ಮುಂಡಗೋಡ (Mundgod): ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಿನ ನಂದಿಕಟ್ಟಾ ನಿವಾಸಿ ಅರವಿಂದ ಮಹೇಶ ಚಿತ್ತರಗಿ (೩೨) ಮೃತ ಯುವಕ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಇವರು ನ.೨ರಂದು ರಾತ್ರಿ ೮.೪೫ರ ಸುಮಾರಿಗೆ ಮುಂಡಗೋಡ (Mundgod) ತಾಲೂಕಿನ ಕೊಪ್ಪ ಗ್ರಾಮದ ಮಾವನ ಮನೆಯಲ್ಲಿ ಇಟ್ಟಿದ್ದ ಪೆಟ್ರೋಲ್‌ ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ದೇಹ ಪೂರ್ತಿ ಸುಟ್ಟಿದ್ದರಿಂದ ಚಿಕಿತ್ಸೆಗೆ ಹುಬ್ಬಳ್ಳಿಯ (Hubballi) ಕಿಮ್ಸ್‌  (KIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿನ್ನೆ ನ.೩ರಂದು ಮಧ್ಯಾಹ್ನ ೧೨ರ ಸುಮಾರಿಗೆ ಮೃತಪಟ್ಟಿದ್ದಾರೆ. ಈ ಕುರಿತು ಮೃತರ ಸಹೋದರ ಮಂಜುನಾಥ ಮುಂಡಗೋಡ ಪೊಲೀಸ್‌ ಠಾಣೆಯಲ್ಲಿ ದೂರು (Complaint) ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ (Case Registered) ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ :  ಬಡವರ ಚಿಕಿತ್ಸೆಗೆ ಯಂಗ್‌ ಒನ್‌ ಇಂಡಿಯಾ ಸ್ಪಂದನೆ