ಭಟ್ಕಳ: ಸಾಮಾಜಿಕ ಜಾಲತಾಣದ ಮೂಲಕ ಮಹಿಳೆಗೆ ಪರಿಚಯ ಮಾಡಿಕೊಂಡು ಅಶ್ಲೀಲ ಸಂದೇಶ ಕಳುಹಿಸಿ, ಖಾಸಗಿ ಫೋಟೊಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಭಟ್ಕಳ ಶಹರ ಪೊಲೀಸ್ ಠಾಣೆಯ ಪೊಲೀಸರು ಆರೋಪಿತನನ್ನು ಬಂಧಿಸಿದ್ದಾರೆ (Man arrested).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಬಂಧಿತನನ್ನು ಹೊನ್ನಾವರ (Honnavar) ತಾಲೂಕಿನ ಮಂಕಿ ಭಾಷಾ ಕಾಲೋನಿ ನಿವಾಸಿ ಮಹ್ಮದ್ ಯುಶಾ ತಂದೆ ಮಹ್ಮದ್ ಸಾಯಿ ಅಬು ಮಹ್ಮದಾ (೩೧) ಎಂದು ಗುರುತಿಸಲಾಗಿದೆ. ಭಟ್ಕಳ (Bhatkal) ಮುಗ್ದುಂ ಕಾಲನಿಯ ಮಹಿಳೆಯೊಂದಿಗೆ ಆರೋಪಿತನು ಸುಮಾರು ಒಂದು ವರ್ಷದ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಮಾಡಿಕೊಂಡು, ಮೊಬೈಲ್ ಸಂಖ್ಯೆ ಪಡೆದು ಸಲುಗೆ ಬೆಳೆಸಿಕೊಂಡಿದ್ದಾನೆ. ನಂತರ ಮಹಿಳೆಯ ಖಾಸಗಿ ಫೋಟೊಗಳನ್ನು ಪಡೆದು, ಪದೇಪದೇ ಕರೆ ಮಾಡಿ ಮಾತನಾಡದಿದ್ದರೆ ಫೋಟೊಗಳನ್ನು ಎಲ್ಲರಿಗೂ ಶೇರ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದಲ್ಲದೆ ಮಹಿಳೆಯ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಗೆ ಕರೆ ಮಾಡಿ ಫೋಟೊಗಳನ್ನು ಹರಿಬಿಡುವುದಾಗಿ ಬೆದರಿಸಿ, ಅವಾಚ್ಯ ಶಬ್ದಗಳಿಂದ ಬೈದು ಮಾನಸಿಕ ಹಿಂಸೆ ನೀಡುತ್ತಿದ್ದನೆಂದು ಆರೋಪಿಸಲಾಗಿದೆ.

ಇದನ್ನು ಓದಿ: Case registered/ ಭಟ್ಕಳದ ಕಾರು ಚಾಲಕ ಸಹಿತ ಹಲವರ ವಿರುದ್ಧ ಹೊನ್ನಾವರದಲ್ಲಿ ಪ್ರಕರಣ ದಾಖಲು

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತ್ವರಿತ ತನಿಖೆ ನಡೆಸಿ ಆರೋಪಿತನನ್ನು ಬೆಂಗಳೂರಿನಲ್ಲಿ (Bengaluru) ಪತ್ತೆಹಚ್ಚಿ ಬಂಧಿಸಿದ್ದಾರೆ (Man arrested). ಕೃತ್ಯಕ್ಕೆ ಬಳಸಿದ್ದ ಎರಡು ಮೊಬೈಲ್‌ಗಳು ಹಾಗೂ ಪೆನ್‌ಡ್ರೈವ್‌ಗಳನ್ನು ಜಪ್ತಿ ಮಾಡಲಾಗಿದೆ. ಜಪ್ತಿಗೊಂಡ ವಸ್ತುಗಳನ್ನು ಎಫ್‌ಎಸ್‌ಎಲ್ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಹೆಚ್ಚಿನ ತನಿಖೆ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: Bike skid/ ನಾಯಿ ಅಡ್ಡ ಬಂದು ಬೈಕ್ ಸ್ಕಿಡ್: ಇಬ್ಬರು ಗಂಭೀರ 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ ಕೃಷ್ಣಮೂರ್ತಿ ಹಾಗೂ ಜಗದೀಶ ಎಂ, ಡಿವೈಎಸ್ಪಿ ಮಹೇಶ್ ಎಂ, ಸಿಪಿಐ ದಿವಾಕರ ಪಿ ಎಂ ಅವರ ನೇತೃತ್ವದಲ್ಲಿ ಪಿಎಸ್‌ಐ ನವೀನ್ ಎಸ್ ನಾಯ್ಕ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಬಂಧಿತ ಆರೋಪಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನು ಓದಿ: Makkala Santhe/ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳ ಸಂತೆ