ಭಟ್ಕಳ (Bhatkal): ಸಿಎಂ ಸಿದ್ದರಾಮಯ್ಯ (CM Siddaramaiah) ಅರ್ಜಿ ವಜಾ (petition dismissal) ಕುರಿತು ಸಚಿವ ಮಂಕಾಳ ವೈದ್ಯ (Minister Mankal Vaidya) ಪ್ರಕ್ರಿಯೆ ನೀಡಿದ್ದಾರೆ. ಹೈಕೋರ್ಟ್ (High court) ಆದೇಶವನ್ನು ನಾವು ಗೌರವಿಸುತ್ತೇವೆ. ಆದರೆ ಅದು ಸತ್ಯ ಎಂದು ನಾನು ಒಪ್ಪಿಕೊಳ್ಳಲು ಸಿದ್ಧನಿಲ್ಲ ಎಂದು ಹೇಳಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಭಟ್ಕಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಂಕಾಳ ವೈದ್ಯ (Minister Mankal Vaidya), ಹೈಕೋರ್ಟ್ ಏನು ತೀರ್ಪು ನೀಡಿದೆ ಎಂದು ಈ ತನಕ ನನ್ನ ಗಮನಕ್ಕೆ ಬಂದಿಲ್ಲ. ನಾನು ಬೆಳ್ಳಿಗ್ಗೆ ೧೦.೩೦ರಿಂದ  ತ್ರೈ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದೆ. ಈಗ ತಾನೇ ಮುಕ್ತಾಯಗೊಂಡಿದೆ. ಹೈಕೋರ್ಟ್ ಏನು ತೀರ್ಪು ನೀಡಿದೆಯೋ ಅದಕ್ಕೆ ನಾವು ತಲೆ ಬಾಗುತ್ತೇವೆ. ನಮ್ಮ ಸಿಎಂ ಯಾವುದೇ ತಪ್ಪು ಮಾಡಿಲ್ಲ ಎಂದು ಘಂಟಾಘೋಷವಾಗಿ ಹೇಳುತ್ತೇನೆ. ಆದರೆ ಹೈಕೋರ್ಟ್ ಆದೇಶ ಸತ್ಯ ಎಂದು ಹೇಳಲು ಸಿದ್ಧನಿಲ್ಲ. ನಾನು ಅದರ ಬಗ್ಗೆ ತಿಳಿದುಕೊಂಡಿದ್ದೇನೆ. ಯಾವುದೇ ರೀತಿಯಲ್ಲಿ ನಮ್ಮ ಮುಖ್ಯಮಂತ್ರಿಗಳು ತಪ್ಪು ಮಾಡಿಲ್ಲ ಎಂದರು.

ಇದರ ವಿಡಿಯೋವನ್ನು ಯೂಟ್ಯೂಬ್ ಚಾನೆಲ್ಇನ್ಸ್ಟಾಗ್ರಾಂನಲ್ಲಿ ಮತ್ತು ಫೇಸ್‌ಬುಕ್‌ ನಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ :  ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಸಚಿವ ವೈದ್ಯ ಭಾಗಿ