ಭಟ್ಕಳ: ಮುರಿನಕಟ್ಟೆ ಘಟನೆ (Murinakatte incident) ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಭಟ್ಕಳ(Bhatkal)ದಲ್ಲಿ ಪೊಲೀಸರು ಬೃಹತ್ ರೂಟ್ ಮಾರ್ಚ್ (police patrolling) ನಡೆಸಿದರು. ವಿಶೇಷ ಕ್ರಿಯಾ ಪಡೆ (SAF) ಸೇರಿದಂತೆ ೫೦ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಪಟ್ಟಣದ ಪ್ರಮುಖ ರಸ್ತೆ, ಬೀದಿಗಳು ಹಾಗೂ ವಿವಿಧ ಮೊಹಲ್ಲಾಗಳಲ್ಲಿ ಪಥಸಂಚಲನ ನಡೆಸಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮುರಿನಕಟ್ಟೆ ಘಟನೆಯ (Murinakatte incident) ಬಳಿಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ ಭದ್ರತೆ ಮತ್ತಷ್ಟು ಬಿಗಿಗೊಳಿಸಿದೆ. ರೂಟ್ ಮಾರ್ಚ ವೇಳೆ ಸಾರ್ವಜನಿಕರು ವದಂತಿಗೆ ಕಿವಿಗೊಡದೆ ಶಾಂತಿ ಹಾಗೂ ಸೌಹಾರ್ದತೆ ಕಾಪಾಡಬೇಕು ಎಂದು ಪೊಲೀಸರು ಮನವಿ ಮಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಅಪಪ್ರಚಾರಗಳಿಗೆ ಮರುಳಾಗಬಾರದು. ಯಾವುದೇ ಅನುಮಾನಾಸ್ಪದ ಮಾಹಿತಿ ಕಂಡುಬಂದರೆ ತಕ್ಷಣ ಪೊಲೀಸರಿಗೆ ತಿಳಿಸಬೇಕು ಎಂದು ಸೂಚಿಸಿದರು.
Murinakatte/ ಮುರಿನಕಟ್ಟೆ ಕೆಡವಿಗೆ ಕಾಂಗ್ರೆಸ್ ಖಂಡನೆ
ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಈ ಪಥಸಂಚಲನ ಪಟ್ಟಣದ ವಿವಿಧ ಭಾಗಗಳಲ್ಲಿ ಸಂಚರಿಸಿ ಭದ್ರತಾ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸಿತು. ಮುರಿನಕಟ್ಟೆ ವಿವಾದದ ಹಿನ್ನೆಲೆ ಭಟ್ಕಳದಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ನಿಗಾ ಮುಂದುವರಿಸಿದೆ.



