ಭಟ್ಕಳ: ವಿದ್ಯಾರ್ಥಿಗಳಲ್ಲಿ ವ್ಯಾಪಾರ ಮನೋಭಾವನೆ ಬೆಳೆಸುವ ಜೊತೆಗೆ ವ್ಯವಹಾರಿಕ ಜೀವನ ನಿರ್ವಹಣೆಯ ಮಹತ್ವ ತಿಳಿಸುವ ಉದ್ದೇಶದಿಂದ ಭಟ್ಕಳ (Bhatkal) ತಾಲೂಕಿನ ಬೈಲೂರು ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯಲ್ಲಿ (KPS) ಪ್ರಸಕ್ತ ಶೈಕ್ಷಣಿಕ ಸಾಲಿನ ‘ಮಕ್ಕಳ ಸಂತೆ’ (Makkala Santhe) ಕಾರ್ಯಕ್ರಮವನ್ನು ಸಂಭ್ರಮದಿಂದ ನಡೆಸಲಾಯಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಶಾಲಾ ಮೈದಾನದಲ್ಲಿ ನಡೆದ ಮಕ್ಕಳ ಸಂತೆಗೆ (Makkala Santhe) ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ ಚಾಲನೆ ನೀಡಿದರು. ಮಕ್ಕಳಿಗೆ ಲೆಕ್ಕಾಚಾರ, ವ್ಯವಹಾರಿಕ ಜ್ಞಾನ ಹಾಗೂ ಗ್ರಾಹಕರೊಂದಿಗೆ ವ್ಯವಹರಿಸುವ ಕೌಶಲ್ಯ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಅವರು ಹೇಳಿದರು.
ವಿಡಿಯೋ ಸಹಿತ ಇದನ್ನು ಓದಿ: Chariot festival/ ಭಟ್ಕಳದ ಸೋನಾರಕೇರಿಯಲ್ಲಿ ರಥೋತ್ಸವ ವೈಭವ
ಓದು–ಆಟ–ಪಾಠಕ್ಕೆ ಮೀಸಲಾಗಿದ್ದ ಶಾಲಾ ಆವರಣವೇ ಸಂತೆ ರೂಪ ಪಡೆದು, ವಿದ್ಯಾರ್ಥಿಗಳು ತಮ್ಮ ಮನೆಗಳಿಂದ ತಂದ ತಾಜಾ ತರಕಾರಿಗಳು, ಹೂವು, ಸೊಪ್ಪು, ಹಣ್ಣು–ಹಂಪಲು ಹಾಗೂ ವಿವಿಧ ತಿಂಡಿ–ತಿನಿಸುಗಳು ಗಮನ ಸೆಳೆದವು. ಮಕ್ಕಳ ಸಂತೆಯಲ್ಲಿ ವಿದ್ಯಾರ್ಥಿಗಳು ಒಟ್ಟು 80 ಮಳಿಗೆಗಳನ್ನು ತೆರೆದು, ತಿಂಡಿ–ತಿನಿಸುಗಳು, ಶರಬತ್ತು ಹಾಗೂ ಮಜ್ಜಿಗೆಯಂತಹ ತಂಪು ಪಾನೀಯಗಳನ್ನು ಮಾರಾಟ ಮಾಡಿದರು.
ಇದನ್ನು ಓದಿ: car collided/ ಮಹಿಳೆ ಚಲಾಯಿಸುತ್ತಿದ್ದ ಕಾರು ಮೋಟಾರ ಸೈಕಲ್ಲಿಗೆ ಡಿಕ್ಕಿ: ಅರ್ಚಕ ಆಸ್ಪತ್ರೆಗೆ
ಶಿಕ್ಷಕರು ಹಾಗೂ ಪೋಷಕರೇ ಗ್ರಾಹಕರಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಂದ ವಸ್ತುಗಳನ್ನು ಖರೀದಿಸಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ವ್ಯಾಪಾರ ನಡೆಸಿ, ಗ್ರಾಹಕರನ್ನು ಆಕರ್ಷಿಸುವ ಮಾತುಕತೆ ಹಾಗೂ ಲೆಕ್ಕಾಚಾರ ಕೌಶಲ್ಯ ಪ್ರದರ್ಶಿಸಿದರು.
ಇದನ್ನು ಓದಿ: foundation stone/ ಶ್ರೀ ಪಶುಪತಿ ದೇವಸ್ಥಾನದ ನೂತನ ಶಿಲಾಮಯ ಕಟ್ಟಡದ ಶಿಲಾನ್ಯಾಸ ಫೆ ೮ರಂದು
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣ ನಾಯ್ಕ, ಎಸ್‌ಡಿಎಂಸಿ ಅಧ್ಯಕ್ಷ ರಾಮ ನಾಯ್ಕ, ಸಂಪನ್ಮೂಲ ಅಧಿಕಾರಿ ಪೂರ್ಣಿಮಾ ಮೊಗೇರ, ಇಸಿಒ ಅಶೋಕ ಆಚಾರಿ, ಬಿಆರ್‌ಪಿ ಶೇಖ್, ಬೈಲೂರು ಸಿಆರ್‌ಪಿ ವಿಜಯಾ ಬಾಳ್ಗಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಲ್ಲಾಸ ನಾಯ್ಕ, ಕಾರ್ಯದರ್ಶಿ ರಫೀಕ್, ಪ್ರೌಢ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ಗೌಡ ಸೇರಿದಂತೆ ಸ್ಥಳೀಯರು, ಪಂಚಾಯತ್ ಸದಸ್ಯರು, ಪಾಲಕರು ಹಾಗೂ ಕೆಪಿಎಸ್ ಬೈಲೂರಿನ ಶಿಕ್ಷಕರು–ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಧರ್ಮ ನಾಯ್ಕ ಸ್ವಾಗತಿಸಿ, ಮುಖ್ಯ ಶಿಕ್ಷಕರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಕುಸುಮ ಕಾರ್ಯಕ್ರಮ ನಿರೂಪಿಸಿದರು.
ಇದನ್ನು ಓದಿ: arrested/ ಕೋಳಿ ಅಂಕ ಆಡುತ್ತಿದ್ದ ಇಬ್ಬರ ಬಂಧನ



