ಕಾರವಾರ (Karwar) : ಉತ್ತರ ಕನ್ನಡ (Uttara Kannada) ಜಿಲ್ಲೆಯಾದ್ಯಂತ ಹಸು ಕಳ್ಳತನ ಪ್ರಕರಣಗಳು ಹೆಚ್ಚುತ್ತಿದೆ. ಇತ್ತೀಚೆಗೆ ಹೊನ್ನಾವರ (Honnavar) ಬಳಿ ಗರ್ಭಿಣಿ ಹಸುವನ್ನು ಕೊಂದು ಹಾಕಿದ ಘಟನೆ ನಡೆದಿದೆ. ಈ  ಹಿನ್ನೆಲೆಯಲ್ಲಿ ಗೋಕಳ್ಳತನದಲ್ಲಿ ತೊಡಗುವವರ ಮೇಲೆ ಗುಂಡಿನ ದಾಳಿ ನಡೆಸಲಾಗುವುದು ಎಂದು ಜಿಲ್ಲಾ ಸಚಿವ ಮಂಕಾಳ ಎಸ್ ವೈದ್ಯ (Mankal Vaidya) ಸೋಮವಾರ ಎಚ್ಚರಿಕೆ ನೀಡಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಹಸು ಕಳ್ಳತನ ಅನ್ಯಾಯ ಮತ್ತು ಇದು ಹಲವಾರು ವರ್ಷಗಳಿಂದ ನಡೆಯುತ್ತಿದೆ ಎಂದು ಎಲ್ಲರಿಗೂ ತಿಳಿದಿದೆ. ಇದನ್ನು ನಿಲ್ಲಿಸಬೇಕು ಎಂದು ಎಸ್ಪಿಗೆ ಹೇಳಿದ್ದೇನೆ. ಸಂಬಂಧಪಟ್ಟವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನೇರವಾಗಿ ಕೇಳಿದ್ದೇನೆ. ಅಂತಹ ಕೃತ್ಯಗಳು ಮತ್ತೆ ನಡೆದರೆ, ಅವರನ್ನು ಸ್ಥಳದಲ್ಲಿಯೇ ಗುಂಡು ಹಾರಿಸಲಾಗುವುದು ಎಂದು ಸಚಿವ ಮಂಕಾಳ ವೈದ್ಯ (Mankal Vaidya) ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ : Bike Accident/ ಬೈಕ್ ಡಿಕ್ಕಿಯಾಗಿ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಸಾವು

ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ (BJP) ಅಧಿಕಾರದಲ್ಲಿದ್ದಾಗಲೂ ಗೋ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದವು. ಹಿಂದಿನ ಸರ್ಕಾರ ಈ ವಿಚಾರದಲ್ಲಿ ಮೌನ ವಹಿಸಿತ್ತು. ಆದರೆ ಕಾಂಗ್ರೆಸ್ ಸರ್ಕಾರವು (Congress Government) ಗೋವು ಮತ್ತು ಗೋಪಾಲಕರ ಪರವಾಗಿರುವುದರಿಂದ ಗೋರಕ್ಷಕರು ಭಯಪಡುವ ಅಗತ್ಯವಿಲ್ಲ. ನಮ್ಮ ಸರ್ಕಾರ ನಮ್ಮ ಜಿಲ್ಲೆಯಲ್ಲಿ ಗೋ ಕಳ್ಳತನಕ್ಕೆ ಅವಕಾಶ ನೀಡುತ್ತಿಲ್ಲ. ನಾನು ಮೌನವಾಗಿದ್ದರೆ, ಮುಖ್ಯಮಂತ್ರಿ ಮತ್ತು ಗೃಹ ಸಚಿವರು ನಿರ್ಲಕ್ಷ್ಯ ವಹಿಸಿದ್ದರೆ ಎಫ್‌ಐಆರ್‌ಗಳನ್ನು ಹೇಗೆ ದಾಖಲಿಸಲಾಯಿತು. ಆರೋಪಿಗಳನ್ನು ಬಂಧಿಸಲಾಯಿತು? ಎಂದು ಪ್ರಶ್ನಿಸಿದರು.

ಇದನ್ನೂ ಓದಿ : Power cut / ಹೊನ್ನಾವರದಲ್ಲಿ ವಿದ್ಯುತ್ ವ್ಯತ್ಯಯ

ಉತ್ತರ ಕನ್ನಡ  ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಅನಧಿಕೃತವಾಗಿ ಗೋವುಗಳನ್ನು ಸಾಗಿಸಿದವರ ವಿರುದ್ಧ ೧೩೮ ಪ್ರಕರಣಗಳನ್ನು ದಾಖಲಿಸಲಾಗಿದೆ. ೮೬೬ ಹಸುಗಳನ್ನು ರಕ್ಷಿಸಲಾಗಿದೆ. ಒಟ್ಟು ೨೩ ಹಸು ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ೩೪ ಹಸುಗಳನ್ನು ಪತ್ತೆ ಮಾಡಲಾಗಿದೆ. ಅನಧಿಕೃತ ಗೋವು ಸಾಗಾಟ ಮತ್ತು ಗೋವು ಕಳ್ಳತನ ಪ್ರಕರಣಗಳಲ್ಲಿ ೪೬೭ ಆರೋಪಿಗಳನ್ನು ಬಂಧಿಸಲಾಗಿದೆ. ಇತ್ತೀಚೆಗಷ್ಟೇ ಹೊನ್ನಾವರದ ಬಳಿ ಗೋಹತ್ಯೆ ನಡೆಸಿದ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಆತನ ಕಾಲಿಗೆ ಗುಂಡು ಹಾರಿಸಲಾಗಿತ್ತು. ಹಸು ಕಳ್ಳತನ ತಡೆಯಲು ಪೊಲೀಸರು ವಿಶೇಷ ಕಾರ್ಯಪಡೆಯನ್ನೂ ರಚಿಸಿದ್ದಾರೆ. ಹೊನ್ನಾವರ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ೫೦ ಸಾ.ರೂಪಾಯಿ ನಗದು ಬಹುಮಾನವನ್ನೂ ಘೋಷಿಸಲಾಗಿದೆ.

ಇದನ್ನೂ ಓದಿ : Vikshit Bharat/ ಭಟ್ಕಳ ಮೂಲದ, ಎಸ್‌ವಿಸಿ ಬ್ಯಾಂಕ್‌ ಅಧ್ಯಕ್ಷಗೆ ಪ್ರತಿಷ್ಠಿತ ಪ್ರಶಸ್ತಿ