ಭಟ್ಕಳ ಡೈರಿ ವರದಿ

ಕುಮಟಾ: ತಾಲೂಕಿನ ಅಳಕೋಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಮಟಾ–ಶಿರಸಿ ರಾಜ್ಯ ಹೆದ್ದಾರಿಯ ದೇವಿಮನೆ ಘಟ್ಟದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಭಟ್ಕಳದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಚಾಲಕ ಸೇರಿದಂತೆ ೧೯ ಮಂದಿ ಗಾಯಗೊಂಡಿದ್ದಾರೆ.

ಗುರುವಾರ ರಾತ್ರಿ ದೇವಿಮನೆ ಘಟ್ಟದ ಇಳಿಜಾರಿನ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಸವದತ್ತಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಉಡುಪಿ ಡಿಪೋಗೆ ಸೇರಿದ ಬಸ್ ಇದಾಗಿದೆ. ಅಪಘಾತದಲ್ಲಿ ಭಟ್ಕಳದ ಆಜಾದ್‌ನಗರ ನಿವಾಸಿ ಪರ್ವಿನ್ ಭಾನು (೪೦) ಗಂಭೀರವಾಗಿ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿಗೆ ಕರೆದೊಯ್ಯುವ ವೇಳೆ ರಾಗಿಹೊಸಳ್ಳಿ ಬಳಿ ಅವರು ಮೃತಪಟ್ಟಿದ್ದಾರೆ.

ಗಾಯಾಳುಗಳನ್ನು ಕುಮಟಾ ಹಾಗೂ ಶಿರಸಿ ತಾಲೂಕು ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಮಾಹಿತಿ ತಿಳಿದು ಕುಮಟಾ ಪೊಲೀಸ್ ಇನ್ಸ್ಪೆಕ್ಟರ್ ಯೋಗೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :

ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನ

ವೆಂಕಟಾಪುರದಲ್ಲಿ ರಸ್ತೆ ಕಾಮಗಾರಿ ಸ್ಥಗಿತಕ್ಕೆ ಆಗ್ರಹ: ಹಾಡಿ ಜಾಗ ಸಂರಕ್ಷಣೆಗೆ ಮನವಿ