ಭಟ್ಕಳ ಡೈರಿ ವರದಿ
ಭಟ್ಕಳ: ಸೆಪ್ಟೆಂಬರ್ ೩ರ ಬೆಳಿಗ್ಗೆ ೮ ಗಂಟೆಯವರೆಗೆ ಅನ್ವಯವಾಗುವ ಹವಾಮಾನ ಮುನ್ಸೂಚನೆಯಂತೆ (Weather Forecast), ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಣ್ಣ ಪ್ರಮಾಣದ ತುಂತುರು ಮಳೆಯಾಗುವ ಸಾಧ್ಯತೆ ಇದೆ (Normal rainfall). ಘಟ್ಟದ ಕೆಳಭಾಗದ ಪ್ರದೇಶಗಳಲ್ಲಿ ಅಲ್ಲಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಬೀಳುವ ಸಾಧ್ಯತೆಗಳಿದ್ದು (Normal rainfall), ಕೆಲವೆಡೆ ಮೋಡ ಕವಿದ ವಾತಾವರಣ ಮುಂದುವರಿಯಬಹುದು.
AITM/ ಎಐಟಿಎಂನಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-೨೦೨೬: ಆಂತರಿಕ ಸುತ್ತಿನ ಮೌಲ್ಯಮಾಪನ
ಸದ್ಯದ ಹವಾಮಾನ ಪರಿಸ್ಥಿತಿಯ ಪ್ರಕಾರ, ಕರಾವಳಿ ಜಿಲ್ಲೆಗಳಲ್ಲಿ (coastal districts) ಜೋರು ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಮುಂದಿನ ಎರಡು ದಿನಗಳ ಕಾಲ ದಿನದ ವೇಳೆ ಅಲ್ಲಲ್ಲಿ ಒಂದೆರಡು ಬಾರಿ ಸಾಮಾನ್ಯ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಇದಾದ ಬಳಿಕ ಕರಾವಳಿ ಭಾಗದಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಹೀಗಾಗಿ ಸದ್ಯಕ್ಕೆ ಭಾರಿ ಮಳೆಯ ಆತಂಕ ಕಡಿಮೆಯಾಗಿದ್ದು, ಸ್ಥಳೀಯವಾಗಿ ಕಂಡುಬರುವ ಮಳೆಯ ಪ್ರಮಾಣದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ.
award/ ಜಿಲ್ಲಾ ಮಟ್ಟದ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿಗೆ ನಿನಾದ ಕಲ್ಚರಲ್ ಅಕಾಡೆಮಿ ಆಯ್ಕೆ
