ಭಟ್ಕಳ: ಮುರಿನಕಟ್ಟೆ (Murinakatte) ವಿವಾದಕ್ಕೆ ಸಂಬಂಧಿಸಿದಂತೆ ಭಟ್ಕಳ (Bhatkal) ಶಹರ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಸಾರ್ವಜನಿಕರ ಬರ ಹೋಗುವ ವಾಹನಗಳ ಅಡೆತಡೆ ಮಾಡಿ ಸಂಚಾರಕ್ಕೆ ತೊಂದರೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಪಿರ್ಯಾದಿಗೆ ಹಲ್ಲೆ ಮಾಡಿ ದರೋಡೆ ಮತ್ತು ಪ್ರಚೋದನಾಕಾರಿ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಅಪರಾಧಕ್ಕಾಗಿ ಪ್ರಕರಣ ದಾಖಲಾಗಿವೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಈ ಕುರಿತು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರ ಮೂಲಕ ಹಾಯ್ದು ಹೋಗುವ ರಾ ಹೆ ೬೬ರ ಪಕ್ಕದಲ್ಲಿ ಶಿರಸಿ (Sirsi) ಶ್ರೀ ಮಾರಿಕಾಂಬೆ ದೇವಸ್ಥಾನಕ್ಕೆ (Marikamba Temple) ಹೋಗುವ ಹೊರೆಯನ್ನಿಡುವ ಸ್ಥಳವಿದ್ದು ಅದನ್ನು ಸ್ಥಳೀಯವಾಗಿ ಮುರಿನಕಟ್ಟೆ ಎಂಬ ಹೆಸರಿನಿಂದ ಗುರುತಿಸಲಾಗುತ್ತದೆ. ಸದ್ರಿ ಸ್ಥಳ ರಾ ಹೆ (National Highway) ೬೬ರ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಸಮಯದಲ್ಲಿ ವಾಹನ ಸಂಚಾರಕ್ಕೆ /ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗದ ಹಾಗೆ ಮುರಿನಕಟ್ಟೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರರವರಿಂದ (NHAI) ಲಭ್ಯ ಸರ್ಕಾರಿ ಜಮೀನಿನಲ್ಲಿ ರಸ್ತೆ ಸಂಚಾರಕ್ಕೆ ತೊಂದರೆಯಾಗದ ರೀತಿಯಲ್ಲಿ ಮೇ ೨೪ರಂದು ಕೆಂಪು ಕಲ್ಲಿನಿಂದ ಕಟ್ಟಿದ ಹೊಸಕಟ್ಟೆಯನ್ನು ಕಿಡಿಗೇಡಿಗಳು ಏಕಾಏಕಿಯಾಗಿ ನಾಶಪಡಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
DC Lakshmi Priya/ ಮುರಿನಕಟ್ಟೆ ನಾಶಪಡಿಸಿದವರ ವಿರುದ್ಧ ಪ್ರಕರಣ ದಾಖಲು
ಸಾಮಾಜಿಕ ಜಾಲತಾಣದಲ್ಲಿ ಭಟ್ಕಳದ ಮೂರಿನಕಟ್ಟೆ ಪ್ರಕರಣದ ಕುರಿತು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಪ್ರಚೋದನಾಕಾರಿ ಪೊಸ್ಟಗಳು, ಸುಳ್ಳು ಸುದ್ದಿಗಳು ಹರಿಬಿಟ್ಟು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದಲ್ಲಿ ಸಂಬಂಧಪಟ್ಟ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕೈಗೊಂಡು ಪ್ರಕರಣ ದಾಖಲಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ವದಂತಿ/ಸುಳ್ಳು ಸುದ್ದಿಗಳ ಬಗ್ಗೆ ಕಿವಿಗೊಡಬಾರದಾಗಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಕೋರಲಾಗಿದೆ.



