ಭಟ್ಕಳ: ನಗರದ ವಿದ್ಯಾಂಜಲಿ ಪಬ್ಲಿಕ್ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಮಕ್ಕಳ ಸಂತೆಯಲ್ಲಿ (Makkala Santhe) ತರಕಾರಿಗಳು, ಹಣ್ಣುಗಳು ಸೇರಿದಂತೆ ರಾಷ್ಟ್ರ ಮಟ್ಟದ ಹಾಗೂ ಸ್ಥಳೀಯ ದಿನಪತ್ರಿಕೆಗಳು, ಕನ್ನಡ ಪುಸ್ತಕಗಳ ಮಾರಾಟ ಜನರ ಗಮನಸೆಳೆದಿದ್ದು ಶಾಲೆಯ ವಿನೂತನ ಪ್ರಯತ್ನಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಶಾಲಾ ಮೈದಾನದಲ್ಲಿ ಸೋಮವಾರ ನಡೆದ ಮಕ್ಕಳ ಸಂತೆಗೆ ಭಟ್ಕಳ ಎಜುಕೇಶನ್ ಟ್ರಸ್ಟಿನ ಚೇರ್‌ಮೆನ್ ಡಾ ಸುರೇಶ ನಾಯಕ ಚಾಲನೆ ನೀಡಿದರು. ಮಕ್ಕಳಿಗೆ ವ್ಯವಹಾರಿಕ ಜ್ಞಾನ, ಲೆಕ್ಕಾಚಾರ ಹಾಗೂ ಗ್ರಾಹಕರೊಂದಿಗೆ ವ್ಯವಹರಿಸುವ ಕೌಶಲ್ಯ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂತೆಯಲ್ಲಿ ವಿದ್ಯಾರ್ಥಿಗಳು ಸ್ಥಳೀಯವಾಗಿ ದೊರಕುವ ತರಕಾರಿಗಳು, ಹಣ್ಣುಗಳು, ಸೊಪ್ಪುಗಳು, ಧಾನ್ಯಗಳು, ಮನೆಯಲ್ಲೇ ತಯಾರಿಸಿದ ತಿಂಡಿ-ತಿನಿಸುಗಳು, ಜ್ಯೂಸ್, ಮಜ್ಜಿಗೆ ಸೇರಿದಂತೆ ವಿವಿಧ ವಸ್ತುಗಳನ್ನು ಉತ್ಸಾಹದಿಂದ ಮಾರಾಟ ಮಾಡಿದರು. ಮಾರಾಟದ ಮೂಲಕ ಲಾಭ-ನಷ್ಟದ ಅರಿವು ಪಡೆದು ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಅನುಭವ ಗಳಿಸಿದರು. ಜಂಕ್ ಫುಡ್ ಮಾರಾಟಕ್ಕೆ ಅವಕಾಶ ನೀಡಲಾಗಿರಲಿಲ್ಲ ಎಂಬುದು ವಿಶೇಷ.
firewood/ ಎಲ್‌ಪಿಜಿ ಸಿಲಿಂಡರ್ ಕೊರತೆ: ಉರುವಲಿಗೆ ಹೆಚ್ಚಿದ ಬೇಡಿಕೆ
ಮಕ್ಕಳ ಪಾಲಕರು, ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು ಹಾಗೂ ನಾಗರಿಕರು ಮಕ್ಕಳ ಸಂತೆಗೆ (Makkala Santhe) ಆಗಮಿಸಿ ಮಕ್ಕಳಿಂದ ವಸ್ತುಗಳನ್ನು ಖರೀದಿಸಿ ಪ್ರೋತ್ಸಾಹಿಸಿದರು. ಕೇವಲ ಕುತೂಹಲಕ್ಕೆ ಬಂದ ಹಲವರು ಮಕ್ಕಳೊಂದಿಗೆ ಚರ್ಚಿಸಿ ವ್ಯಾಪಾರ ನಡೆಸಿದ ದೃಶ್ಯಗಳು ಸಂತೆಗೆ ಮತ್ತಷ್ಟು ಮೆರುಗು ತಂದವು. ಶಾಲೆಯ ಮೊದಲ ಮಹಡಿಯಲ್ಲಿ ಆಯೋಜಿಸಲಾಗಿದ್ದ ವಿಜ್ಞಾನಕ್ಕೆ ಸಂಬಂಧಿಸಿದ ಪ್ರದರ್ಶನವನ್ನು ಪಾಲಕರು, ಸಾರ್ವಜನಿಕರು ಕೂತುಹಲದಿಂದ ವೀಕ್ಷಿಸಿದರು.
Consumer awareness program/ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಾಹಕರ ಜಾಗೃತಿ ಕಾರ್ಯಕ್ರಮ
ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಕಾಮತ ಮಾತನಾಡಿ, ಪಠ್ಯ ಚಟುವಟಿಕೆಗಳ ಜೊತೆಗೆ ಸಹಪಠ್ಯ ಚಟುವಟಿಕೆಗಳನ್ನು ನಡೆಸುವುದರಿಂದ ಮಕ್ಕಳ ಬೌದ್ಧಿಕ ವಿಕಾಸ ಮತ್ತು ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಲೆಕ್ಕಾಚಾರ ಪ್ರವೃತ್ತಿ ಹಾಗೂ ಗ್ರಾಹಕರೊಂದಿಗೆ ವರ್ತಿಸುವ ವ್ಯವಹಾರ ಜ್ಞಾನ ಹೆಚ್ಚುತ್ತದೆ ಎಂದು ಹೇಳಿದರು.



