ಭಟ್ಕಳ(Bhatkal) : ಲಂಚ ಸ್ವೀಕಾರದ ಆರೋಪದ ಮೇಲೆ  ಭಟ್ಕಳ ಪುರಸಭೆ (Bhatkal TMC) ಮುಖ್ಯಾಧಿಕಾರಿ (Chief officer) ನೀಲಕಂಠ ಮೇಸ್ತ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ (Lokayukta raid).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಮೊಹ್ಮದ ಇದ್ರಿಸ್ ಮೋಹತೇಷಾಮ್ ಎನ್ನುವವರ ನೀಡಿದ ದೂರಿನ ಆಧಾರದ ಮೇಲೆ ಶುಕ್ರವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ (Lokayukta raid). ಕಾರವಾರ (karwar) ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ಹಾಗೂ ಪ್ರಭಾರಿ ಲೋಕಾಯುಕ್ತ ಡಿವೈಎಸ್ಪಿ ವಿನಾಯಕ ಬಿಲ್ಲವ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಒಳಚರಂಡಿ ಸಂಪರ್ಕಕ್ಕೆ ಸಂಬಂಧಪಟ್ಟ ವಿಷಯಕ್ಕೆ ಲಂಚ ಸ್ವೀಕರಿಸುತ್ತಿದ್ದರು ಎಂದು ಹೆಳಲಾಗುತ್ತಿದೆ.

ಇದನ್ನೂ ಓದಿ :  ಚುಟುಕು ಕ್ರೀಡಾ ಹಬ್ಬದಲ್ಲಿ ಮಕ್ಕಳ ಕಲರವ

ಸದ್ಯ ಲೋಕಾಯುಕ್ತ ಅಧಿಕಾರಿಗಳು ಪುರಸಭೆ ಕಚೇರಿಯಲ್ಲಿ ಮುಖ್ಯಾಧಿಕಾರಿ ನೀಲಕಂಠ ಮೇಸ್ತರನ್ನು ವಿಚಾರಣೆ ನಡೆಸುತ್ತಿದ್ದಾರೆ. ಒಳಚರಂಡಿ ಜೋಡಣೆಗೆ ಶುಕ್ರವಾರ ೫೦ ಸಾವಿರ ರೂ. ನೀಡಿದ್ದೇನೆ. ಈ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ ಎಂದು ದೂರುದಾರ ತಿಳಿಸಿದ್ದಾರೆ. ದಾಳಿಯಲ್ಲಿ ಪ್ರಸಾದ ಪನ್ನೆಕರ ಹಾಗೂ ೨೦ ಜನ ಪಿ.ಐ ಸಿಬ್ಬಂದಿ ಪಾಲ್ಗೊಂಡಿದ್ದರು. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಈ ಸುದ್ದಿಯ ವಿಡಿಯೋವನ್ನು ಯೂಟ್ಯೂಬ್ ಚಾನೆಲ್ಇನ್ಸ್ಟಾಗ್ರಾಂನಲ್ಲಿ ಮತ್ತು ಫೇಸ್‌ಬುಕ್‌ ನಲ್ಲಿ ವೀಕ್ಷಿಸಬಹುದು.