ಭಟ್ಕಳ (Bhatkal) : ದಿನೇ ದಿನೇ ಹೆಚ್ಚಾಗುತ್ತಿರುವ ಗೋವುಗಳ ಅಪಹರಣದ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಾಲಿಯ ಸಾರ್ವಜನಿಕರು ಭಟ್ಕಳ ನಗರ ಠಾಣೆಗೆ ತೆರಳಿ ನಗರ ಠಾಣೆಯ ವೃತ್ತ ನಿರೀಕ್ಷರ ಮೂಲಕ ಡಿವೈಎಸ್ಪಿ ಗೆ ಮನವಿ (memorandum) ಸಲ್ಲಿಸಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಜಾಲಿ ಭಾಗದಲ್ಲಿ ಅತೀ ಹೆಚ್ಚಿನ ಜನರು ಗೋವುಗಳ ಮೇಲೆ ಅವಲಂಬಿತರಾಗಿದ್ದಾರೆ. ಅಂತಹ ಗೋವುಗಳಿಗೆ ದುಷ್ಕರ್ಮಿಗಳು ಅಮಲು ಬರುವ ಪದಾರ್ಥಗಳನ್ನು ನೀಡಿ ಕೊಟ್ಟಿಗೆಯಲ್ಲಿರುವ ಗೋವುಗಳನ್ನು ಕದ್ದೊಯ್ಯುತ್ತಿದ್ದಾರೆ. ದಿನೇ ದಿನೇ ಈ ಪ್ರಕರಣ ಹೆಚ್ಚುತ್ತಿದೆ. ಇದಕ್ಕೆ ಸರಿಯಾದ ಕ್ರಮ ಕೈಗೊಳ್ಳಬೇಕೆಂದು ಈ ಮೊದಲೇ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದು ಇರುತ್ತದೆ. ಆ ಪ್ರಕಾರ ಯಾವುದೇ ಕ್ರಮ ಕೈಗೊಂಡಂತೆ ಕಾಣುತ್ತಿಲ್ಲ ಎಂದು ಮನವಿಯಲ್ಲಿ (memorandum) ತಿಳಿಸಲಾಗಿದೆ.
ವಿಡಿಯೋ ಸಹಿತ ಇದನ್ನೂ ಓದಿ : ಕಾರಿನಲ್ಲಿ ಗೋವನ್ನು ಕದ್ದು ಪರಾರಿಯಾದ ಮುಸುಕುಧಾರಿಗಳು
ದಿನೇ ದಿನೇ ದುಷ್ಕರ್ಮಿಗಳು ಗೋವುಗಳನ್ನು ಕದ್ದೊಯ್ಯುವ ಪ್ರಕರಣಗಳು ಹೆಚ್ಚುತ್ತಿವೆ. ಅಂತಹ ದುಷ್ಕರ್ಮಿಗಳಿಗೆ ಕಾನೂನಿನ ಕ್ರಮ ಇಲ್ಲ ಎಂದಾದರೆ ನಾವೇ ಸರಿಯಾದ ರೀತಿಯಲ್ಲಿ ಕ್ರಮ ಜರುಗಿಸುವೆವು ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ. ಅದರಿಂದಾಗುವ ಅನಾಹುತಕ್ಕೆ ನೇರವಾಗಿ ಪೊಲೀಸ್ ಇಲಾಖೆ ಹೊಣೆಯಾಗಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಗೋಲ್ಡನ್ ಗ್ರೂಪ್ ಲಕ್ಕಿ ಡ್ರಾ ಸ್ಕೀಂಗೆ ತಡೆ
ಇದಕ್ಕೂ ಪೂರ್ವದಲ್ಲಿ ಭಟ್ಕಳ ಗ್ರಾಮೀಣ ಠಾಣೆಗೂ ತೆರಳಿ ತಮ್ಮ ಊರಿನಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಸಾರ್ವಜನಿಕರು ಹೇಳಿಕೊಂಡರು. ಈ ಸಂದರ್ಭದಲ್ಲಿ ಜಾಲಿ ಪಟ್ಟಣ ಪಂಚಾಯತ ಸದಸ್ಯ ದಯಾನಂದ ನಾಯ್ಕ, ವಸಂತ ನಾಯ್ಕ, ಸಂಕೇತ ಆಚಾರಿ, ಉಮೇಶ ನಾಯ್ಕ , ಮಹೇಶ ಮೊಗೇರ, ನಾಗೇಶ ನಾಯ್ಕ ಹೆಬಳೆ, ರಾಘವೇಂದ್ರ ನಾಯ್ಕ, ಕುಮಾರ ನಾಯ್ಕ ಸೇರಿದಂತೆ ಜಾಲಿ ನಾಗರಿಕರು ಉಪಸ್ಥಿತರಿದ್ದರು.
ಇದರ ವಿಡಿಯೋ ಸುದ್ದಿಯನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂನಲ್ಲಿ ಮತ್ತು ಫೇಸ್‌ಬುಕ್ ನಲ್ಲಿ ವೀಕ್ಷಿಸಬಹುದು.
ಇದನ್ನೂ ಓದಿ : ಆಟೋ ಡಿಕ್ಕಿಯಾಗಿ ಸ್ಕೂಟರ್ ಸವಾರಗೆ ಗಾಯ