ಭಟ್ಕಳ: ಮಂಗಳೂರು (Mangaluru), ಗೋವಾ (Goa) ಸೇರಿದಂತೆ ವಿವಿಧ ಪ್ರದೇಶಗಳಿಂದ ಬಾಡಿಗೆಯ ಆಧಾರದಲ್ಲಿ ಪ್ರಯಾಣಿಕರನ್ನು ಹೊತ್ತು ತರುತ್ತಿರುವ ವೈಟ್‌ಬೋರ್ಡ್ ವಾಹನಗಳ (whiteboard taxi) ‘ಅಕ್ರಮ ಓಡಾಟ’ ವಿರುದ್ಧ ಭಟ್ಕಳ ಟ್ಯಾಕ್ಸಿ ಚಾಲಕ–ಮಾಲಕರ ಸಂಘದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಪನಕಟ್ಟೆ ಚೆಕ್‌ಪೋಸ್ಟ್‌ನಲ್ಲಿ ಅಕ್ರಮವಾಗಿ ಪ್ರಯಾಣಿಕರನ್ನು ಕರೆತರುತ್ತಿದ್ದ ಖಾಸಗಿ ವಾಹನವನ್ನು ತಡೆದು ಪೊಲೀಸರ ವಶಕ್ಕೆ ನೀಡಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

“ಬಾಡಿಗೆಯ ಆಧಾರದಲ್ಲಿ ವಾಹನ ಚಲಾಯಿಸಲು ಪ್ರತಿ ಮೂರು ತಿಂಗಳಿಗೊಮ್ಮೆ ಸಾವಿರಾರು ರೂಪಾಯಿ ತೆರಿಗೆ ಪಾವತಿಸುತ್ತಿದ್ದೇವೆ. ನಾವು ಎಲ್ಲರೂ ಈ ವೃತ್ತಿಯನ್ನೇ ಜೀವನೋಪಾಯವನ್ನಾಗಿಸಿಕೊಂಡಿದ್ದೇವೆ. ಆದರೆ ವೈಟ್‌ಬೋರ್ಡ್ ವಾಹನಗಳು (whiteboard taxi) ಯಾವುದೇ ತೆರಿಗೆ ಇಲ್ಲದೇ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿರುವುದು ಕಾನೂನುಬಾಹಿರ,” ಎಂದು ಸಂಘದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: precautionary measures/ ಆರೋಪಿ ವಿರುದ್ಧ ಮುಂಜಾಗ್ರತಾ ಕ್ರಮ ಜರುಗಿಸಿದ ಪೊಲೀಸರು, ಏನಿದು ಗೊತ್ತಾ?

“ಭಟ್ಕಳ ಹಾಗೂ ಸುತ್ತಮುತ್ತ ಅನೇಕ ಖಾಸಗಿ ವಾಹನಗಳು ಇದೇ ರೀತಿಯಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿವೆ. ಸರ್ಕಾರದ ತೆರಿಗೆ ತಪ್ಪಿಸಿ ದಂಧೆ ನಡೆಸುತ್ತಿದ್ದಾರೆ. ಆರ್‌ಟಿಓ ಮತ್ತು ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು, ಇಲ್ಲವಾದರೆ ನಾವು ಸ್ವತಃ ಇಂತಹ ವಾಹನಗಳನ್ನು ತಡೆದು ನಿಲ್ಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿ: University Rank/ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿಗೆ ಮತ್ತೊಂದು ರ‍್ಯಾಂಕ್

ತಡೆದ ಖಾಸಗಿ ವಾಹನವನ್ನು ಪೊಲೀಸರು ವಶಕ್ಕೆ ಪಡೆದು, ಆರ್‌ಟಿಓ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಈ ಕುರಿತು ಭಟ್ಕಳ ಟ್ಯಾಕ್ಸಿ ಚಾಲಕ–ಮಾಲಕರ ಸಂಘದ ಅಧ್ಯಕ್ಷ ಗಣೇಶ ದೇವಾಡಿಗ ಭಟ್ಕಳ (Bhatkal) ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮುಷಾಕ್, ಅದ್ವಾನ್, ಗಜಾನನ, ನಾರಾಯಣ ಮೊದಲಾದವರು ಉಪಸ್ಥಿತರಿದ್ದರು.

ಇದನ್ನು ಓದಿ: WordPress Campus Connect/ ಸುಧೀಂದ್ರ ಕಾಲೇಜು ವಿದ್ಯಾರ್ಥಿಗಳಿಗೆ ಡಿಜಿಟಲ್ ಪ್ರೇರಣೆ