ಭಟ್ಕಳ: ನಗರದ ನವಾಯತ್ ಕಾಲೋನಿಯ ಸಿಟಿ ಲೈಟ್ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ (National Highway) ೬೬ರಲ್ಲಿ ಕಾರೊಂದು ಸ್ಕೂಟರ್‌ಗೆ ಡಿಕ್ಕಿ (car hits scooter) ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ (cctv camera) ಸೆರೆಯಾಗಿದ್ದು ವಿಡಿಯೋ ವೈರಲ್ (video viral) ಆಗಿದೆ.

ಅಪಘಾತದ ದೃಶ್ಯವನ್ನು ಇನ್ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ ನಲ್ಲಿ ವೀಕ್ಷಿಸಬಹುದು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಮೃತ ವ್ಯಕ್ತಿಯನ್ನು ಉಡುಪಿ (Udupi) ಜಿಲ್ಲೆಯ ಬೈಂದೂರು (Byndooru) ತಾಲೂಕಿನ ಶಿರೂರು ನಿವಾಸಿ ತೌಸಿಫ್ (೪೦) ಎಂದು ಗುರುತಿಸಲಾಗಿದ್ದು, ಭಟ್ಕಳದ ಆಜಾದ್ ನಗರದಲ್ಲಿ ವಾಸಿಸುತ್ತಿದ್ದರು. ಗಾಯಾಳುವನ್ನು ಭಟ್ಕಳದ ಮದೀನಾ ಕಾಲೋನಿಯ ನಿವಾಸಿ ಸೈಯದ್ ಉಮರ್ ರಶಾದ್ ಶೇಖ್ (೨೦) ಎಂದು ಗುರುತಿಸಲಾಗಿದೆ.

ಇದನ್ನು ಓದಿ: Murudeshwar/ ಅಪರಿಚಿತ ಹೆಂಗಸಿನ ಮೃತದೇಹ ಪತ್ತೆ

ಬುಧವಾರ ಬೆಳಿಗ್ಗೆ ೧೧ ಗಂಟೆ ಸುಮಾರಿಗೆ ಸ್ಕೂಟರ್ ಸಿಟಿ ಲೈಟ್ ಕ್ರಾಸ್ ನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಂಸುದ್ದೀನ್ ವೃತ್ತದ ಕಡೆಗೆ ಚಲಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಆ ಸಮಯದಲ್ಲಿ, ಉಡುಪಿಯಿಂದ ಶಿರಸಿಗೆ ವೇಗವಾಗಿ ಬರುತ್ತಿದ್ದ ಕಾರು, ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ (car hits scooter). ಈ ಅಪಘಾತದ ತೀವ್ರತೆ ಎಷ್ಟಿತ್ತೆಂದರೆ, ಸ್ಕೂಟರ್ ಕೆಲವು ಮೀಟರ ದೂರದಲ್ಲಿ ಬಿದ್ದ ರಭಸಕ್ಕೆ ಇಬ್ಬರೂ ಸವಾರರು ರಸ್ತೆಯ ಮಧ್ಯ ಬಿದ್ದರು.

ಇದನ್ನು ಓದಿ: Cremation/ ಎರಡು ಮೃತ ದೇಹಗಳ ಸಂಸ್ಕಾರ

ಅಪಘಾತದ ನಂತರ, ಸ್ಥಳೀಯ ನಿವಾಸಿಗಳು ಗಾಯಾಳುಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದರು. ಅಲ್ಲಿಂದ ಪ್ರಾಥಮಿಕ ಚಿಕಿತ್ಸೆಯ ನಂತರ ಮಂಗಳೂರಿಗೆ (Mangaluru) ಕರೆದೊಯ್ಯಲಾಯಿತು. ತೌಸಿಫ್ ಮಂಗಳೂರಿಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಭಟ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

ಇದನ್ನು ಓದಿ: Theft/ ಮಾಂಗಲ್ಯ ಸರ ಕಳ್ಳತನ