ಭಟ್ಕಳ: ಹೊಸದಾಗಿ ನಿರ್ಮಿಸಿದ್ದ ಮುರಿನಕಟ್ಟೆ(Murinakatte)ಯನ್ನು ಕೆಲ ಮುಸ್ಲಿಮರು ಧ್ವಂಸಗೊಳಿಸಿದ ಸುದ್ದಿ ಕಾಳ್ಗಿಚ್ಚಿನಂತೆ ಭಟ್ಕಳ ತಾಲೂಕಿನಾದ್ಯಂತ ಹರಡಿ ಹಿಂದೂ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ರಾತೋರಾತ್ರಿ ಭಟ್ಕಳ ಶಹರ ಠಾಣೆಗೆ ಮುತ್ತಿಗೆ ಹಾಕಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಮುರಿನಕಟ್ಟೆ(Murinakatte)ಯನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು. ಘಟನೆಯಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದವರನ್ನು ಕೂಡ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Murinakatte/ ಮುರಿನಕಟ್ಟೆಗೆ ಹಾನಿ: ಭಟ್ಕಳ ಉದ್ವಿಘ್ನ

ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಅಧಿಕಾರಿಗಳು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಘಟನೆಗೆ ಕಾರಣರಾದವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗುತ್ತಿದೆ. ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವವರು ದೂರು ನೀಡಿದರೆ ಅದನ್ನು ದಾಖಲಿಸಿಕೊಳ್ಳುತ್ತೇವೆ ಎಂದು ಆಕ್ರೋಶಿತ ಜನರಿಗೆ ಭರವಸೆ ನೀಡಿ ಸಮಾಧಾನ ಪಡಿಸಲು ಯತ್ನಿಸಿದರು.

Murinakatte/ಮಳೆಯ ನಡುವೆಯೂ ಮುರಿನಕಟ್ಟೆ ಮರುಸ್ಥಾಪಿಸಿದ ಹಿಂದೂ ಯುವಕರು

ಹಾನಿಯಾದ ಮುರಿನಕಟ್ಟೆಯನ್ನು ಪುನರ್ ನಿರ್ಮಿಸಬೇಕು ಎಂದು ಜನರು ಆಗ್ರಹಿಸಿದಾಗ, ಈ ಬಗ್ಗೆ ತಾಲೂಕ ಆಡಳಿತ ಮತ್ತು ಜಿಲ್ಲಾಡಳಿತದ ಮೇಲಾಧಿಕಾರಿಗಳು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು.

Chippikallu tragedy/ ಚಿಪ್ಪಿಕಲ್ಲು ದುರಂತ: ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಸುನೀಲ ನಾಯ್ಕ, ಬಿಜೆಪಿ ಮುಖಂಡರಾದ ಗೋವಿಂದ ನಾಯ್ಕ, ಶ್ರೀಕಾಂತ ನಾಯ್ಕ, ಶ್ರೀನಿವಾಸ ನಾಯ್ಕ, ಹಿಂದೂ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರನ್ನು ಅಡ್ಡಗಟ್ಟಿದ ಹಿಂದೂ ಯುವಕರು ಕ್ರಮಕ್ಕೆ ಆಗ್ರಹಿಸಿದರು.

Terrible tragedy/ ಭಟ್ಕಳದಲ್ಲಿ ಭೀಕರ ದುರಂತ: ಎಂಟು ಜನರ ದುರ್ಮರಣ