ಕಾರವಾರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದಿಂದ ೨೦೨೪-೨೫ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವಿದ್ಯಾಭ್ಯಾಸ (OVERSEAS EDUCATION) ಮಾಡಲು ಸಾಲಸೌಲಭ್ಯ ಸಿಗಲಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಮಾನ್ಯತೆ ಪಡೆದಿರುವ ವಿದೇಶದ ವಿಶ್ವವಿದ್ಯಾಲಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಮಾಡ ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ (OVERSEAS EDUCATION) ಯೋಜನೆಯಡಿಯಲ್ಲಿ ಸಾಲ ಸಿಗಲಿದೆ. ಈ ಯೋಜನೆಯಡಿಯಲ್ಲಿ ಸಾಲ ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್‌ಸೈಟ್ ಆನ್‌ಲೈನ್ ಮೂಲಕ ಆಗಸ್ಟ್ ೩೧ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ಷೇರುದಾರರಿಗೆ ಶೇ.೧೦ ಲಾಭಾಂಶ ಘೋಷಣೆ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ವಾಸೀಂ ಮಂಜಿಲ್, ೧ನೇ ಮಹಡಿ, ಹೈಚರ್ಚ್ ರಸ್ತೆ, ಕಾರವಾರ. ದೂರವಾಣಿ ಸಂಖ್ಯೆ:08382-221180 ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.