ಭಟ್ಕಳ: ಮುರ್ಡೇಶ್ವರದ ಶೆಟ್ಟರಕೇರಿ ರಸ್ತೆಯಲ್ಲಿರುವ ಭಾರತ ಗೆಸ್ಟ್ ಹೌಸ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಮಧ್ಯರಾತ್ರಿ ದಾಳಿ ನಡೆಸಿ ಇಬ್ಬರು ನೊಂದ ಮಹಿಳೆಯರನ್ನು (women rescued) ರಕ್ಷಿಸಿ, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮುರ್ಡೇಶ್ವರ ವೃತ್ತದ ಸಿಪಿಐ ಜಗದೀಶ ಹಂಚನಾಳ ನೇತೃತ್ವದಲ್ಲಿ ಪಿಎಸ್‌ಐ ಹಣಮಂತ ಬಿರಾದಾರ, ಪಿಎಸ್‌ಐ ಲೋಕನಾಥ ರಾಠೋಡ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದರು.
Makkala Santhe/ ಮಕ್ಕಳ ಸಂತೆಯಲ್ಲಿ ತರಕಾರಿ, ಒಣಮೀನು ಭರ್ಜರಿ ಮಾರಾಟ
ದಾಳಿಯ ವೇಳೆ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು (women rescued), ಅವರೊಂದಿಗೆ ಇದ್ದ ಮೂವರು ವಿಠಪುರುಷರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ಸಂಬಂಧ ರೂಮ್ ಬಾಯ್ ಕಾಯ್ಕಿಣಿ ಹೆರಾಡಿಯ ಆರೋಪಿ ಸುರೇಶ ನಾಗಪ್ಪ ನಾಯ್ಕ (೪೩) ಎಂಬವರನ್ನು ಬಂಧಿಸಲಾಗಿದೆ. ಹೆಚ್ಚಿನ ಹಣದ ಆಮಿಷ ತೋರಿಸಿ ಮಹಿಳೆಯರನ್ನು ಲಾಡ್ಜ್‌ನಲ್ಲಿ ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದರೆಂಬ ಆರೋಪ ಕೇಳಿಬಂದಿದೆ.
honoured/ ಜನಮೆಚ್ಚಿದ ಶಿಕ್ಷಕಗೆ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನ
ದಾಳಿಯ ವೇಳೆ ಸಿಕ್ಕ ಸ್ವತ್ತುಗಳನ್ನು ಜಪ್ತಪಡಿಸಲಾಗಿದ್ದು, ಆರೋಪಿಯ ವಿರುದ್ಧ ಮುರುಡೇಶ್ವರ (Murudeshwara) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ. ರಕ್ಷಿಸಲಾದ ಮಹಿಳೆಯರನ್ನು ಭಟ್ಕಳದ (Bhatkal) ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲಾಗಿದೆ.



