ಭಟ್ಕಳ: ಅಪರಾಧ ಪ್ರಕರಣಗಳ ಹಿನ್ನೆಲೆ ಹೊಂದಿರುವ ಇಲ್ಲಿನ ಮೂಸಾನಗರ ನಿವಾಸಿ ಇಸ್ಮಾಯಿಲ್ ಹವ್ವಾ (೪೬) ಎಂಬುವನನ್ನು ಉತ್ತರ ಕನ್ನಡ (Uttara Kannada) ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ (exiled) ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಇಸ್ಮಾಯಿಲ್ ಹವ್ವಾ ವಿರುದ್ಧ ಭಟ್ಕಳ (ಭಟ್ಕಳ) ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯಡಿ ೨೦೨೦ರಿಂದ ೨೦೨೫ರ ಅವಧಿಯಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಎರಡು ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು, ಉಳಿದ ಐದು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿವೆ. ಆರೋಪಿ ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು ಪೊಲೀಸ್ ಇಲಾಖೆ ಅಭಿಪ್ರಾಯಪಟ್ಟಿದೆ.

humanitarian/ ಚಿಪ್ಪಿಕಲ್ಲು ದುರಂತದ ಸಂತ್ರಸ್ತ ಮಕ್ಕಳಿಗೆ ಕಸಾಪ ನೆರವು

ಈ ಹಿನ್ನೆಲೆಯಲ್ಲಿ ಭಟ್ಕಳ ನಗರ ಠಾಣೆ ಪೊಲೀಸ್ ನಿರೀಕ್ಷಕರು ಗಡಿಪಾರು ಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.

ಪ್ರಕರಣದ ಕುರಿತು ವಿಚಾರಣೆ ನಡೆಸಿದ ಅಧಿಕಾರಿಗಳು ಅಭಿಯೋಜನೆ ಮತ್ತು ಪ್ರತಿವಾದಿ ಪರ ವಾದಗಳನ್ನು ಆಲಿಸಿ ಪರಿಶೀಲನೆ ನಡೆಸಿದ ಬಳಿಕ ಕರ್ನಾಟಕ ಪೊಲೀಸ್ ಕಾಯ್ದೆ-೧೯೬೩ರ ಕಲಂ ೫೫(ಎ) ಮತ್ತು ೫೫(ಬಿ) ಅಡಿಯಲ್ಲಿ ಗಡಿಪಾರು ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ. ಅದರಂತೆ ಇಸ್ಮಾಯಿಲ್ ಹವ್ವಾ ಅವರನ್ನು ಉತ್ತರ ಕನ್ನಡ ಜಿಲ್ಲೆಯಿಂದ ರಾಯಚೂರು (Raichur) ಜಿಲ್ಲೆಯ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಗೆ ಆರು ತಿಂಗಳ ಅವಧಿಗೆ ಗಡಿಪಾರು ಮಾಡಲಾಗಿದೆ (exiled). ಭಟ್ಕಳ (Bhatkal) ನಗರ ಠಾಣೆಯ ಪೊಲೀಸರು ಆರೋಪಿಯನ್ನು ರಾಯಚೂರು ಗ್ರಾಮೀಣ ಠಾಣೆ ಅಧಿಕಾರಿಗಳ ಮುಂದೆ ಹಾಜರುಪಡಿಸಿ ಆದೇಶವನ್ನು ಜಾರಿಗೊಳಿಸಿದ್ದಾರೆ.

Kannada language/ ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡ ಭಾಷೆಗೆ ಶೇ ೧೦೦ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ