ಭಟ್ಕಳ : ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಹಾಗೂ ಮಂಡಲ ಮಹಿಳಾ ಮೋರ್ಚಾ ಸಹಯೋಗದೊಂದಿಗೆ ರಾಷ್ಟ್ರೀಯ ಕೈ ಮಗ್ಗ ದಿನ (Hand Loom Day) ಆಚರಿಸಲಾಯಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಕೈಮಗ್ಗ ದಿನ (Hand Loom Day) ಆಚರಣೆ ಅಂಗವಾಗಿ ಕಸೂತಿ ಕೆಲಸವನ್ನು ಮಾಡುತ್ತಾ ಕಳೆದ ೨೦ ವರ್ಷಗಳಿಂದ ಹಲವಾರು ವಿದ್ಯಾರ್ಥಿಗಳಿಗೆ ಕಲಿಸುತ್ತಾ ಇದ್ದಂಥ ಶಾಂತಿ ವೆಂಕಟೇಶ್ ನಾಯ್ಕ್ ಹಾಗೂ ಗಾಯತ್ರಿ ಪ್ರದೀಪ ಹರಿದಾಸ ಅವರಿಗೆ ಸನ್ಮಾನಿಸಲಾಯಿತು. ಭಟ್ಕಳದ ಗ್ರಾಮೀಣ ಪ್ರತಿಭೆ ವೃಂದಾ ಆರ್. ಜೋಗಿ B.B.A.ದಲ್ಲಿ ಕರ್ನಾಟಕ ವಿಶ್ವ ವಿದ್ಯಾಲಯ ನಡೆಸುವ ಪದವಿ ಪರೀಕ್ಷೆಯಲ್ಲಿ ದ್ವಿತೀಯ ರ‌್ಯಾಂಕ್ ಪಡೆದಿರುವುದಕ್ಕೆ ಮಹಿಳಾ ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು.

ಇದನ್ನೂ ಓದಿ : ಸೃಷ್ಟಿಯಲ್ಲಿ ಯಾವುದೂ ಶಾಶ್ವತವಲ್ಲ: ರಾಘವೇಶ್ವರ ಸ್ವಾಮೀಜಿ

ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀ ನಾರಾಯಣ ನಾಯ್ಕ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಶಿವಾನಿ ಶಾಂತರಾಮ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಸುಬ್ರಾಯ ದೇವಾಡಿಗ ಕೈ ಮಗ್ಗ ದಿನಾಚರಣೆಯ ಮಹತ್ವ ತಿಳಿಸಿದರು.

ಇದನ್ನೂ ಓದಿ : ಆಗಸ್ಟ್‌ ೭ರಂದು ವಿವಿಧೆಡೆ ಅಡಿಕೆ ಧಾರಣೆ

ವೇದಿಕೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಸುನೀತಾ ಉಪಸ್ಥಿತರಿದ್ದರು. ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕುಪ್ಪು ಗೊಂಡ ನಿರ್ವಹಿಸಿ, ವಂದಿಸಿದರು. ಮೋರ್ಚಾದ ಪದಾಧಿಕಾರಿಗಳು ಹಾಗೂ ಜಿಲ್ಲಾ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.