ಭಟ್ಕಳ ಡೈರಿ ವರದಿ
ಭಟ್ಕಳ: ‘ನಮ್ಮ ಮನೆ–ನಮ್ಮ ಹಕ್ಕು’ ಘೋಷವಾಕ್ಯದೊಂದಿಗೆ ಬಿಜೆಪಿ ಭಟ್ಕಳ ಮಂಡಲದ ವತಿಯಿಂದ ಮುಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುರುವಾರ ಜನಾಂದೋಲನ ನಡೆಯಿತು. ಸರ್ಕಾರಿ ಭೂಮಿಯಲ್ಲಿ ಇರುವ ಕಟ್ಟಡಗಳು ಹಾಗೂ ನಿವೇಶನಗಳನ್ನು ತೆರಿಗೆ ವ್ಯಾಪ್ತಿಯಿಂದ ಕೈಬಿಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಈ ಪ್ರತಿಭಟನೆ ಆಯೋಜಿಸಲಾಗಿತ್ತು.
ಜನಾಂದೋಲನವು ಭಟ್ಕಳ–ಹೊನ್ನಾವರ ಕ್ಷೇತ್ರದ ಮಾಜಿ ಶಾಸಕ ಸುನೀಲ ನಾಯ್ಕ ನೇತೃತ್ವದಲ್ಲಿ ನಡೆಯಿತು. ಸರ್ಕಾರಿ ಭೂಮಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಾಸಿಸುತ್ತಿರುವ ಕುಟುಂಬಗಳ ಮನೆ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದಂತೆ ಆತಂಕ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಆದೇಶವನ್ನು ಹಿಂಪಡೆಯಬೇಕು ಹಾಗೂ ಜನರ ಮನೆ–ನಿವೇಶನಗಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಭಟ್ಕಳ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ರಾಜ್ಯ ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ಈಶ್ವರ ನಾಯ್ಕ, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತಾರಾಮ, ಭಟ್ಕಳ ಕ್ಷೇತ್ರದ ಬಿ.ಎಲ್.ಎ.-೧ ಪ್ರಮೋದ್ ಜೋಶಿ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಇದನ್ನೂ ಓದಿ:
ಭಟ್ಕಳದ ಟಿ.ಟಿ. ವಾಹನ ಕಳವು: ಆರೋಪಿಗಳ ಬಂಧನಕ್ಕೆ ಆಗ್ರಹ
ಬಿಪಿಎಲ್ ಕಾರ್ಡ್‌ದಾರರ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಆಗ್ರಹ


