ಭಟ್ಕಳ: ನಗರದ ಮಾರಿಕಾಂಬಾ ದೇಗುಲದಲ್ಲಿ ಮಾರಿಯಮ್ಮನ ಪ್ರತಿಷ್ಠಾಪಿಸುವ ಮೂಲಕ ಪ್ರಸಿದ್ಧ ಮಾರಿ ಜಾತ್ರೆಗೆ ಚಾಲನೆ (Mari Jathre begins) ನೀಡಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಇಂದು (ಆಗಸ್ಟ್ ೫) ಬುಧವಾರದಂದು ಮುಂಜಾನೆ ಮಾರಿ ದೇವಿಯನ್ನು ಭಕ್ತರು ಮೆರವಣಿಗೆಯ ಮೂಲಕ ಇಲ್ಲಿನ ಪೇಟೆ ರಸ್ತೆಯಲಿರುವ ಶ್ರೀ ಮಾರಿಕಾಂಬಾ ದೇವಾಲಯಕ್ಕೆ ಕರೆತಂದರು. ಭಕ್ತರ ಜಯಘೋಷ, ಚಂಡೆ ವಾದ್ಯದೊಂದಿಗೆ ಸಕಲ ಸಂಭ್ರಮದಿಂದ ಮೆರವಣಿಗೆ ನಡೆಯಿತು. ಅದ್ದೂರಿಯಾಗಿ ಕರೆತರಲಾದ ಮಾರಿ ದೇವಿಯ ಮೂರ್ತಿಗೆ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಪ್ರತಿಷ್ಠಾಪಿಸಲಾಯಿತು.
Opportunity/ ಗ್ರಾಮ ಒನ್ ಕೇಂದ್ರ ಆರಂಭಿಸಲು ಅವಕಾಶ
ಮಾರಿಕಾಂಬಾ ದೇವಿಯ ಎದುರಿಗೆ ಗರ್ಭಗುಡಿಯ ಹೊರಗಡೆ ಪ್ರತಿಷ್ಠಾಪನೆ ಮಾಡಿ ಪೂಜಾ ಕೈಂಕರ್ಯಗಳನ್ನು ಆರಂಭಿಸಲಾಗಿದೆ (Mari Jathre begins). ಜೈನ ಸಮುದಾಯದವರು ಮೊದಲ ಪೂಜೆಯನ್ನು ನೆರವೇರಿಸಿದರು. ಪ್ರತಿಷ್ಠಾಪನೆ ಸಂದರ್ಭದಲ್ಲೇ ಭಕ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ದೇವಿಯ ದರ್ಶನ, ಪೂಜಾ ಸೇವೆ, ಹರಕೆ ಸೇವೆ ಆರಂಭಗೊಂಡಿದೆ. ದೇವಿಯ ದರ್ಶನಕ್ಕೆ ಸರತಿ ಸಾಲು, ಹರಕೆ ವ್ಯವಸ್ಥೆ ಮಾಡಲಾಗಿದೆ.
Retirement/ ೩೬ ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಅಂಚೆ ಮೇಲ್ವಿಚಾರಕ
ಬುಧವಾರ ಹೊರವೂರಿನವರು ಹಾಗೂ ಗುರುವಾರ ಸ್ಥಳೀಯರು ದೇವಿಗೆ ಪೂಜೆ ಸಲ್ಲಿಸಲಿದ್ದು, ಗುರುವಾರ ಸಂಜೆ ಭವ್ಯ ಮೆರವಣಿಗೆಯೊಂದಿಗೆ ಜಾಲಿ ಸಮುದ್ರದಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದೆ. ಭಕ್ತರು ತಲೆ ಮೇಲೆ ದೇವಿ ಮೂರ್ತಿಯನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಲಿದ್ದಾರೆ. ಜಾಲಿಕೋಡಿ ಸಮುದ್ರದಲ್ಲಿ ಮೂರ್ತಿ ವಿಸರ್ಜನೆ ಮಾಡುವ ಮೂಲಕ ಮಾರಿ ಜಾತ್ರೆ ಮುಕ್ತಾಯಗೊಳ್ಳಲಿದೆ. ಜಾತ್ರೆಯ ಸಡಗರದ ನಡುವೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಉತ್ತರ ಕನ್ನಡ (Uttara Kannada) ಜಿಲ್ಲಾ ಎಸ್ಪಿ ದೀಪನ ಎಂ ಎನ್ ಅವರ ನೇತೃತ್ವದಲ್ಲಿ ಭಟ್ಕಳದಲ್ಲಿ (Bhatkal);ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
polling stations/ ಭಟ್ಕಳ ಸಹಿತ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಲಿರುವ ಮತಗಟ್ಟೆಗಳು
ತವರುಮನೆಯ ಪೂಜೆ:
ನಿನ್ನೆ (ಆಗಸ್ಟ್ ೪) ತಡರಾತ್ರಿಯವರೆಗೂ ವಿಶ್ವಕರ್ಮ ಸಮಾಜದವರು ಮನೆತನದ ಮುಖ್ಯಸ್ಥ ಶ್ರೀಧರ ಆಚಾರ್ಯ ನೇತೃತ್ವದಲ್ಲಿ ತವರು ಮನೆಯ ವಿಶೇಷ ಪೂಜೆಯನ್ನು ನೆರವೇರಿಸಿದರು. ಮೂರ್ತಿಗೆ ವಿಶ್ವಕರ್ಮ ಮಹಿಳೆಯರಿಂದ ಸುಹಾಸಿನಿ ಪೂಜೆ, ಷೋಡಶೋಪಚಾರ, ಮಹಾಮಂಗಳಾರತಿ ನಡೆಯಿತು. ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಬಂಧುಗಳು, ಊರಿನ ಭಕ್ತರು ಪಾಲ್ಗೊಂಡಿದ್ದರು.



