ಭಟ್ಕಳ ಡೈರಿ ವರದಿ
ಮುರ್ಡೇಶ್ವರ: ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಇಸ್ಪೀಟ್ ಜುಗಾರಾಟ ಆಡುತ್ತಿದ್ದವರ ಮೇಲೆ ಮುರ್ಡೇಶ್ವರ ಪೊಲೀಸರು ದಾಳಿ ನಡೆಸಿದ್ದು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಇತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಸಭಾತಿಯ ಕಂಕರಹಳ್ಳಿ ರಸ್ತೆ ಬದಿಯ ಸಾರ್ವಜನಿಕ ಸ್ಥಳದಲ್ಲಿ ನವೆಂಬರ್ ೯ರಂದು ಮಧ್ಯಾಹ್ನ ಸುಮಾರು ೧.೪೦ ಗಂಟೆಗೆ ಈ ದಾಳಿ ನಡೆದಿದೆ. ಶಂಕರ ಆಚಾರಿ (೪೨), ಮುತ್ತು ನಾಯ್ಕ (೩೪), ಮಹೇಶ ನಾಯ್ಕ (೩೪) ಸೇರಿದಂತೆ ಇತರ ಕೆಲವರು ಸೇರಿಕೊಂಡು ಹಣವನ್ನು ಪಣವಾಗಿಟ್ಟು ಇಸ್ಪೀಟ್ ಎಲೆಗಳ ಮೂಲಕ ಅಂದರ್-ಬಾಹರ್ ಜುಗಾರಾಟ ಆಡುತ್ತಿದ್ದರೆಂದು ಪೊಲೀಸರ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ಮುರ್ಡೇಶ್ವರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಹಣಮಂತ ಬಿರಾದಾರ ಅವರು ಪೊಲೀಸ್ ಸಿಬ್ಬಂದಿ ಹಾಗೂ ಪಂಚರೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದು, ಮಹೇಶ ನಾಯ್ಕ ಸೇರಿದಂತೆ ಉಳಿದವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಆರೋಪಿಗಳ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ೧೯೬೩ರ ಕಲಂ ೮೭ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನ್ಯಾಯಾಲಯದ ಅನುಮತಿ ಪಡೆದು ಪೊಲೀಸರು ಪ್ರಥಮ ವರ್ತಮಾನ ವರದಿ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ :
ಮುರುಡೇಶ್ವರಕ್ಕೆ ಕರಾವಳಿ ಫೆರಿ ಸಂಪರ್ಕದ ಹೊಸ ನಿರೀಕ್ಷೆ; ಮಂಗಳೂರು–ಕಾರವಾರ ಜಲಮಾರ್ಗ ಯೋಜನೆಗೆ ಸಚಿವ ಸಂಪುಟ ಅಸ್ತು!
ಸರಾಬಿ ನದಿ ಉಳಿಸಲು ಇನ್ನೆಷ್ಟು ಕಾಯಬೇಕು? ನಗರಸಭೆಗೆ ಹೊಣೆಗಾರಿಕೆಯ ಸವಾಲು




