ಭಟ್ಕಳ: “ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಶ್ರಮವಹಿಸಿ ಮಂಜೂರಿಸಿಕೊಂಡು ಬಂದಿದ್ದ ಶ್ರೀ ನಾರಾಯಣ ಗುರು (Narayan Guru) ವಸತಿ ಶಾಲೆಯ (residential School) ನೂತನ ಕಟ್ಟಡ ಪೂರ್ಣಗೊಂಡಿದ್ದರೂ ವಸತಿ ಶಾಲೆ ಬಾಡಿಗೆ ಕಟ್ಟಡದಲ್ಲೇ ಮುಂದುವರಿಯುತ್ತಿದೆ. ಆದಷ್ಟು ಬೇಗ ಶಾಸಕರು ನಾರಾಯಣ ಗುರು (Narayan Guru) ವಸತಿ ಶಾಲೆಯ ಕಟ್ಟಡ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾದೀತು ಎಂದು ಮಾಜಿ ಶಾಸಕ ಸುನೀಲ ನಾಯ್ಕ (Sunil Naik) ಎಚ್ಚರಿಕೆ ನೀಡಿದ್ದಾರೆ. ಅವರು ಜಾಲಿಯಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ನಾರಾಯಣ ಗುರು ವಸತಿ ಶಾಲೆಯ ಕಟ್ಟಡ ಮತ್ತು ಪುರವರ್ಗದಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ನಾರಾಯಣ ಗುರು ವಸತಿ ಶಾಲೆ ವೀಕ್ಷಿಸಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚಿಸಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಮಾತನಾಡಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ನಾರಾಯಣ ಗುರು ವಸತಿ ಶಾಲೆಯ ಹೊಸ ಕಟ್ಟಡವನ್ನು ಪೂರ್ಣಗೊಳಿಸಿ ೬ ತಿಂಗಳು ಕಳೆದರೂ ಇನ್ನೂ ತನಕ ಬಾಡಿಗೆ ಕಟ್ಟಡದಲ್ಲಿರುವ ಆ ಶಾಲೆಯನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಿಲ್ಲ. ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ನಾರಾಯಣ ಗುರು ವಸತಿ ಶಾಲೆಯಲ್ಲಿ ಜಾಗದ ಕೊರತೆ ಹಾಗೂ ಮೂಲಭೂತ ಸೌಕರ್ಯಗಳ ಅಭಾವದಿಂದ ವಿದ್ಯಾರ್ಥಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಒಂದೇ ಕೊಠಡಿಯಲ್ಲಿ ಸುಮಾರು ೩೦ ವಿದ್ಯಾರ್ಥಿಗಳು ಮಲಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಮಕ್ಕಳಲ್ಲಿ ಚರ್ಮ ಸಂಬಂಧಿ ಕಾಯಿಲೆಗಳು ಹರಡುತ್ತಿದ್ದು, ಕೂಡಲೇ ಶಾಲೆಯನ್ನು ಸ್ಥಳಾಂತರಿಸಬೇಕಿದೆ. ಒಂದು ಕೊಠಡಿಯಲ್ಲಿ ೩೦ ವಿದ್ಯಾರ್ಥಿಗಳು ವಾಸವಾಗಿದ್ದು, ಕೇವಲ ಎರಡು ಶೌಚಾಲಯ ಮತ್ತು ಎರಡು ಸ್ನಾನಗೃಹಗಳಿವೆ. ಇದರಿಂದ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಸ್ನಾನ ಹಾಗೂ ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕೆಲವೊಮ್ಮೆ ಸ್ನಾನ ಮಾಡದೇ ತರಗತಿಗೆ ಹೋಗುವ ಪರಿಸ್ಥಿತಿಯೂ ನಿರ್ಮಾಣವಾಗಿದೆ. ವಿಶೇಷವಾಗಿ ವಿದ್ಯಾರ್ಥಿನಿಯರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ವಾತಾವರಣದಲ್ಲಿ ಉತ್ತಮ ಶಿಕ್ಷಣ ಹೇಗೆ ಸಾಧ್ಯ? ಎಂದು ಅವರು ಪ್ರಶ್ನಿಸಿದರು.

course in London/ ಲಂಡನ್‌ನಲ್ಲಿ ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್ ಕೋರ್ಸ್ ಪೂರ್ಣಗೊಳಿಸಿದ ಭಟ್ಕಳದ ಪ್ರಜ್ವಲ ನಾಯ್ಕ

“ಪಾಲಕರು ನನಗೆ ಬಂದು ದೂರಿದ್ದಾರೆ. ನಾನು ಸ್ಥಳಾಂತರಿಸುವ ಭರವಸೆ ನೀಡಿ ಕಳುಹಿಸಿದ್ದೇನೆ. ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ರಾಜ್ಯಕ್ಕೆ ಮಂಜೂರಾದ ನಾಲ್ಕು ವಸತಿ ಶಾಲೆಗಳ ಪೈಕಿ ಒಂದು ಶಾಲೆಯನ್ನು ಭಟ್ಕಳ ಕ್ಷೇತ್ರಕ್ಕೆ ತರಲು ವಿಶೇಷ ಪ್ರಯತ್ನ ಮಾಡಿದ್ದೆ. ಆರಂಭದಲ್ಲಿ ೨೮ ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ರೂಪುಗೊಂಡಿದ್ದು, ನಂತರ ೧೩ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿ ಕಟ್ಟಡ ಕಾಮಗಾರಿ ಆರು ತಿಂಗಳ ಹಿಂದೆಯೇ ಪೂರ್ಣಗೊಂಡಿದೆ. ಆದರೆ ಕಟ್ಟಡ ಉದ್ಘಾಟನೆ ಮಾಡಿದರೆ ನನಗೆ ಕೀರ್ತಿ ಸಿಗುತ್ತದೆ ಎಂಬ ಕಾರಣಕ್ಕೆ ಶಾಸಕ ಮಂಕಾಳ ವೈದ್ಯ ಉದ್ದೇಶಪೂರ್ವಕವಾಗಿ ಉದ್ಘಾಟನೆ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Distribution/ ಬೈಲೂರು ಕ್ಲಸ್ಟರ್‌ನ ೧೫ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ

ಶಾಲೆ ಮಂಜೂರಿಸಿದ ಕೀರ್ತಿ ನನಗೆ ಬರುತ್ತದೆ ಎಂಬ ಭಯ ಇದ್ದರೆ ನಾನು ಉದ್ಘಾಟನೆ ಕಾರ್ಯಕ್ರಮಕ್ಕೆ ಬರುವುದಿಲ್ಲ. ನನ್ನ ಹೆಸರಿನ ಬ್ಯಾನರ್‌ಗಳನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಕಬಾರದು ಎಂದು ನಾನು ನನ್ನ ಕಾರ್ಯಕರ್ತರಿಗೇ ಮನವಿ ಮಾಡುತ್ತೇನೆ. ಕಾಂಪೌಂಡ್ ಕಾಮಗಾರಿ ಪೂರ್ಣವಾಗಿಲ್ಲ ಎಂಬ ನೆಪ ಹೇಳಲಾಗುತ್ತಿದೆ. ಅದಕ್ಕೆ ಸರ್ಕಾರದ ಬಳಿ ಹಣವಿಲ್ಲದಿದ್ದರೆ ನನ್ನ ಸ್ವಂತ ಖರ್ಚಿನಲ್ಲಿ ಕಾಂಪೌಂಡ್ ನಿರ್ಮಿಸಿಕೊಡಲು ಸಿದ್ಧನಿದ್ದೇನೆ. ಆದರೆ ಮಕ್ಕಳ ಶಿಕ್ಷಣ ಮತ್ತು ಆರೋಗ್ಯದ ವಿಚಾರದಲ್ಲಿ ರಾಜಕೀಯ ಮಾಡಬಾರದು. ನಾರಾಯಣ ಗುರು ಶಾಲೆಯಲ್ಲಿ ಉತ್ತಮ ಶಿಕ್ಷಣ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲೆಯನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರ ಮಾಡಬೇಕಿದೆ ಎಂದರು.

Punctuality/ ಚಲಿಸುವ ರೈಲಿನಿಂದ ಬಿದ್ದ ಯುವಕನ ಪ್ರಾಣ ಉಳಿಸಿದ ಸಿಬ್ಬಂದಿ

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪಾಲಕರು, ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಪ್ರಮೋದ ಜೋಶಿ, ವಸಂತ ನಾಯ್ಕ, ರಾಮಚಂದ್ರ ನಾಯ್ಕ, ಮಾಸ್ತಿ ಗೊಂಡ ಮುಂತಾದವರಿದ್ದರು.

Government Hospital road/ ಸರ್ಕಾರಿ ಆಸ್ಪತ್ರೆ ರಸ್ತೆ ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಗಿಡ ನೆಟ್ಟು ಪ್ರತಿಭಟನೆ