ಭಟ್ಕಳ: ಶಿರಾಲಿಯ ಜನತಾ ವಿದ್ಯಾಲಯದಲ್ಲಿ ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಸರಕಾರಿ ನೌಕರರ ಸಂಘ ಮತ್ತು ಜನತಾ ವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ (Motivational camp) ಏರ್ಪಡಿಸಲಾಗಿತ್ತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕಾರ್ಯಕ್ರಮವನ್ನು ಉಡುಪಿ (Udupi) ಡಯಟ್ ನ ಪ್ರಾಚಾರ್ಯರೂ ಮತ್ತು ಸಂಪನ್ಮೂಲ ವ್ಯಕ್ತಿಗಳು ಆದ ಡಾ ಅಶೋಕ ಕಾಮತ ಉದ್ಘಾಟಿಸಿದರು. ಅವರು ಮಾತನಾಡುತ್ತಾ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ದಿಂದ ಇಷ್ಟಪಟ್ಟು ವಿದ್ಯಾಭ್ಯಾಸ ಮಾಡಿದ್ದಲ್ಲಿ ಯಾವ ಸಾಧನೆ ಬೇಕಾದರೂ ಮಾಡಬಹುದು. ವಿದ್ಯಾರ್ಥಿಗಳು ಸಮಯದ ಸದುಪಯೋಗ ಮಾಡಿಕೊಂಡು ಮೊಬೈಲ್ ನಿಂದ ದೂರವಿದ್ದು ಅಭ್ಯಾಸ ಮಾಡಬೇಕು ಎಂದು ಕಿವಿಮಾತು ಹೇಳಿದರು. ಆಲಸ್ಯ, ನಿರಾಸಕ್ತಿ, ಮತ್ತು ಋಣಾತ್ಮಕ ದೃಷ್ಟಿಕೋನವನ್ನು ಬಿಟ್ಟು ಆತ್ಮವಿಶ್ವಾಸದಿಂದ ಅಧ್ಯಯನ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.

Forest officers raid/ ಮನೆಯೊಂದರಲ್ಲಿ ಮಾಂಸ, ಜಿಂಕೆ ಕೊಬ್ಬು ಪತ್ತೆ, ಎರಡು ಏರ್ ಗನ್ ವಶಕ್ಕೆ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ ಮಾತನಾಡುತ್ತಾ, ಭಟ್ಕಳ (Bhatkal) ತಾಲೂಕಿನಲ್ಲಿ ೨೦೫೩ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಕರ ಮೂಲಕ ಸೂಕ್ತ ಮಾರ್ಗದರ್ಶನ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಈಗಾಗಲೇ ೩ ಪ್ರೇರಣಾ ಶಿಬಿರಗಳನ್ನು (motivational camp) ಸಂಘಟಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡಲು ಪ್ರೇರಣೆ ನೀಡುವ ಸಲುವಾಗಿ ಈ ಶಿಬಿರವನ್ನು ಏರ್ಪಡಿಸಲಾಗಿದೆ. ಅನುಭವಿಕ ಸಂಪನ್ಮೂಲ ವ್ಯಕ್ತಿಗಳು ತರಬೇತಿಯನ್ನು ನೀಡಲಿದ್ದು ಅದನ್ನು ಸದುಪಯೋಗಪಡಿಸಿಕೊಳ್ಳಲು ತಿಳಿಸಿದರು. ೬೨೫ ಅಂಕಗಳಿಗೆ ೬೨೫ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ತಲಾ ೧೦,೦೦೦ ರೂಪಾಯಿ ನೀಡುವುದಾಗಿ ಘೋಷಿಸಿದರು.

Car skid/ ಗುಳ್ಮಿ ಕ್ರಾಸ್ ಬಳಿ ಕಾರು ಪಲ್ಟಿಯಾಗಿ ಭಟ್ಕಳದ ಮೂವರಿಗೆ ಗಾಯ

ಕುಮಟಾ (Kumta) ಡಯಟ್ ನ ಹಿರಿಯ ಉಪನ್ಯಾಸಕ ನಾಗರಾಜ ಗೌಡ ಮಾತನಾಡುತ್ತಾ, ಡಾ ಅಶೋಕ ಕಾಮತ ಶಿಕ್ಷಣ ಇಲಾಖೆಯಲ್ಲಿ ಹಲವಾರು ಸಾಧನೆಗಳನ್ನು ಮಾಡಿ ಪ್ರಶಸ್ತಿ ಗಳಿಸಿದವರು. ಅವರಿಂದ ಪ್ರೇರಣೆ ನೀಡುತ್ತಿರುವುದರಿಂದ ಅದು ವಿದ್ಯಾರ್ಥಿಗಳ ಮೇಲೆ ಅತ್ಯಂತ ಪರಿಣಾಮಕಾರಿಯಾಗಿರುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಪ್ರೇರಣಾ ಶಿಬಿರದಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳಬೇಕು ಎಂದು ಹೇಳಿದರು.

Makkala Santhe/ ಗಂಡು ಮಕ್ಕಳ ಶಾಲೆಯಲ್ಲಿ ಪ್ರಪ್ರಥಮ ಬಾರಿಗೆ ಮಕ್ಕಳ ಸಂತೆ 

ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಎಂ ಎನ್ ನಾಯ್ಕ ಮಾತನಾಡುತ್ತಾ, ತಮ್ಮ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಇಂತಹ ಯಾವುದೇ ತರಬೇತಿಗಳು ಲಭ್ಯವಿರಲಿಲ್ಲ . ಈಗ ಇಲಾಖೆಯವರೇ ಇಂತಹ ತರಬೇತಿಗಳನ್ನು ಸಂಘಟಿಸುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಹೇಳಿ, ೬೨೫ ಅಂಕಗಳಿಗೆ ೬೨೫ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ತಲಾ ೧೦,೦೦೦ ರೂಪಾಯಿ ನೀಡುವುದಾಗಿ ಘೋಷಿಸಿದರು.

bike hit/ ಬೈಕ್ ಡಿಕ್ಕಿಯಾಗಿ ಪಾದಚಾರಿ ಮಹಿಳೆ ಗಂಭೀರ

ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ ಡಾ ಅಶೋಕ್ ಕಾಮತ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಘವೇಂದ್ರ ನಾಯ್ಕ ಸ್ವಾಗತಿಸಿದರೆ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯೋಜಕಿ ಪೂರ್ಣಿಮಾ ಮೊಗೇರ ವಂದಿಸಿದರು. ಜನತಾ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಾರ್ಥಿಸಿದರು.

Mankal Vaidya/ `ಪಂಚಾಯಿತಿ ಮಟ್ಟದಲ್ಲಿ ಸಮಸ್ಯೆ ತಲೆದೋರಿದರೆ ಗ್ರಾಮ ಆಡಳಿತ ಅಧಿಕಾರಿಗಳೇ ನೇರ ಹೊಣೆ’

ವೇದಿಕೆಯ ಮೇಲೆ ಜನತಾ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಜಿ ಎಸ್ ಹೆಗಡೆ, ಮಾಧ್ಯಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಗಣಪತಿ ಶಿರೂರ, ತೆಂಗಿನಗುಂಡಿ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಂತೋಷ ಶ್ರೇಷ್ಠಿ, ಸರಕಾರಿ ನೌಕರರ ಸಂಘದ ಲೆಕ್ಕಪತ್ರ ಪರಿಶೋಧಕ ಯು ಏ ಲೋಹಾನಿ, ಜನತಾ ವಿದ್ಯಾಲಯದ ಮುಖ್ಯಾಧ್ಯಾಪಕಿ ಲೀಲಾವತಿ ಮೊಗೇರ, ತಾಲೂಕ ಎಸ್ ಎಸ್ ಎಲ್ ಸಿ ನೋಡಲ್ ಹಾಗೂ ಶಿಕ್ಷಣ ಸಂಯೋಜಕ ಅಶೋಕ್ ಆಚಾರಿ ಮುಂತಾದವರು ಉಪಸ್ಥಿತರಿದ್ದರು.

Furniture donation/ಅಂಗನವಾಡಿಗೆ ರೋಟರಿ ಕ್ಲಬ್ ಪೀಠೋಪಕರಣ ಕೊಡುಗೆ

ಸಂತೋಷ ಶ್ರೇಷ್ಠಿ, ಶಿವಕುಮಾರ್ ಹಿಚ್ಕಡ, ಡಾ ಶ್ರೀನಿವಾಸ ನಾಯ್ಕ, ಕಾಲಿಸ್ತಾ ಫರ್ನಾಂಡೀಸ್ , ಸಂತೋಷ ಶೆಟ್ಟಿ, ಗುಡ್ಡಪ್ಪ ಹರಿಜನ, ಶ್ರೀಧರ ಶೇಟ್ ಶಿರಾಲಿ, ಸೀಮಾ ನಾಯಕ, ಮೋಹನ ನಾಯ್ಕ, ಪೂರ್ಣಿಮಾ ಶೆಟ್ಟಿ, ಪದ್ಮಾವತಿ ಪೂಜಾರಿ, ರವಿರಾಜ ಹೊಸಕಟ್ಟಾ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಭಟ್ಕಳ ತಾಲೂಕಿನ ಸರಕಾರಿ, ಅನುದಾನಿತ, ಅನುದಾನರಹಿತ ಪ್ರೌಢ ಶಾಲೆಗಳ ಆಯ್ದ ಪ್ರತಿಭಾವಂತ ವಿದ್ಯಾರ್ಥಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಂಡರು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸುರೇಶ ಮುರ್ಡೇಶ್ವರ ಕಾರ್ಯಕ್ರಮ ನಿರೂಪಿಸಿದರು.

Responsible AI/ ‘ಜವಾಬ್ದಾರಿಯುತ ಎಐ’ ಅಭಿಯಾನದಲ್ಲಿ ಶ್ರೀ ಗುರು ಸುಧೀಂದ್ರ ಕಾಲೇಜಿನ ಶಿಕ್ಷಕರ ಸಹಭಾಗಿತ್ವ