ಭಟ್ಕಳ (Bhatkal): ತಾಲೂಕಿನ ಮುಟ್ಟಳ್ಳಿ ಪಂಚಾಯತಿ ವ್ಯಾಪ್ತಿಯಲ್ಲಿ ಭೂಕುಸಿತದ ಭೀತಿ (Landslide threat) ಎದುರಾಗಿದ್ದು, ಗುಡ್ಡದ ಅಂಚಿನಲ್ಲಿ ಇರುವ ೮ ಕುಟುಂಬಗಳಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಮುಟ್ಟಳ್ಳಿ ಪಂಚಾಯಿತಿ ಅಭಿವೃದ್ಧಿ ಇಲಾಖೆ ಅಧಿಕಾರಿ ರಾಜೇಶ್ವರಿ ಚಂದಾವರ ನೋಟೀಸ್ ನೀಡಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಮುಟ್ಟಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಗುಡ್ಡದ ಅಂಚಿನಲ್ಲಿ ಮನೆ ಕುಸಿದು ೨೦೨೨ರಲ್ಲಿ ನಾಲ್ವರು ಮೃತಪಟ್ಟಿದ್ದರು. ಈಗಾಗಲೆ ತಾಲೂಕಾಡಳಿತದ ವತಿಯಿಂದ ಗುಡ್ಡ ಕುಸಿತದ ಪ್ರದೇಶ ಹಾಗೂ ಸುತ್ತಲಿನ ಪ್ರದೇಶದಲ್ಲಿನ ೧೬ ಮನೆಗಳಿಗೆ ನೋಟೀಸ್ ನೀಡಲಾಗಿತ್ತು.

ಇದನ್ನು ಓದಿ: Table tennis/ ಟೇಬಲ್ ಟೆನ್ನಿಸ್ ಪಂದ್ಯಾವಳಿ ಸಂಪನ್ನ

ಜೂ ೧೬ರಂದು ಬೆಂಗಳೂರು ಮತ್ತು ಕಾರವಾರದಿಂದ ಪರಿಣಿತ ಭೂಮಿತಿ ಶಾಸ್ತಜ್ಞರು ಸ್ಥಳಕ್ಕೆ ಬಂದು ಪರೀಶೀಲನೆ ನಡೆಸಿದ್ದರು. ಅವರು ನೀಡಿದ ಜಿಎಸ್‌ಐ ವರದಿಯಂತೆ ಪ್ರಸ್ತುತ ಪ್ರದೇಶದಲ್ಲಿ ಭೂಕುಸಿತವಾಗುವ ಸಂಭವ (Landslide threat) ಇದೆ ಎಂದು ಎಚ್ಚರಿಸಿದ್ದಾರೆ. ಅಲ್ಲಿನ ಪ್ರದೇಶವೂ ವಾಸ್ತವ್ಯಕ್ಕೆ ಯೋಗ್ಯವಾಗಿಲ್ಲ ಎಂದು ವರದಿ ನೀಡಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ ಭಾರಿ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಡಿಯೋ ಸಹಿತ ಇದನ್ನು ಓದಿ: Bike Accident/ ಐ ಆರ್ ಬಿ ಹೊಂಡಕ್ಕೆ ಬಿದ್ದ ಬೈಕ್ ಸವಾರ

ಈ ಕುರಿತು ಮುಟ್ಟಳ್ಳಿ ಗ್ರಾ ಪಂ ಮುಂಗಾರು ವಿಪತ್ತು ನಿರ್ವಹಣಾ ಪೂರ್ವ ಸಿದ್ದತಾ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಸುರಕ್ಷತೆ ಹಾಗೂ ಕಾಳಜಿ ದೃಷ್ಟಿಯಿಂದ ಮಳೆಗಾಲ ಮುಗಿಯುವ ತನಕ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ರಾಜೇಶ್ವರಿ ಚಂದಾವರ, ನೋಡಲ್ ಅಧಿಕಾರಿ ಶ್ರವಣ ಕುಮಾರ, ಪಂಚಾಯತಿ ಅಧ್ಯಕ್ಷೆ ರಜನಿ ನಾಯ್ಕ ಮತ್ತು ಅವರ ತಂಡ ಆಯಾ ಮನೆಗಳಿಗೆ ತೆರಳಿ ನೋಟಿಸ್ ನೀಡಿದೆ.

ವಿಡಿಯೋ ಸಹಿತ ಇದನ್ನು ಓದಿ: cochin shipyard/ ಕಡಲ ತೀರದಲ್ಲಿ ಬಾರ್ಜ್‌ ಪ್ರತ್ಯಕ್ಷ

ಸ್ಥಳೀಯರ ಆಕ್ರೋಶ :ಕಳೆದ ಎರಡು ವರ್ಷಗಳಿಂದ ಭಾರಿ ಮಳೆಯಾಗುವ ಸಂದರ್ಭದಲ್ಲಿ ನೀವು ಬಂದು ಇಲ್ಲಿಂದ ಸ್ಥಳಾಂತರಗೊಳ್ಳುವತೆ ನೋಟೀಸ್ ನೀಡುತ್ತೀರಿ. ಸುರಕ್ಷಿತ ಸ್ಥಳ ಯಾವುದು? ನಾವು ಎಲ್ಲಿ ಹೋಗಬೇಕು?ಏನು ಮಾಡಬೇಕು ಎಂದು ಹೇಳುವದಿಲ್ಲ. ಏಕಾಏಕಿ ನಾವು ಇಲ್ಲಿಂದ ಎಲ್ಲಿಗೆ ತೆರಳಬೇಕು? ಲಕ್ಷಗಟ್ಟಲೆ ಹಣ ಖರ್ಚು ಮಾಡಿ ನಿರ್ಮಿಸಿದ ಮನೆಯನ್ನು ಏನು ಮಾಡಬೇಕು? ಪರ್ಯಾಯವಾಗಿ ವ್ಯವಸ್ಥೆ ಕಲ್ಪಿಸದೆ, ಅಪಾಯ ಇದೆ ಇಲ್ಲಿಂದ ತೆರಳಿ ಎಂದರೆ ಏನು ಮಾಡಬೇಕು ಎಂದು ನೋಟೀಸ್ ನೀಡಲು ಬಂದ ಅಧಿಕಾರಿಗಳ ಎದುರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಗಾಲದ ಮೊದಲೆ ಈ ಕುರಿತು ಚರ್ಚೆ ನಡೆಸಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಿತ್ತು ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿ: Plantation/ ಮನೆಗೊಂದು ಗಿಡ ಅಭಿಯಾನ ಯಶಸ್ವಿ 

ಈ ಸಂದರ್ಭದಲ್ಲಿ ಪಂಚಾಯತಿ ಮಾಜಿ ಅಧ್ಯಕ್ಷ ಶೇಷಗಿರಿ ನಾಯ್ಕ, ಸದಸ್ಯೆ ಲಕ್ಷ್ಮಿ ನಾಯ್ಕ, ಗ್ರಾಮ ಆಡಳಿತ ಅಧಿಕಾರಿ ಶಬಾನ ಬಾನು, ಗ್ರಾಮ ಸಹಾಯಕ ಮಂಜು ನಾಯ್ಕ, ಇತರರು ಇದ್ದರು.

ಇದನ್ನು ಓದಿ: house theft/ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು