ಬೆಂಗಳೂರು (Bengaluru) : ಭಾರತದ ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್ (Manmohan Singh)ನಿಧನಕ್ಕೆ ಕರ್ನಾಟಕ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮೃತರ ((Manmohan Singh)) ಗೌರವಾರ್ಥವಾಗಿ ಡಿ.೨೭ರಂದು ಶುಕ್ರವಾರ ರಾಜ್ಯದಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ, ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಡಿ.೨೬ರಿಂದ ಜ.೧ರವರೆಗೆ ಏಳು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಸರ್ಕಾರದ ರಾಜ್ಯ ಶಿಷ್ಟಾಚಾರ ಉಪ ಕಾರ್ಯದರ್ಶಿ ಎಲಿಷ್ಠ ಆಂಡೋಸ್ ಆದೇಶ ಹೊರಡಿಸಿದ್ದಾರೆ.
ವಿಡಿಯೋ ಸಹಿತ ಇದನ್ನೂ ಓದಿ : ದ್ವೇಷಕ್ಕೆ ಆಹುತಿಯಾಯ್ತಾ ಹಣ್ಣಿನ ಅಂಗಡಿ !