ಭಟ್ಕಳ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಉತ್ತರ ಕನ್ನಡ (Uttara Kannada) ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ (Mankal Vaidya) ಅಧ್ಯಕ್ಷತೆಯಲ್ಲಿ ತಾಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲಾ ಮುಖ್ಯ ಶಿಕ್ಷಕರ ಎಸ್ ಎಸ್ ಎಲ್ ಸಿ ಪ್ರಗತಿ ಪರಿಶೀಲನಾ ಸಭೆಯು (SSLC progress review meeting) ಮುರುಡೇಶ್ವರದ ಜನತಾ ವಿದ್ಯಾಲಯದಲ್ಲಿ ನಡೆಯಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಈ ಎಸ್ ಎಸ್ ಎಲ್ ಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ (SSLC progress review meeting) ಎಸ್ ಎಸ್ ಎಲ್ ಸಿ ಫಲಿತಾಂಶ ಹೆಚ್ಚಳ ಮತ್ತು ಇತರೆ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು. ಸಚಿವರು ಎಲ್ಲ ಮುಖ್ಯ ಶಿಕ್ಷಕರಿಂದ ಶಾಲೆಯ ಕೊರತೆಗಳ ಬಗ್ಗೆ ಮಾಹಿತಿ ಪಡೆದರು. ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ, ಈಗಾಗಲೇ ಮುಗಿದಿರುವ ಎರಡು ಪೂರ್ವ ಸಿದ್ಧತಾ ಪರೀಕ್ಷೆಗಳಲ್ಲಿ ಭಟ್ಕಳದ (Bhatkal) ಎಸ್ ಎಸ್ ಎಲ್ ಸಿ ಫಲಿತಾಂಶದ ಬಗ್ಗೆ ಮಾಹಿತಿಯನ್ನು ನೀಡಿದರು.

Death news/ ಮಂಚದಿಂದ ಕೆಳಗೆ ಬಿದ್ದು ತಲೆಗೆ ಗಂಭೀರ ಪೆಟ್ಟು: ಚಿಕಿತ್ಸೆ ಫಲಿತದೆ ಆಸ್ಪತ್ರೆಯಲ್ಲಿ ನಿಧನ

ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲ ಮುಖ್ಯ ಶಿಕ್ಷಕರಿಂದ ಎಸ್ ಎಸ್ ಎಲ್ ಸಿ ಫಲಿತಾಂಶ ಹೆಚ್ಚಳದ ಬಗ್ಗೆ ಮಾಹಿತಿಯನ್ನು ಪಡೆಯಲಾಯಿತು. ಉಪನಿರ್ದೇಶಕರ ಕಚೇರಿಯ ಡಿವೈಪಿಸಿ ಭಾಸ್ಕರ ಗಾಂವ್ಕರ ಮಾತನಾಡಿ, ಎಸ್ ಎಸ್ ಎಲ್ ಸಿ ಫಲಿತಾಂಶ ಹೆಚ್ಚಳದ ಬಗ್ಗೆ ಹಾಗೂ ಅನುದಾನಗಳ ಖರ್ಚು ವೆಚ್ಚಗಳ ಬಗ್ಗೆ ತಿಳಿಸಿದರು.

Case filed/ ಮದುವೆ ವಿರೋಧಿಸಿದ ತಾಯಿ ಮೇಲೆ ಮಗ, ಇತರರಿಂದ ಹಲ್ಲೆ

ಅಧ್ಯಕ್ಷತೆ ವಹಿಸಿದ್ದ ಸಚಿವ ಮಂಕಾಳ ವೈದ್ಯ ಮಾತನಾಡಿ, ತಾಲೂಕಿನ ಎಲ್ಲಾ ೩೭ ಪ್ರೌಢಶಾಲೆಗಳಲ್ಲೂ ಈ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಶೇಕಡ ನೂರರಷ್ಟು ಆಗಬೇಕು. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವಂತಾಗಬೇಕು. ಮುಂದಿನ ಶೈಕ್ಷಣಿಕ ವರ್ಷದೊಳಗೆ ಯಾವುದೇ ಪ್ರೌಢಶಾಲೆಗಳಲ್ಲಿ ಮೂಲಭೂತ ವ್ಯವಸ್ಥೆಗಳ ಕೊರತೆ ಇರದಂತೆ ಸರಿಪಡಿಸಲಾಗುವುದು ಎಂದು ಹೇಳಿದರು.

complaint/ ಪಿಎಸೈ ರನ್ನಗೌಡ ವಿರುದ್ಧ ಐಜಿಪಿಗೆ ಹಿಂಜಾವೇ ದೂರು

ಕ್ಷೇತ್ರ ಸಮನ್ವಯಾಧಿಕಾರಿ ಪೂರ್ಣಿಮಾ ಮೊಗೇರ ಸ್ವಾಗತಿಸಿದರು. ವೇದಿಕೆ ಮೇಲೆ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣಪತಿ ಶಿರೂರ, ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಸಂತೋಷ್ ಶ್ರೇಷ್ಠಿ ಉಪಸ್ಥಿತರಿದ್ದರು. ಶಿಕ್ಷಣ ಸಂಯೋಜಕ ಅಶೋಕ ಆಚಾರಿ ವಂದಿಸಿದರು.

Bike collided/ ಶಿರಾಲಿಯಲ್ಲಿ ಸೈಕಲ್ಲಿಗೆ ಬೈಕ್ ಡಿಕ್ಕಿ: ಸವಾರಿಬ್ಬರೂ ಆಸ್ಪತ್ರೆಗೆ