ಭಟ್ಕಳ (Bhatkal): ರಸಾಯನಿಕ (Extra Neutral Ethanol chemical) ತುಂಬಿದ ಲಾರಿಯೊಂದು (chemical Lorry) ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಬಸ್ತಿಯಲ್ಲಿ ರವಿವಾರ ಮುಂಜಾನೆ ವೇಳೆಗೆ ನಡೆದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಪುಣೆಯಿಂದ (Pune) ಕೇರಳದ (Kerala) ತ್ರಿಶೂರಿಗೆ ಹೊರಟಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಸಣ್ಣ ಪುಟ್ಟ ಗಾಯಗಳಾಗಿವೆ. ರಾಸಾಯನಿಕ ತುಂಬಿದ ಲಾರಿಯಾಗಿರುವುದರಿಂದ (chemical lorry) ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಕರೆ ಮಾಡಿ ಮಾಹಿತಿ ತಿಳಿಸಲಾಯಿತು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಯಾವುದೆ ತೊಂದರೆಯಾಗದಂತೆ ಫೋಮ್ (magnesium sulfate) ಸಿಂಪಡಿಸಿದರು.
ವಿಡಿಯೋ ಸಹಿತ ಇದನ್ನು ಓದಿ : Fashion show/ ಭಟ್ಕಳದ ಕುವರಿ ಮಿಸ್ ಗ್ರ್ಯಾಂಡ್ ಸೌತ್ ಇಂಡಿಯಾ
ಈ ಕಾರ್ಯಾಚರಣೆಯಲ್ಲಿ ಪ್ರಭಾರ ಅಗ್ನಿಶಾಮಕ ಠಾಣಾಧಿಕಾರಿ ಮೋಹನ್ ಶೆಟ್ಟಿ, ಸಿಬ್ಬಂದಿ ಗಜಾನನ ದೇವಾಡಿಗ, ಸುಧಾಕರ ದೇವಾಡಿಗ, ಶಿವಪ್ರಸಾದ ನಾಯ್ಕ, ನಾರಾಯಣ ಪಟಗಾರ ಇದ್ದರು.
ಈ ಸುದ್ದಿಯ ವಿಡಿಯೋವನ್ನು ಯೂಟ್ಯೂಬ್, ಇನ್ಸ್ಟಾಗ್ರಾಂ ಮತ್ತು ಫೇಸ್‌ಬುಕ್ ನಲ್ಲಿ ವೀಕ್ಷಿಸಬಹುದು.
ಇದನ್ನು ಓದಿ : lorry collision/ ಲಾರಿಗೆ ಡಿಕ್ಕಿಯಾಗಿ ಬೈಕ್ ಸವಾರರಿಗೆ ಗಾಯ



