ಭಟ್ಕಳ: ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ ನೀಗಿಸಬೇಕೆಂದು ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಮತ್ತು ಉದ್ಯಮಿ ಮಾಸ್ತಪ್ಪ ನಾಯ್ಕ ಬಲ್ಸೆ ಅವರು ಸಾರ್ವಜನಿಕರೊಡಗೂಡಿ ತಹಸೀಲ್ದಾರರು ಮತ್ತು ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಅವರಿಗೆ ಮನವಿ (memorandum) ಸಲ್ಲಿಸಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಭಟ್ಕಳ (Bhatkal) ಸರಕಾರಿ ಆಸ್ಪತ್ರೆಯಲ್ಲಿ ಕಳೆದ ಒಂದು ವರ್ಷಗಳಿಂದ ವೈದ್ಯರ ಕೊರತೆಯಿಂದ ರೋಗಿಗಳು ಪರದಾಡುವ ಪರಿಸ್ಥಿತಿ ಇದೆ. ಸರಕಾರಿ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಡಜನರೇ ಚಿಕಿತ್ಸೆ ಪಡೆಯಲು ಬರುತ್ತಾರೆ. ಸರಿಯಾದ ಸಮಯಕ್ಕೆ ಚಿಕಿತ್ಸೆ  ಸಿಗದೆ ಜನರು ತೊಂದರೆ ಅನುಭವಿಸುವಂತಾಗಿದೆ. ಗರ್ಭಿಣಿ ಸ್ತ್ರೀಯರು ಮತ್ತು ವೃದ್ಧರು ಚಿಕಿತ್ಸೆಗೆ ಸರಕಾರಿ ಆಸ್ಪತ್ರೆಯನ್ನೇ ಅವಲಂಬಿಸಿದ್ದಾರೆ. ವಾಹನ ಅಪಘಾತಗಳಾದಾಗ ಸಮಯಕ್ಕೆ ಸರಿಯಾಗಿ ತುರ್ತು ಚಿಕಿತ್ಸೆ ಸಿಗದೆ ಸಾವು-ನೋವು ಸಂಭವಿಸಿ ಜನರು ಪರದಾಡುವಂತಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

protest/ ಭಟ್ಕಳ ಪುರಸಭೆ ಎದುರು ಗುತ್ತಿಗೆದಾರ ಧರಣಿ

ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರು, ಕಣ್ಣಿನ ತಜ್ಞರು, ಮೂಳೆ ತಜ್ಞರು, ಗ್ರೂಪ್ ಡಿ ದರ್ಜೆಯ ನೌಕರರು, ಹೊರಗುತ್ತಿಗೆ ನೌಕರರು ಹಾಗೂ ಫಾರ್ಮಾಸಿಸ್ಟಗಳ ಕೊರತೆ ಎದುರಾಗಿದೆ. ಆಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ಔಷಧಗಳ ಕೊರತೆಯೂ ಇದೆ. ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯನ್ನು ನೀಗಿಸುವಲ್ಲಿ ಸಚಿವರು ಮತ್ತು ಅಧಿಕಾರಿಗಳು ವಿಫಲರಾಗಿದ್ದಾರೆ. ಬಡಜನರ ಹಿತದೃಷ್ಟಿಯಿಂದ ಶೀಘ್ರದಲ್ಲಿ ಆಸ್ಪತ್ರೆಗೆ ತಜ್ಞ ವೈದ್ಯರ ಮತ್ತು ಸಿಬ್ಬಂದಿ ಭರ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.

Yakshagana/ ‘ಯಕ್ಷ’ ಪ್ರೇಮಿಗಳ ‘ಹೃದಯ’ ಮೀಟುವ ‘ತಜ್ಞ’ ವೈದ್ಯ

ತಹಸೀಲ್ದಾರ ಅನುಪಸ್ಥಿತಿಯಲ್ಲಿ ಶಿರಸ್ತೆದಾರ ರಾಧಿಕಾ ಶಾಸ್ತ್ರಿ ಮನವಿ (memorandum) ಸ್ವೀಕರಿಸಿದರು. ಸರಕಾರಿ ಆಸ್ಪತ್ರೆಯಲ್ಲೂ ಸಹ ಆಡಳಿತ ವೈದ್ಯಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಶೋಕ ನಾಯ್ಕ, ವಿಶ್ವ ನಾಯ್ಕ, ಗಣೇಶ ಹಳ್ಳೇರ, ವಿನಾಯಕ ನಾಯ್ಕ ಮುಂತಾದವರಿದ್ದರು.

Case filed/ ಗಾಂಜಾ ಸೇವಿಸಿದ ನಾಲ್ವರ ವಿರುದ್ಧ ಪ್ರಕರಣ