ಭಟ್ಕಳ: “ಮುರಿನಕಟ್ಟೆ (Murinakatte) ಮರುನಿರ್ಮಾಣಕ್ಕೆ ಇರುವ ಎಲ್ಲಾ ತೊಡಕುಗಳನ್ನು ನಿವಾರಿಸಿ ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು” ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಿಶ್ವಾಸ ವ್ಯಕ್ತಪಡಿಸಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಭಟ್ಕಳದ (Bhatkal) ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುರಿನಕಟ್ಟೆ (Murinakatte) ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ವತಿಯಿಂದ ೨ ರಸ್ತೆಗಳ ಮಧ್ಯದ ಡಿವೈಡರ್‌ನಲ್ಲೇ ಕಾನೂನಾತ್ಮಕವಾಗಿ ಮುರಿನಕಟ್ಟೆಯನ್ನು ಮರುನಿರ್ಮಾಣ ಮಾಡಲಾಗುವುದು. ಜಿಲ್ಲಾಧಿಕಾರಿ, ಐಜಿಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಲಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ, ತಾಂತ್ರಿಕ ಹಾಗೂ ಕಾನೂನಾತ್ಮಕ ಅಂಶಗಳನ್ನು ಪರಿಗಣಿಸಿ, ವಾಹನ ಸಂಚಾರಕ್ಕೂ ಅಡಚಣೆಯಾಗದ ರೀತಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ (National Highway) ಡಿವೈಡರ್‌ನ ಮಧ್ಯಭಾಗದಲ್ಲೇ ಕಟ್ಟೆ ನಿರ್ಮಿಸಲಾಗುವುದು ಎಂದರು.

Murinakatte/ ಮುರಿನಕಟ್ಟೆ ನಿರ್ಮಾಣಕ್ಕೆ ಪರ್ಯಾಯ ಸ್ಥಳ

“ಮುರಿನಕಟ್ಟೆ ವಿಚಾರದಲ್ಲಿ ಸಮಾಜದಲ್ಲಿ ಶಾಂತಿ ಭಂಗಗೊಳಿಸುವ ಪ್ರಯತ್ನಗಳು ನಡೆದಿವೆ. ಕಟ್ಟೆ ಧ್ವಂಸಗೊಳಿಸಿರುವ ಘಟನೆ ಖಂಡನೀಯವಾಗಿದ್ದು, ಇಂತಹ ಕೃತ್ಯಗಳಿಗೆ ಮುಂದಿನ ದಿನಗಳಲ್ಲಿ ಅವಕಾಶ ನೀಡಬಾರದು” ಎಂದು ಹೇಳಿದರು.

Bhatkal bandh/ ಸ್ವಯಂಪ್ರೇರಿತ ಭಟ್ಕಳ ಬಂದ್ ಕರೆ

ಮಾಜಿ ಶಾಸಕ ಸುನೀಲ ನಾಯ್ಕ, ನಿಗಮ-ಮಂಡಳಿ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಬಿಜೆಪಿ ಮಂಡಲಾಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀಕಾಂತ ನಾಯ್ಕ, ಸುಬ್ರಾಯ ದೇವಾಡಿಗ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶಿವಾನಿ ಶಾಂತರಾಮ, ತಾಲೂಕು ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಭಾಸ್ಕರ ದೈಮನೆ, ಕೇದಾರ ಕೊಲ್ಲೆ ಮತ್ತಿತರರಿದ್ದರು.

Fine/ ಅಪ್ರಾಪ್ತಗೆ ಬೈಕ್ ಕೊಟ್ಟ ಮಹಿಳೆಗೆ ದಂಡ