ಭಟ್ಕಳ: ತಾಲೂಕಿನ ಮುಠ್ಠಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಸರ್ಗ ಇಕೋ ಕ್ಲಬ್ ವತಿಯಿಂದ ಆಯೋಜಿಸಿದ್ದ ಉಪನ್ಯಾಸ (Lecture) ಕಾರ್ಯಕ್ರಮವನ್ನು ಮಕ್ಕಳ ತಜ್ಞ ಡಾ ಚೇತನ್ ಕಲ್ಕೂರ ಅವರು ಉದ್ಘಾಟಿಸಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಉಪನ್ಯಾಸದಲ್ಲಿ (lecture) ಮಾತನಾಡಿದ ಅವರು, ಮಗುವಿನ ಸಮಗ್ರ ಬೆಳವಣಿಗೆಯಲ್ಲಿ ತಂದೆ–ತಾಯಿಯ ಪಾತ್ರ ಅತ್ಯಂತ ಮಹತ್ವದ್ದೆಂದು ತಿಳಿಸಿದರು. ಬಳಿಕ ಶಾಲಾ ಮಕ್ಕಳಿಗೆ ಸ್ವಚ್ಛತೆ, ಪರಿಸರ ಕಾಳಜಿ, ಜಂಕ್ ಫುಡ್ ಹಾಗೂ ಮೊಬೈಲ್ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
ವಿಡಿಯೋ ಸಹಿತ ಇದನ್ನು ಓದಿ: car hits scooter/ ಸ್ಕೂಟರ್ಗೆ ಕಾರು ಡಿಕ್ಕಿಯಾಗಿ ಓರ್ವ ಸಾವು, ಮತ್ತೊಬ್ಬಗೆ ಗಾಯ; ವಿಡಿಯೋ ವೈರಲ್
ಈ ಸಂದರ್ಭದಲ್ಲಿ ಶಾಲೆಯ ಎಸ್ಡಿಎಂಸಿ ವತಿಯಿಂದ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಅನಂತ ನಾಯ್ಕ, ಉಪಾಧ್ಯಕ್ಷೆ ಶೈಲಾ ನಾಯ್ಕ, ಗ್ರಾಮ ಪಂಚಾಯತ್ ಅಧ್ಯಕ್ಷೆ ರಜನಿ ನಾಯ್ಕ, ಸದಸ್ಯ ಶೇಷಗಿರಿ ನಾಯ್ಕ, ಡಯಟ್ ಕುಮಟಾದ ಉಪನ್ಯಾಸಕರಾದ ಎಸ್.ಪಿ. ಭಟ್, ಸವಿತಾ ನಾಯ್ಕ, ವೀಣಾ ಭಟ್, ಮುಖ್ಯ ಶಿಕ್ಷಕಿ ಗಂಗಾ ಮೊಗೇರ, ಶಿಕ್ಷಕರಾದ ಜಯಶ್ರೀ ಆಚಾರಿ, ವಿಜಯಕುಮಾರ ನೆರ್ವೇಕರ್, ಲತಾ ಕೆ ಎಂ, ದೀಪಾ ದೇವಾಡಿಗ, ನೂತನ ನಾಯ್ಕ, ಎಸ್ ಡಿ ಎಂ ಸಿ ಸದಸ್ಯರು, ವಿದ್ಯಾರ್ಥಿಗಳು, ಪಾಲಕರು, ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇದನ್ನು ಓದಿ: Murudeshwar/ ಅಪರಿಚಿತ ಹೆಂಗಸಿನ ಮೃತದೇಹ ಪತ್ತೆ



