ಭಟ್ಕಳ ಡೈರಿ ವರದಿ
ಭಟ್ಕಳ: ಭಾರತೀಯ ಜೀವ ವಿಮಾ ನಿಗಮದ (LIC) ೭೦ನೇ ವಿಮಾ ಸಪ್ತಾಹದ ಅಂಗವಾಗಿ ಭಟ್ಕಳದಲ್ಲಿ ಪರಿಸರ ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮ ನಡೆಯಿತು. ‘ಹಸಿರು ಭಾರತ’ದ ಆಶಯ ಹಾಗೂ ಎಲ್‌ಐಸಿಯ ಕಾರ್ಪೊರೇಟ್ ESG ಮಾರ್ಗಸೂಚಿಯಂತೆ ಹನುಮಾನನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಬೃಹತ್ ವೃಕ್ಷಾರೋಪಣ ಕಾರ್ಯಕ್ರಮ ಆಯೋಜಿಸಲಾಗಿತ್ತು.
೧೫೦ ಸಸಿಗಳ ನೆಡುವಿಕೆ: ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಎಲ್‌ಐಸಿ ಭಟ್ಕಳ ಶಾಖಾ ವ್ಯವಸ್ಥಾಪಕ ಗೋಪಾಲಕೃಷ್ಣಮೂರ್ತಿ, ಶಾಲಾ ಆವರಣದಲ್ಲಿ ವಿವಿಧ ಜಾತಿಯ ೧೫೦ ಸಸಿಗಳನ್ನು ನೆಡುವ ಮೂಲಕ ಹಸಿರು ಆಂದೋಲನಕ್ಕೆ ಕೈಜೋಡಿಸಿದರು. ಪರಿಸರ ಸಂರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಹಸಿರು ವಾತಾವರಣ ನಿರ್ಮಿಸುವ ಉದ್ದೇಶದಿಂದ ಸಸಿಗಳನ್ನು ನೆಡಲಾಯಿತು.
ಸಮಾಜಮುಖಿ ಕಾರ್ಯಗಳಿಗೆ ಒತ್ತು:
ಈ ಸಂದರ್ಭದಲ್ಲಿ ಮಾತನಾಡಿದ ಎಲ್‌ಐಸಿ OBC ಎಂಪ್ಲಾಯೀಸ್ ವೆಲ್ಫೇರ್ ಅಸೋಸಿಯೇಷನ್‌ನ ವಲಯ ಕಾರ್ಯಾಧ್ಯಕ್ಷ ವಿಜಯಕುಮಾರ್ ಗಂಗಾಪುತ್ರ, ಉದ್ಯೋಗಿಗಳ ಹಿತರಕ್ಷಣೆಯ ಜೊತೆಗೆ ಸಮಾಜಮುಖಿ ಹಾಗೂ ಪರಿಸರ ಕಾಳಜಿಯ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಸಂಘಟನೆಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಉತ್ತಮ ಸಂದೇಶವನ್ನು ಸಾರುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ಇದನ್ನೂ ಓದಿ :
ಬೊಬ್ಬರ್ಯ ದೈವಸ್ಥಾನ ಅಭಿವೃದ್ಧಿಗೆ ಧರ್ಮಸ್ಥಳದ ಹಸ್ತ: ₹೧ ಲಕ್ಷ ಅನುದಾನ
raksha bandhan/ ವಿದ್ಯಾರ್ಥಿಗಳಲ್ಲಿ ಬಾಂಧವ್ಯ ಬೆಳೆಸಿದ ರಕ್ಷಾ ಬಂಧನ
agricultural road/ ರೈತರ ಕೃಷಿ ರಸ್ತೆಗೆ ಅಡ್ಡಿ ಆರೋಪ: ತಹಶೀಲ್ದಾರ ಸ್ಥಳ ಪರಿಶೀಲನೆಗೆ ಆಗ್ರಹ
