ಕಾರವಾರ (Karwar): ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ (KUDA) ನಗರ ಯೋಜನಾ ಸಮಿತಿಯ ಸಹಾಯಕ ನಿರ್ದೇಶಕ ಶಿವಾನಂದ ಎಚ್ ತಂಬ್ರಣ್ಣನವರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ (Lokayukta raid).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕಾಜುಬಾಗದಲ್ಲಿರುವ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದಾರೆ. ಖಾಸಗಿ ಎಂಜಿನಿಯರ್ ಪ್ರಸನ್ನ ನಾಯ್ಕ ಎಂಬುವವರಿಂದ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ತಂಡ ಬಂಧಿಸಿದೆ. ಪ್ರಸನ್ನ ನಾಯ್ಕ ದೂರಿನ ಆಧಾರದ ಮೇಲೆ ಲೋಕಾಯುಕ್ತ ಎಸ್‌ಪಿ ಕುಮಾರಚಂದ್ರ, ಲೋಕಾಯುಕ್ತ ನಿರೀಕ್ಷಕ ವಿನಾಯಕ ಭಿಲ್ಲವ ಮತ್ತು ತಂಡ ಕಾರ್ಯಾಚರಣೆ ನಡೆಸಿತ್ತು. ಮನೆ ನಿರ್ಮಾಣಕ್ಕೆ ಅನುಮತಿ ನೀಡಲು ಅಧಿಕಾರಿ ಶಿವಾನಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಪ್ರಸನ್ನ ದೂರಿದ್ದಾರೆ. ಜನವರಿಯಲ್ಲಿ ಪರವಾನಿಗೆಗೆ ಅರ್ಜಿ ಸಲ್ಲಿಸಿದ್ದರೂ ಅಧಿಕಾರಿ ಶಿವಾನಂದ ಅದನ್ನು ವಿಲೇವಾರಿ ಮಾಡದೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು’ ಎಂದು ದೂರಲಾಗಿದೆ.
ಇದನ್ನೂ ಓದಿ : Tribute to Sukri Gowda/ ಹಾಲಕ್ಕಿ ಸಂಪ್ರದಾಯ ಜೀವಂತವಾಗಿರಿಸಿದ ಸುಕ್ರಜ್ಜಿ ಕಂಠ