೋಗ್ಯವಾಗಿಲ್ಲವಾದ್ದರಿಂದ ಸ್ನಾನ ಮಾಡುವ ಪದ್ಧತಿಯನ್ನು ನಿಲ್ಲಿಸಲಾಗಿದೆ. ಹಲವರು ನಂಬಿಕೆ ಪ್ರತೀಕವಾಗಿ ಕೆರೆಯ ನೀರನ್ನು ಪ್ರೋಕ್ಷಣ ಮಾಡಿಕೊಂಡು ದೇವರಲ್ಲಿ ಪ್ರಾರ್ಥಿಸುತ್ತಾರೆ.
ಇದನ್ನೂ ಓದಿ: ಎಸ್ ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ಸಾಧನೆ
ಇಲ್ಲಿ ಮಹಾಸತಿ ದೇವರ ಪೂಜೆ, ಶೇಡಿ ಮರದ ಪೂಜೆ ವಿಶೇಷ ಹರಕೆಯಾಗಿದೆ. ಬಂದರ ರಸ್ತೆಯಲ್ಲಿರುವ ಗುಡಿ ಜಟಗಾ ದೇವಸ್ಥಾನದಲ್ಲಿ ರುಂಡ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದಿಂದ ದೈವಾರಾಧನೆ ಮತ್ತು ಗೊಂಡರ ಸಾಂಪ್ರದಾಯಿಕ ಡಕ್ಕೆ ಕುಣಿತದೊಂದಿಗೆ ರುಂಡಗಳನ್ನು ಮೆರವಣಿಗೆಯ ಮೂಲಕ ಕೋಕ್ತಿ ದೇವಸ್ಥಾನಕ್ಕೆ ತರಲಾಯಿತು. ಕೋಕ್ತಿಯಲ್ಲಿ ಶ್ರೀ ಮಹಾಸತಿ ಪಾದದಡಿ ರುಂಡಗಳನ್ನಿಟ್ಟು ಪೂಜೆ ಸಲ್ಲಿಸಲಾಯಿತು.
ಜಾತ್ರೆಗೆ ಭಕ್ತರು ದೇವಸ್ಥಾನಕ್ಕೆ ಬಂದು ತಮ್ಮ ಹರಕೆ, ಕಾಣಿಕೆಯನ್ನು ಸಲ್ಲಿಸಿದರು.
ಇದನ್ನೂ ಓದಿ: ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ
ಜಾತ್ರೆಯ ಅಂಗವಾಗಿ ಬೆಳಗ್ಗೆ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು.
ರಾತ್ರಿ ಸಭಾ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ನಂತರ ರಾತ್ರಿ ಹಾಸ್ಯಮಯ ವಾಚ್‌ಮ್ಯಾನ್ ನಗೆ ನಾಟಕ
ಪ್ರದರ್ಶನಗೊಂಡಿತು.
ವಿಡಿಯೋ ಸಹಿತ ಇದನ್ನೂ ಓದಿ: ಶೇಡಿ ಮರ ಏರಿದ ಸಹಸ್ರಾರು ಭಕ್ತರು
ದೇವಸ್ಥಾನದ ಆವರಣದಲ್ಲಿ ಜಾತ್ರೆಯ ಮೆರುಗು : ದೇವಸ್ಥಾನದ ಆವರಣದಲ್ಲಿ ಹೂವು, ಹಣ್ಣು, ತಿಂಡಿ-ತಿನಿಸು, ಆಟಿಕೆ ಸಾಮಾನುಗಳು, ಸಿಹಿ ತಿನಿಸುಗಳ ಅಂಗಡಿಗಳು ಕೋಕ್ತಿ ಜಾತ್ರೆಗೆ (Kokti Jathre) ವಿಶೇಷ ಮೆರುಗನ್ನು ನೀಡಿದವು, ಗೊಂಡ ಸಮುದಾಯದವರಲ್ಲದೆ ಇತರೇ ವರ್ಗದವರು ಕೂಡ ಜಾತ್ರೆಯಲ್ಲಿ ಪಾಲ್ಗೊಂಡು ದೇವರಿಗೆ ಪೂಜೆ ಸಲ್ಲಿಸಿದರು.
ಇದನ್ನೂ ಓದಿ: ‘ಶಿರಾಲಿಯ ಶಕ್ತಿ – ಶ್ರೀ ಹಾದಿ ಮಾಸ್ತಿ’ ಪುಸ್ತಕ ಲೋಕಾರ್ಪಣೆ
ಜಾತ್ರೆಯ ಹಿನ್ನೆಲೆಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಗೊಂಡ ಸಮಾಜದ ಅಭಿವೃದ್ಧಿ ಸಂಘದ ಅಧ್ಯಕ್ಷ ನಾರಾಯಣ ಗೊಂಡ, ಪದಾಧಿಕಾರಿಗಳು, ಸಮಾಜದ ಮುಖಂಡ ಸೋಮಯ್ಯ ಗೊಂಡ, ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ: Readers letter/ ಉತ್ತರ ಕನ್ನಡ ಜಿಲ್ಲೆಯ ಬಗ್ಗೆ ತಾತ್ಸಾರವೇಕೆ?