ಭಟ್ಕಳ (Bhatkal) : ಉತ್ತರ ಕನ್ನಡ (Uttara Kannada) ಜಿಲ್ಲೆಯ ನಾಮಧಾರಿ ಸಮಾಜದ ಕುಲಗುರು (Namadhari Guru) ಧರ್ಮಸ್ಥಳ (Dharmasthala) ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ (Brahmanand Saraswathi Swamiji) ಉತ್ತರ ಭಾರತದ ನಾಗಾಸಾಧು (Nagasadhu) ಸನ್ಯಾಸಿ ಪರಂಪರೆಯಲ್ಲಿ ಅತ್ಯುನ್ನತ ಹುದ್ದೆಯಾದ ಮಹಾಮಂಡಲೇಶ್ವರ ಪದವಿಯ ಪಟ್ಟಾಭಿಷೇಕವು ಜ.೩೧ರಂದು ಪ್ರಯಾಗ್‌ರಾಜ್ ನಲ್ಲಿ (Prayagraj) ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ (Kumbh Mela) ಜುನಾ ಅಖಾಡದ ಮೂಲಕ ನೆರವೇರಿತು. ಇದು ಕರ್ನಾಟಕಕ್ಕೆ (Karnataka) ಸಿಕ್ಕಿರುವ ಮೊದಲ ಮಹಾಮಂಡಲೇಶ್ವರ ಪದವಿಯಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿದವರಿಗೆ ಈ ಪದವಿಯನ್ನು ಪ್ರದಾನ ಮಾಡುವುದು ಅಖಾಡದ ವಾಡಿಕೆ. ಈ ಪದವಿಗೆ ಅರ್ಹರಾದವರು ಸ್ವತಂತ್ರ ಪೀಠಾಧೀಶರಾಗಿರಬೇಕಾಗಿದೆ. ಪಟ್ಟಾಭಿಷೇಕಕ್ಕೂ ಮುನ್ನ ಅಖಾಡದಲ್ಲಿರುವ ಕ್ಯಾಬಿನೆಟ್ ಸದಸ್ಯರು ಸ್ವಾಮೀಜಿಯವರ ಆಧ್ಯಾತ್ಮಿಕ ಸತ್ಸಂಗವನ್ನು ಪರಿಶೀಲಿಸಿ ಬೈಠಕ್ ನಲ್ಲಿ ಚರ್ಚಿಸಿ ಗೌರವ ಪ್ರದಾನ ಮಾಡುವುದಾಗಿದೆ. ಶ್ರೀಗಳು ಮುಂದೆ ರಾಷ್ಟ್ರಾದ್ಯಂತ ಧರ್ಮ ಪ್ರಚಾರದ ಜತೆಗೆ ಅಧ್ಯಾತ್ಮದ ಉನ್ನತ ಸಾಧನೆಗಾಗಿ ಧಾರ್ಮಿಕ ಮೌಲ್ಯಗಳನ್ನು ಮತ್ತಷ್ಟು ಬಲಿಷ್ಠಗೊಳಿಸಲು ಅರ್ಹತೆ ಉಳ್ಳವರಾಗಿದ್ದಾರೆಂದು ಪರಿಗಣಿಸಿ ನಾಗಾ ಸಾಧು ಸನ್ಯಾಸಿ ಪರಂಪರೆಯಲ್ಲಿ ಜುನಾ ಅಖಾಡ ಈ ಜವಾಬ್ದಾರಿಯನ್ನು ನೀಡಿದೆ.
ಇದನ್ನೂ ಓದಿ : Martyrs’ Day / ಭಟ್ಕಳ ನ್ಯಾಯಾಲಯದಲ್ಲಿ ಹುತಾತ್ಮರ ದಿನಾಚರಣೆ
ಕರ್ನಾಟಕದಲ್ಲೇ ಪ್ರಥಮ : ದಕ್ಷಿಣ ಭಾರತದಲ್ಲಿ ಮಹಾಮಂಡಲೇಶ್ವರ ಪಟ್ಟನೀಡಿದ್ದು ವಿರಳ. ಈ ಪೈಕಿ ಕನ್ಯಾಡಿ ಶ್ರೀರಾಮಕ್ಷೇತ್ರದ ಸದ್ಗುರು ಶ್ರೀಗಳ (Namadhari Guru) ಮೂಲಕ ಕರ್ನಾಟಕಕ್ಕೆ ಬರುವ ಪ್ರಪ್ರಥಮ ಮಹಾಮಂಡಲೇಶ್ವರ ಪದವಿಯಾಗಿದೆ. ಈ ಪಟ್ಟಾಭಿಷೇಕರಾದವರಿಗೆ ರಾಷ್ಟ್ರಾದ್ಯಂತ ವಿಶೇಷ ಸೌಲಭ್ಯ ನೀಡಲಾಗುತ್ತದೆ. ವಾರಾಣಸಿಯ ಪಂಚದಶನಾಮ್ ಜುನಾ ಅಖಾಡದಲ್ಲಿರುವ ಸಾಧು ಸಮಾಜದ ಮಹಾಮಂಡಲೇಶ್ವರ ಆಚಾರ್ಯರಾದ ಅವದೇಶಾನಂದ ಗಿರಿ ಮಹಾರಜರು ಈ ಪುಣ್ಯ ಕಾರ್ಯದ ಪಟ್ಟಾಭಿಷೇಕವನ್ನು ಶುಕ್ರವಾರ ಮಹಾಕುಂಭಮೇಳದಲ್ಲಿ ನಿರ್ವಹಿಸಿದರು.
ಇದನ್ನೂ ಓದಿ : Cleanliness Day/ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತಾ ದಿನಾಚರಣೆ
ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಜುನಾ ಅಖಾಡದ ಅಧ್ಯಕ್ಷ ಹರಿಗಿರಿ ಮಹಾರಾಜ, ಜುನಾ ಅಖಾಡ ಉಪಾಧ್ಯಕ್ಷ ವಿದ್ಯಾನಂದ ಸರಸ್ವತಿ ಸ್ವಾಮೀಜಿ, ಜನಾ ಅಖಾಡದ ಉತ್ತರಾಖಂಡ ಮಹಾಮಂತ್ರಿ ದೇವಾನಂದ ಮಹಾರಾಜ, ಕೋಶಾಧಿಕಾರಿ ಧೀರತಗಿರಿ. ಕನ್ಯಾಡಿ ಶ್ರೀರಾಮ ಕ್ಷೇತ್ರದ ಟ್ರಸ್ಟಿ ತುಕಾರಾಮ ಸಾಲ್ಯಾನ, ಭಟ್ಕಳದ ಸಾರದಹೊಳೆ ಹಳೇಕೋಟೆ ಹನುಮಂತ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣ ನಾಯ್ಕ ಪೃಥ್ವಿ, ಉ.ಕ. ಜಿಲ್ಲಾ ಬಿ.ಜೆ.ಪಿ. ಪ್ರಮುಖ ಗೋವಿಂದ ನಾಯ್ಕ ಭಟ್ಕಳ, ಖಾದಿ ಗ್ರಾಮೋದ್ಯೋಗ ಮಂಡಳಿ ಮಾಜಿ ಸದಸ್ಯ ಮುಕುಂದ ನಾಯ್ಕ ಭಟ್ಕಳ. ಉದ್ಯಮಿ ಗಣೇಶ ಹರಿಕಾಂತ ಮುರುಡೇಶ್ವರ (Murudeshwar), ಉ.ಕ ಜಿಲ್ಲೆಯ ಶ್ರೀರಾಮಕ್ಷೇತ್ರ ಸೇವಾ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.
ಇದನ್ನೂ ಓದಿ : Kalabhairava / ಫೆ.೫ರಿಂದ ಗೋಕರ್ಣದ ಶ್ರೀ ಕಾಲಭೈರವ ದೇವರ ಅಷ್ಟಬಂಧ ಸುವರ್ಣ ಮಹೋತ್ಸವ