ಭಟ್ಕಳ (Bhatkal) : ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಭಾನುವಾರ ತಾಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲೂಕು ಆಸ್ಪತ್ರೆ ಸಹಯೋಗದಲ್ಲಿ ಮಂಗಳೂರಿನ (Mangaluru) ಕೆ ಎಸ್ ಹೆಗ್ಡೆ ಆಸ್ಪತ್ರೆಯ (KS Hegde hospital) ತಜ್ಞ ವೈದ್ಯರ ತಂಡದಿಂದ ಏರ್ಪಡಿಸಲಾದ ವೈದ್ಯಕೀಯ ಶಿಬಿರವನ್ನು (Medical Camp) ಕೆ ಎಸ್ ಹೆಗ್ಡೆ ಆಸ್ಪತ್ರೆಯ ಖ್ಯಾತ ಎಲುಬು ಮತ್ತು ಕೀಲು ತಜ್ಞ ಡಾ. ವಿಕ್ರಮ್ ಶೆಟ್ಟಿ ಉದ್ಘಾಟಿಸಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ನಂತರ ಮಾತನಾಡಿದ ಅವರು, ಉತ್ತರ ಕನ್ನಡ (Uttara Kannada) ಜಿಲ್ಲೆಯ ಜನತೆಗೆ ಅನುಕೂಲವಾಗಲು ಆಸ್ಪತ್ರೆಯಿಂದ ಹಲವು ವೈದ್ಯಕೀಯ ಶಿಬಿರ ಏರ್ಪಡಿಸಲಾಗುತ್ತಿದ್ದು, ಇದರ ಸದುಪಯೋಗವನ್ನು ಜನತೆ ಪಡೆಯಬೇಕು. ಆಸ್ಪತ್ರೆಯಲ್ಲಿ ಕ್ಷೇಮ ಹೆಲ್ತ ಕಾರ್ಡ ವಿಮಾ ಯೋಜನೆ ಇದ್ದು, ಜನತೆ ಇದರ ಸದುಪಯೋಗವನ್ನೂ ಪಡೆಯಬಹುದಾಗಿದೆ. ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ನಮ್ಮ ಆಸ್ಪತ್ರೆಯ ವೈದ್ಯಕೀಯ ಶಿಬಿರ ಆಯೋಜಿಸಿರುವುದು ಸ್ಥಳೀಯ ಜನತೆಗೆ ಅನುಕೂಲವಾಗಿದೆ ಎಂದರು.
ವಿಡಿಯೋ ಸಹಿತ ಇದನ್ನೂ ಓದಿ : ಸ್ಕೂಬಾ ಡೈವಿಂಗ್ ಮಾಡಿದ ನಟ ಡಾಲಿ ಧನಂಜಯ್
ಉಪಸ್ಥಿತರಿದ್ದ ಸರಕಾರಿ ಆಸ್ಪತ್ರೆಯ ಪಿಜಿಷಿಯನ್ ಡಾ. ಲಕ್ಷ್ಮೀಶ ನಾಯ್ಕ ಮಾತನಾಡಿ, ನಮ್ಮ ಆಸ್ಪತ್ರೆಯಲ್ಲಿ ಮಂಗಳೂರಿನ ಪ್ರತಿಷ್ಠಿತ ಕೆ ಎಸ್ ಹೆಗ್ಡೆ ಆಸ್ಪತ್ರೆಯವರು ವೈದ್ಯಕೀಯ ಶಿಬಿರ ಏರ್ಪಡಿಸಿರುವುದು ಇಲ್ಲಿನ ಜನತೆಗೆ ಅನುಕೂಲವಾಗಿದೆ. ಭಟ್ಕಳ ಪತ್ರರ್ಕರ ಕ್ಷೇಮಾಭಿವೃದ್ಧಿ ಸಂಘ ಮತ್ತು ಕ್ರಿಯಾಶೀಲ ಗೆಳೆಯರ ಸಂಘ ನೇತೃತ್ವದಲ್ಲಿ ಅರ್ಥೋಗೆ ಸಂಬಂಧಿಸಿದ ವೈದ್ಯಕೀಯ ಶಿಬಿರ ನಡೆಸಿರುವುದು ಜನರು ಇದರ ಸದುಪಯೋಗ ಪಡೆಯಲು ಅನುಕೂಲವಾಗಿದೆ ಎಂದರು.
ವಿಡಿಯೋ ಸಹಿತ ಇದನ್ನೂ ಓದಿ : ಮನೆಗೆ ಬೆಂಕಿ ತಗುಲಿ ಅಪಾರ ಹಾನಿ
ಇದೇ ಸಂದರ್ಭದಲ್ಲಿ ವೈದ್ಯರಾದ ಡಾ. ವಿಕ್ರಂ ಶೆಟ್ಟಿ, ಲಕ್ಷ್ಮೀಶ ನಾಯ್ಕರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ರಾಧಾಕೃಷ್ಣ ಭಟ್ಟ, ಸಂಘದ ಅಧ್ಯಕ್ಷ ರಾಘವೇಂದ್ರ ಹೆಬ್ಬಾರ, ಪ್ರಧಾನ ಕಾರ್ಯದರ್ಶಿ ಮನಮೋಹನ ನಾಯ್ಕ, ಉಪಾಧ್ಯಕ್ಷ ವಿಷ್ಣು ದೇವಡಿಗ, ಕ್ರಿಯಾಶೀಲ ಗೆಳೆಯರ ಸಂಘದ ಅಧ್ಯಕ್ಷ ದೀಪಕ ನಾಯ್ಕ, ಪ್ರಧಾನ ಕಾರ್ಯದರ್ಶಿ ಪಾಂಡುರಂಗ ನಾಯ್ಕ, ಕೆ ಎಸ್ ಹೆಗ್ಡೆ ಆಸ್ಪತ್ರೆ ಮಾರ್ಕೆಟಿಂಗ್ ವಿಭಾಗದ ಜೈಸನ್ ಇದ್ದರು.
ವಿಡಿಯೋ ಸಹಿತ ಇದನ್ನೂ ಓದಿ : ಕೇರಳ, ಗೋವಾ ಬಿಟ್ಟು ಮುರ್ಡೇಶ್ವರಕ್ಕೆ ಮೋಜು-ಮಸ್ತಿಗೆ ಬರಲಿ
ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಖಚಾಂಚಿ ಮೋಹನ ನಾಯ್ಕ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ಶಿಬಿರದಲ್ಲಿ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರು ಪಾಲ್ಗೊಂಡಿದ್ದರು. ತಾಲೂಕಿನ ವಿವಿಧ ಭಾಗದ ೨೦೦ಕ್ಕೂ ಅಧಿಕ ಜನರು ಭಾಗವಹಿಸಿ, ವೈದ್ಯರಿಂದ ತಪಾಸಿಸಿಕೊಂಡರು.
ಇದನ್ನೂ ಓದಿ : ಸುಬ್ರಹ್ಮಣ್ಯದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಬಂದಿದ್ದ ನಕ್ಸಲ್ ತಂಡ