ಭಟ್ಕಳ (Bhatkal): ಮುರುಡೇಶ್ವರದಿಂದ (Murudeshwar) ತಿರುಪತಿಗೆ (Tirupati) ಇಂದಿನಿಂದ ಪ್ರಾರಂಭವಾಗಿರುವ ರೈಲು ಭಟ್ಕಳ ನಿಲ್ದಾಣಕ್ಕೆ ತಲುಪಿದ ಬಳಿಕ ಭಟ್ಕಳ ವಿವಿಧ ಸಂಘಟನೆಗಳಿಂದ ಸ್ವಾಗತ ಕೋರಿ ವಿಶೇಷ ಪೂಜೆ ಸಲ್ಲಿಸಲಾಯಿತು (train welcome).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮಧ್ಯಾಹ್ನ ೩.೩೦ಕ್ಕೆ ಮುರ್ಡೇಶ್ವರದಿಂದ (Murudeshwar) ಹೊರಟು, ೩.೪೨ಕ್ಕೆ ಭಟ್ಕಳ ರೈಲ್ವೆ ನಿಲ್ದಾಣ ತಲುಪುತ್ತಿದಂತೆ ರೈಲಿಗೆ ಹೂವಿನ ಹಾರ ಹಾಕಿ ವಿಶೇಷ ಪೂಜೆ ಸಲ್ಲಿಸಲಾಯಿತು (train welcome). ಈ ಸಂದರ್ಭದಲ್ಲಿ ಕೊಂಕಣ ರೈಲ್ವೆ ಹೋರಾಟ ಸಮಿತಿಯ ಸದಸ್ಯರು, ಭಾರತೀಯ ಜನತಾ ಪಕ್ಷ (BJP) ಭಟ್ಕಳ ಮಂಡಲ ಅಧ್ಯಕ್ಷ ಲಕ್ಷ್ಮಿ ನಾರಾಯಣ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ಶೇಷಗಿರಿ ನಾಯ್ಕ, ಪಾಂಡು ನಾಯ್ಕ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಇದನ್ನೂ ಓದಿ : ನವರಾತ್ರಿ ಉತ್ಸವದ ಬೆಳ್ಳಿ ಮಹೋತ್ಸವ