ಭಟ್ಕಳ: ತಾಲೂಕಿನ ಪುರವರ್ಗದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ (government school) ಆವರಣದಲ್ಲಿ ಆಯೋಜಿಸಿದ್ದ ಮಕ್ಕಳ ಸಂತೆ ಸಾರ್ವಜನಿಕರ ಗಮನ ಸೆಳೆಯಿತು. ತರಕಾರಿಗಳು, ಹಣ್ಣುಗಳು ಸೇರಿದಂತೆ ವಿವಿಧ ವಸ್ತುಗಳನ್ನು ಮಾರಾಟ ಮಾಡುವಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಆತ್ಮವಿಶ್ವಾಸ ಹಾಗೂ ಸಂವಹನ ಕೌಶಲ್ಯ ನೈಜ ವಾರದ ಸಂತೆಯನ್ನೇ ನೆನಪಿಸುವಂತಿತ್ತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಶಾಲಾ ಮೈದಾನದಲ್ಲಿ ನಡೆದ ಮಕ್ಕಳ ಸಂತೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ ಚಾಲನೆ ನೀಡಿದರು. ಮಕ್ಕಳಿಗೆ ವ್ಯಾವಹಾರಿಕ ಜ್ಞಾನ, ಲೆಕ್ಕಾಚಾರ ಹಾಗೂ ಗ್ರಾಹಕರೊಂದಿಗೆ ವ್ಯವಹರಿಸುವ ಕೌಶಲ್ಯ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಇದನ್ನುಓದಿ: wild boar/ ಕಾಡು ಹಂದಿ ಅಡ್ಡ ಬಂದು ಆಟೋ ಪಲ್ಟಿ, ಚಾಲಕ ಗಂಭೀರ

ಸಂತೆಯಲ್ಲಿ ವಿದ್ಯಾರ್ಥಿಗಳು ಸ್ಥಳೀಯವಾಗಿ ದೊರಕುವ ತರಕಾರಿಗಳು, ಹಣ್ಣುಗಳು, ಸೊಪ್ಪುಗಳು, ಧಾನ್ಯಗಳು, ಮನೆಯಲ್ಲೇ ತಯಾರಿಸಿದ ತಿಂಡಿ–ತಿನಿಸುಗಳು, ಜ್ಯೂಸ್‌, ಮಜ್ಜಿಗೆ ಸೇರಿದಂತೆ ವಿವಿಧ ವಸ್ತುಗಳನ್ನು ಉತ್ಸಾಹದಿಂದ ಮಾರಾಟ ಮಾಡಿದರು. ಮಾರಾಟದ ಮೂಲಕ ಲಾಭ–ನಷ್ಟದ ಅರಿವು ಪಡೆದು ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಅನುಭವ ಗಳಿಸಿದರು. ಜಂಕ್‌ ಫುಡ್‌ ಮಾರಾಟಕ್ಕೆ ಅವಕಾಶ ನೀಡಲಾಗಿರಲಿಲ್ಲ ಎಂಬುದು ವಿಶೇಷ.

ಇದನ್ನು ಓದಿ: Award/ ಕರ್ನಾಟಕ ಪ್ರೆಸ್ ಕ್ಲಬ್ ನ “ಕರ್ನಾಟಕ ಸೇವಾರತ್ನ ಪ್ರಶಸ್ತಿ”ಗೆ ಆಯ್ಕೆ

ಮಕ್ಕಳ ಪಾಲಕರು, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸಂತೆಗೆ ಆಗಮಿಸಿ ಮಕ್ಕಳಿಂದ ವಸ್ತುಗಳನ್ನು ಖರೀದಿಸಿ ಪ್ರೋತ್ಸಾಹಿಸಿದರು.  ಕೇವಲ ಕುತೂಹಲಕ್ಕೆ ಬಂದ ಹಲವರು ಮಕ್ಕಳೊಂದಿಗೆ ಚರ್ಚಿಸಿ ವ್ಯಾಪಾರ ನಡೆಸಿದ ದೃಶ್ಯಗಳು ಸಂತೆಗೆ ಮತ್ತಷ್ಟು ಮೆರುಗು ತಂದವು.

ಇದನ್ನು ಓದಿ: ChennabhairaDevi/ ‘ರಾಣಿ ಚೆನ್ನಭೈರಾದೇವಿಯವರನ್ನು ಮರೆತಿರುವುದು ಖೇದಕರ’

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ ನಾಯ್ಕ ಮಾತನಾಡಿ, ಇಂತಹ ಚಟುವಟಿಕೆಗಳು ಮಕ್ಕಳ ಆತ್ಮವಿಶ್ವಾಸ ಹಾಗೂ ಜೀವನ ಕೌಶಲ್ಯ ವಿಕಾಸಕ್ಕೆ ನೆರವಾಗುತ್ತವೆ ಎಂದರು. ಶಾಲೆಯ (government school) ಮುಖ್ಯ ಶಿಕ್ಷಕಿ ಹೇಮಲತಾ ಎ. ಮಾತನಾಡಿ, ಪಠ್ಯ ಚಟುವಟಿಕೆಗಳ ಜೊತೆಗೆ ಸಹಪಠ್ಯ ಚಟುವಟಿಕೆಗಳನ್ನು ನಡೆಸುವುದರಿಂದ ಮಕ್ಕಳ ಬೌದ್ಧಿಕ ವಿಕಾಸ ಮತ್ತು ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಲೆಕ್ಕಾಚಾರ ಪ್ರವೃತ್ತಿ ಹಾಗೂ ಗ್ರಾಹಕರೊಂದಿಗೆ ವರ್ತಿಸುವ ವ್ಯವಹಾರ ಜ್ಞಾನ ಹೆಚ್ಚುತ್ತದೆ ಎಂದು ಹೇಳಿದರು.

ಇದನ್ನು ಓದಿ: Biker injured/ ಟ್ಯಾಂಕರ್ ವಾಹನ ಡಿಕ್ಕಿಯಾಗಿ ಬೈಕ್ ಸವಾರಗೆ ಗಾಯ

ಕಾರ್ಯಕ್ರಮದಲ್ಲಿ ಸಿಆರ್ ಪಿ ವಿಜಯ ಬಾಳಿಗಿ ಸೇರಿದಂತೆ ಎಸ್‌ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಪಾಲಕರು ಹಲವರು ಉಪಸ್ಥಿತರಿದ್ದರು.

ಇದನ್ನು ಓದಿ: Achievement Award/ ಕವಿ ಗಾಯಕ ಉಮೇಶ ಮುಂಡಳ್ಳಿಗೆ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ೨೦೨೬