ಗೋಕರ್ಣ(Gokarna): ಖಗೋಳವೆಂಬ ಕನ್ನಡಿ (mirror)ಯಿಂದ ನಮ್ಮ ಬದುಕಿನ ಅಂತರಂಗ ಹಾಗೂ ಬಹಿರಂಗವನ್ನು ನೋಡಿಕೊಳ್ಳಲು ಅವಕಾಶವಿದೆ. ಇದನ್ನು ನಮ್ಮ ಪೂರ್ವಜರು ಸಹಸ್ರ ಸಹಸ್ರ ವರ್ಷಗಳ ಹಿಂದೆಯೇ ಕಂಡುಕೊಂಡಿದ್ದರು ಎಂದು ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ (Raghaveshwarashree) ನುಡಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ಕೈಗೊಂಡಿರುವ ಶ್ರೀಗಳು ಶನಿವಾರ ಕಾಲ ಪ್ರವಚನ ಸರಣಿಯಲ್ಲಿ ಆಶೀರ್ವಚನ ನೀಡಿದರು. ಕನ್ನಡಿ(mirror)ಯಲ್ಲಿ ನಮ್ಮನ್ನು ನಾವು ನೋಡಿಕೊಂಡ ಹಾಗೆ ಅಥವಾ ಅದಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ ನಮ್ಮ ಅಂತರಂಗ ಮತ್ತು ಬಹಿರಂಗವನ್ನು ಬಿಂಬಿಸುವ ಕನ್ನಡಿ ಅಂತರಿಕ್ಷ. ಅಂತರಿಕ್ಷವೆಂಬ ಕನ್ನಡಿಯಲ್ಲಿ ನಮ್ಮ ಬದುಕನ್ನು ನಾವು ನೋಡಿಕೊಳ್ಳಬಹುದು ಎಂದು ನಮ್ಮ ಪೂರ್ವಜರು ಸಹಸ್ರ ಸಹಸ್ರ ವರ್ಷಗಳ ಹಿಂದೆಯೇ ತೋರಿಸಿಕೊಟ್ಟಿದ್ದಾರೆ. ಖಗೋಳವೆಂಬ ಕನ್ನಡಿಯಿಂದ ಇಡೀ ಬದುಕನ್ನು ನೋಡಿಕೊಳ್ಳಬಹುದು” ಎಂದು ವಿಶ್ಲೇಷಿಸಿದರು.
ವಿಡಿಯೋ ಸಹಿತ ಇದನ್ನೂ ಓದಿ : ಬಾಂಗ್ಲಾ ಹಿಂಸಾಚಾರ ಖಂಡಿಸಿ ಭಟ್ಕಳದಲ್ಲಿ ಪ್ರತಿಭಟನೆ
ವಿಶಾಲ ಆಕಾಶದಲ್ಲಿ ನಮ್ಮ ಬದುಕು ಎಲ್ಲಿದೆ ಎಂದು ತಿಳಿದುಕೊಳ್ಳಲು ಅವಕಾಶವಿದೆ. ಜಾತಕದಲ್ಲಿ ಲಗ್ನವನ್ನು ಚೆನ್ನಾಗಿ ಅರ್ಥೈಸಿಕೊಂಡರೆ ಇಡೀ ಬದುಕನ್ನು ತಿಳಿದುಕೊಳ್ಳಬಹುದು. ಆಕಾಶ ಮತ್ತು ಭೂಮಿ ಸಂಧಿಸುವ ತಾಣವೇ ಲಗ್ನ. ಒಂದಕ್ಕೊಂದು ತಾಗುವುದನ್ನು, ಸೇರುವುದನ್ನು ಅದು ಬಿಂಬಿಸುತ್ತದೆ. ಭೂಮಿಯ ಸುತ್ತ ಇರುವ ಆಕಾಶವನ್ನು ಸರಿಯಾಗಿ ಹನ್ನೆರಡು ಪಾಲು ಮಾಡಿದರೆ ಒಂದೊಂದೂ ರಾಶಿ ಎನಿಸಿಕೊಳ್ಳುತ್ತದೆ ಎಂದು ಬಣ್ಣಿಸಿದರು.
ವಿಡಿಯೋ ಸಹಿತ ಇದನ್ನೂ ಓದಿ : ವೈದ್ಯೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಖಂಡಿಸಿ ಪ್ರತಿಭಟನೆ
ನಾವು ಹುಟ್ಟುವ ಸಮಯದಲ್ಲಿ ಪೂರ್ವದ ತುದಿಯಲ್ಲಿ ಆಕಾಶದ ಯಾವ ಭಾಗ ಸೇರುತ್ತದೆಯೋ ಅದು ನಿಮ್ಮ ಲಗ್ನ ಎನಿಸಿಕೊಳ್ಳುತ್ತದೆ. ಆ ರಾಶಿಯ ಅಧಿಪತಿ ಆಯಾ ವ್ಯಕ್ತಿಯ ಬದುಕನ್ನು ಬಿಂಬಿಸುತ್ತದೆ. ಹೀಗೆ ನಮ್ಮ ಬದುಕಿನ ಪ್ರತಿಬಿಂಬವನ್ನು ನೋಡಿಕೊಳ್ಳಬೇಕು ಎಂದರೆ, ಜನ್ಮ ದಿನಾಂಕ, ಸ್ಥಳ ಮತ್ತು ಸಮಯವನ್ನು ನಿಖರವಾಗಿ ತಿಳಿದಿರಬೇಕು. ಆ ರಾಶಿಯ ಗ್ರಹ ಆ ಜಾತಕದ ವ್ಯಕ್ತಿಯೇ ಆಗಿರುತ್ತಾನೆ. ದ್ವಾದಶ ರಾಶಿಗಳಂತೆ ದ್ವಾದಶ ಭಾವಗಳೂ ಇರುತ್ತವೆ. ಲಗ್ನ ಒಂದನೇ ಭಾವವಾದರೆ, ಮುಂದಿನ ರಾಶಿಗಳು ಕ್ರಮವಾಗಿ ೨ ರಿಂದ ಹನ್ನೆರಡನೇ ರಾಶಿಯನ್ನು ಬಿಂಬಿಸುತ್ತವೆ. ದೇಹ- ಆರೋಗ್ಯವನ್ನು ಲಗ್ನ ಅಥವಾ ಮೊದಲ ಭಾವ ಬಿಂಬಿಸುತ್ತದೆ. ಮಾತು- ವಿದ್ಯೆ- ಕುಟುಂಬ- ಧನವನ್ನು ಎರಡನೇ ಭಾವ, ಧೈರ್ಯ, ದುರ್ಬುದ್ಧಿ, ಸಹೋದರರನ್ನು ಮೂರನೇ ಭಾವ ಸೂಚಿಸುತ್ತದೆ. ಚತುರ್ಥಭಾವ ಮುಖ್ಯವಾಗಿ ತಾಯಿ, ಸೋದರಮಾವ, ಜಾಗ, ಸುಖ, ವಾಹನ, ಪಶು, ಸ್ನೇಹಿತನನ್ನು ಸೂಚಿಸುತ್ತದೆ ಎಂದು ವಿವರಿಸಿದರು.
ಇದನ್ನೂ ಓದಿ : ಬಾವಿಗೆ ಹಾರಿ ಯುವಕ ಸಾವಿಗೆ ಶರಣು
ಪ್ರಜ್ಞೆ, ಬುದ್ಧಿ, ವಿವೇಕಶಕ್ತಿ, ಮೇಧಶಕ್ತಿ, ವಿವೇಚನೆ, ಸಲಹೆಗಾರರು, ಮಕ್ಕಳು, ಹಳೆ ಜನ್ಮದ ಪುಣ್ಯವನ್ನು ಪಂಚಮ ಭಾವ ಸೂಚಿಸುತ್ತದೆ. ಷಷ್ಠಭಾವವು ಕಳ್ಳ, ಶತ್ರು, ರೋಗ, ವಿಘ್ನ, ಘಾಸಿಯನ್ನು ಬಿಂಬಿಸುತ್ತದೆ. ವಿವಾಹ, ಪತ್ನಿ, ಸ್ತ್ರೀ ಯುದ್ಧ, ಬಾಂಧವ್ಯ, ಬೇರ್ಪಡಿಕೆ, ಏಳನೇ ಭಾವದಿಂದ ತಿಳಿಯುತ್ತದೆ. ಎಂಟನೇ ಭಾವದಿಂದ ಮರಣ, ವಿಘ್ನ, ನಾಶ, ವಿಪತ್ತು, ಅಪವಾದ, ಮಠ, ಕೆಲ ಕಾಯಿಲೆಗಳು ಮತ್ತಿತರ ಅಂಶಗಳನ್ನು ತಿಳಿದುಕೊಳ್ಳಬಹುದು. ಭಾಗ್ಯ, ಧರ್ಮ, ದಯೆ, ಪುಣ್ಯ, ತಪಸ್ಸು, ತಂದೆ, ದಾನ, ಉಪಾಸನೆ, ಅನುಷ್ಠಾನ, ಸೌಶೀಲ್ಯಗಳು ಒಂಬತ್ತನೇ ಭಾವದಿಂದ ತಿಳಿಯುತ್ತದೆ. ೯ನೇ ಮನೆಯ ಅಧಿಪತಿ ಯಾವ ಮನೆಯಲ್ಲಿರುತ್ತಾನೋ ಅದರಿಂದ ನಮ್ಮ ಹಿಂದಿನ ಜನ್ಮವನ್ನು ತಿಳಿದುಕೊಳ್ಳಬಹುದು ಎಂದರು.
ಇದನ್ನೂ ಓದಿ : ಜೆಸಿಬಿ ನಿಲ್ಲಿಸಿದ್ದಕ್ಕೆ ಅವಾಚ್ಯ ಶಬ್ದಗಳ ಬೈಗುಳ
ದೇವಸ್ಥಾನ, ಛತ್ರ, ಕರ್ಮ, ಆಜ್ಞಾಶಕ್ತಿಯನ್ನು ೧೦ನೇ ಮನೆಯಿಂದ ಚಿಂತನೆ ಮಾಡಬಹುದು. ೧೧ನೇ ಮನೆಯಿಂದ ನಮ್ಮ ಆಶೋತ್ತರಗಳ ಈಡೇರಿಕೆಯನ್ನು ತಿಳಿಯಬಹುದು. ಎಲ್ಲ ಲಾಭಗಳ ಹಿರಿಯಣ್ಣ ಹನ್ನೊಂದನೇ ಭಾವದಿಂದ ನಿರ್ಧರಿಸಲ್ಪಟ್ಟರೆ, ಪಾಪ ನಷ್ಟಗಳು, ಸ್ಥಾನಭ್ರಂಶ ಮತ್ತಿತರ ಅಂಶಗಳನ್ನು ಹನ್ನೆರಡನೇ ಮನೆಯಿಂದ ನಿರ್ಧರಿಸಲ್ಪಡುತ್ತದೆ ಎಂದು ವಿವರಿಸಿದರು.
ಇದನ್ನೂ ಓದಿ : ಬಸ್ ಡಿಕ್ಕಿಯಾಗಿ ಬೈಕ್ ಸವಾರಗೆ ಗಾಯ
ಗೋವಿಶ್ವ ಮತ್ತು ಗೋಸೇವಾ ಆ್ಯಪನ್ನು ಹಿರಿಯ ಲೆಕ್ಕಪರಿಶೋಧಕರಾದ ಗೋಸೇವಕ ರಾಮಕೃಷ್ಣ ಕಲ್ಲಬ್ಬೆ ನೆರವೇರಿಸಿದರು. ಗೋವು ವಿಶ್ವದ ತಾಯಿ. ಗಾವೋ ವಿಶ್ವಸ್ಯ ಮಾತರಃ ಎಂಬ ಭಾವವನ್ನು ಇರಿಸಿಕೊಂಡು ಗೋವಿಶ್ವದ ಪರಿಕಲ್ಪನೆ ರೂಪಿಸಲಾಗಿದೆ. ವಿಶ್ವವಿದ್ಯಾಪೀಠದ ಮಧ್ಯೆ ಇರುವ ಗೋಸನ್ನಿಧಿಯ ಕಾರಣದಿಂದ ಗೋವಿಶ್ವ ಎಂದು ಹೆಸರಿಸಲಾಗಿದೆ. ವಿಶ್ವವಿದ್ಯಾಪೀಠದ ವಿದ್ಯಾರ್ಥಿಗಳಿಗೆ ಶುದ್ಧ ದೇಸಿ ಹಾಲು ಸಿಗಬೇಕು ಎಂಬ ಕಾರಣಕ್ಕೆ ಗೋವಿಶ್ವ ಅಭಿವೃದ್ಧಿಪಡಿಸಲಾಗಿದೆ ಎಂದು ಇಂದು ಅನಾವರಣಗೊಂಡ ಗೋವಿಶ್ವದ ಬಗ್ಗೆ ವಿವರಿಸಿದರು.
ಇದನ್ನೂ ಓದಿ : ಮನೆಯಿಂದ ಹೋದ ಗಂಡ ನಾಪತ್ತೆ
ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಕೆ.ವಿಷ್ಣು ರಚಿಸಿದ ಮಾಂಡೂಕ್ಯೂಪನಿಷತ್ನ ಕನ್ನಡ ಭಾವಾರ್ಥ ಕೃತಿಯನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆಯಾಯಿತು. ಶ್ರೀಮಠದ ಜಾಲತಾಣಿಗರಿಂದ ಸರ್ವಸೇವೆ ಮತ್ತು ಗೋಫಲ ಟ್ರಸ್ಟ್ ವತಿಯಿಂದ ಪಾದುಕಾಪೂಜೆ ಸೇವೆ ನೆರವೇರಿಸಲಾಯಿತು.
ಇದನ್ನೂ ಓದಿ : ಲಾರಿ ಡಿಕ್ಕಿಯಾಗಿ ಬೈಕ್ ಸವಾರರಿಗೆ ಗಾಯ
ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಚಾತುರ್ಮಾಸ್ಯ ಸಮಿತಿ ಕಾರ್ಯದರ್ಶಿ ಶ್ರೀಕಾಂತ ಪಂಡಿತ, ಆಡಳಿತ ಖಂಡದ ಸಂಯೋಜಕ ಹಾರಕೆರೆ ನಾರಾಯಣ ಭಟ್, ಸಂಘಟನಾ ಖಂಡದ ಶ್ರೀಸಂಯೋಜಕ ಡಾ.ವೈ.ವಿ.ಕೃಷ್ಣಮೂರ್ತಿ, ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ವ್ಯವಸ್ಥಾಪಕ ಪ್ರಮೋದ ಮುಡಾರೆ, ಶಾಸ್ತ್ರಿಗಳಾದ ಸುಬ್ರಾಯ ಅಗ್ನಿಹೋತ್ರಿ, ವಿವಿವಿ ಆಡಳಿತಾಧಿಕಾರಿ ಡಾ.ಪ್ರಸನ್ನ ಕುಮಾರ್ ಟಿ.ಜಿ, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ ಮತ್ತಿತರರು ಉಪಸ್ಥಿತರಿದ್ದರು. ನಾಗರಾಜ ಭಟ್ ಕಾರ್ಯಕ್ರಮ ನಿರೂಪಿಸಿದರು.