ಶಿರಸಿ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ೨೦೨೪ನೇ ಸಾಲಿನ ಕೆ. ಶಾಮರಾವ್ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಮೋಹನ ಹೆಗಡೆ (Mohan Hegde)ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಶಿರಸಿಯ ಜಿಲ್ಲಾ ಪತ್ರಿಕಾ ಭವನದಲ್ಲಿ ಸಂಘದ ಅಧ್ಯಕ್ಷ ಜಿ. ಸುಬ್ರಾಯ ಭಟ್ ಬಕ್ಕಳ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆ ಮಾಡಲಾಗಿದೆ. ಡಿಸೆಂಬರ್‌ನಲ್ಲಿ ನಡೆಯುವ ಪತ್ರಿಕಾ ಮಂಡಳಿಯ ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಕೆ. ಶಾಮರಾವ್ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸುಮಂಗಲಾ ಹೊನ್ನೆಕೊಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್‌ ಮಾಡಲು ಇಲ್ಲಿ ಒತ್ತಿ.

ಉತ್ತರ ಕನ್ನಡ ಜಿಲ್ಲೆಯ ಮೂಲದವರಾದ ಮೋಹನ ಹೆಗಡೆ (Mohan Hegde) ಅವರು ಕಳೆದ ೪೦ ವರ್ಷಗಳಿಂದ ಪತ್ರಿಕೋದ್ಯಮದ ವಿವಿಧ ಮಜಲುಗಳನ್ನು ದಾಟಿ ಪ್ರಸ್ತುತ ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಸಿಈಓ ಮತ್ತು ಎಕ್ಸಿಕ್ಯೂಟಿವ್ ಡೈರೆಕ್ಟರ್ ಹುಬ್ಬಳ್ಳಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುದೀರ್ಘ ಅವಧಿಗೆ ಕಾರವಾರದಲ್ಲಿ ಸಂಯುಕ್ತ ಕರ್ನಾಟಕ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ೧೯೮೫ ರಿಂದ ೨೦೧೧ರವರೆಗೆ ಸಂಯುಕ್ತ ಕರ್ನಾಟಕದಲ್ಲಿ ಸುದ್ದಿ ಸಂಪಾದಕ, ಬ್ಯೂರೋ ಚೀಫ್, ಹಿರಿಯ ವರದಿಗಾರ, ಸ್ಪಾಫ್ ರಿಪೋರ್ಟ‌ರ್, ಉಪಸಂಪಾದಕರಾಗಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ೨೦೧೧ರಿಂದ ೨೦೨೦ರವರೆಗೆ ವಿಜಯವಾಣಿ ದಿನಪತ್ರಿಕೆಯಲ್ಲಿ ಹುಬ್ಬಳ್ಳಿಯಲ್ಲಿ ಬ್ಯೂರೋಚೀಫ್ ಮತ್ತು ಸ್ಥಾನಿಕ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ೨೦೨೧ರಿಂದ ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಸಿಈಓ ಮತ್ತು ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ : ಕಾಲಕ್ಕೆ ಇರುವ ಶಕ್ತಿ ಅದ್ಭುತ: ರಾಘವೇಶ್ವರ ಶ್ರೀ

ಅರಸಿ ಬಂದ ಪ್ರಶಸ್ತಿಗಳು: ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಧೀಮಂತ ಪತ್ರಕರ್ತ ಪ್ರಶಸ್ತಿ, ಹುಬ್ಬಳ್ಳಿ ಧಾರವಾಢ ಮಹಾನಗರ ಪಾಲಿಕೆಯಿಂದ ರಾಜ್ಯೋತ್ಸವ ಪ್ರಶಸ್ತಿ, ಸ್ಪಂದನಾ ಸಾಮಾಜಿಕ ಸಂಸ್ಥೆಯಿಂದ ಸ್ಪಂದನಾ ಪುರಸ್ಕಾರ, ಸಂಗೊಳ್ಳಿ ರಾಯಣ್ಣ ಮಾಧ್ಯಮ ಪ್ರಶಸ್ತಿ, ಡಾ. ಜಿ. ಆರ್. ಪಾಂಡೇಶ್ವರ ಪ್ರಶಸ್ತಿ ಕೆಯುಡಬ್ಲ್ಯುಜೆಯಿಂದ ಎಸ್‌.ವಿ.ಜಯಶೀಲರಾವ್‌ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ-ಪುರಸ್ಕಾರಗಳಿಗೆ ಮೋಹನ ಹೆಗಡೆ ಭಾಜನರಾಗಿದ್ದಾರೆ.

ಇದನ್ನೂ ಓದಿ :