ಭಟ್ಕಳ: ಆಹಾರ ವಿಜ್ಞಾನಿ, ಪೌಷ್ಟಿಕಾಂಶ ತಜ್ಞ ಹಾಗೂ “ಮಿಲ್ಲೆಟ್ ಮ್ಯಾನ್ ಆಫ್ ಇಂಡಿಯಾ” ಖ್ಯಾತಿಯ ಪದ್ಮಶ್ರೀ ಪುರಸ್ಕೃತ ಡಾ ಖಾದರ್ ವಲಿ ಅವರಿಂದ “ಆಹಾರವೇ ಆರೋಗ್ಯ” ವಿಶೇಷ ಉಪನ್ಯಾಸ (lecture) ಕಾರ್ಯಕ್ರಮವು ಮೇ ೩೧ರಂದು ಭಾನುವಾರ ಬೆಳಿಗ್ಗೆ ೯.೩೦ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಇಲ್ಲಿನ ನಾಗಯಕ್ಷೆ ಸಭಾಭವನದಲ್ಲಿ ನಡೆಯಲಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಭಟ್ಕಳ ತಾಲೂಕಿನ ಸ್ಪಂದನ ಸಂಸ್ಥೆ, ಕ್ರಿಯಾಶೀಲ ಗೆಳೆಯರ ಸಂಘ, ಲಯನ್ಸ್ ಕ್ಲಬ್ ಮುರುಡೇಶ್ವರ, ಸ್ವಾಮಿ ವಿವೇಕಾನಂದ ಜನಸ್ಪಂದನ ಫೌಂಡೇಶನ್ ಜಾಲಿ, ಸರ್ಪನಕಟ್ಟೆ ಕಟ್ಟೆ ಸ್ಪೋರ್ಟ್ಸ್ ಕ್ಲಬ್, ಶ್ರೀ ಕನ್ನಿಕಾ ಪರಮೇಶ್ವರಿ ಕ್ರೀಡಾ ಮತ್ತು ಸಾಂಸ್ಕೃತಿಕ ಯುವಕ ಸಂಘ ಮಾವಿನಕಟ್ಟೆ, ಶ್ರೀ ದುರ್ಗಾ ಯುವಕ ಮಂಡಲ ಅಳವೆಕೋಡಿ, ಪ್ರೀತಿ ಸ್ಪೋರ್ಟ್ಸ್ ಕ್ಲಬ್ ಶಿರಾಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಭಟ್ಕಳ ಹಾಗೂ ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ವಿವಿಧ ಸಂಘ–ಸಂಸ್ಥೆಗಳ ಸಹಕಾರದೊಂದಿಗೆ ಉಪನ್ಯಾಸ (lecture) ಕಾರ್ಯಕ್ರಮ ಆಯೋಜಿಸಲಾಗಿದೆ.

BJP protest/ ಮುರಿನಕಟ್ಟೆ ಮರು ನಿರ್ಮಾಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ 

ಅಮೆರಿಕದಲ್ಲಿ ಐದು ವರ್ಷಗಳ ಕಾಲ ಆಹಾರ ವಿಜ್ಞಾನಿಯಾಗಿ ಸೇವೆ ಸಲ್ಲಿಸಿದ್ದ ಡಾ ಖಾದರ್ ವಲಿ ಅವರು ೧೯೯೭ರಲ್ಲಿ ಭಾರತಕ್ಕೆ ಮರಳಿ ಮೈಸೂರಿನಲ್ಲಿ ನೆಲೆಸಿದ್ದು, ಕಳೆದ ಮೂರು ದಶಕಗಳಿಂದ ಆರೋಗ್ಯ ಜಾಗೃತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸಿರಿಧಾನ್ಯಗಳ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸಿದ ಕಾರಣದಿಂದಾಗಿ ಅವರು “ಮಿಲ್ಲೆಟ್ ಮ್ಯಾನ್ ಆಫ್ ಇಂಡಿಯಾ” ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆರೋಗ್ಯ ಕ್ಷೇತ್ರಕ್ಕೆ ನೀಡಿದ ವಿಶೇಷ ಕೊಡುಗೆಯನ್ನು ಗುರುತಿಸಿ ಭಾರತ ಸರ್ಕಾರವು 2023ರಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.

Murinakatte/ ಮುರಿನಕಟ್ಟೆ ವಿವಾದ ಹಿನ್ನೆಲೆ ೫ ಪ್ರಕರಣ ದಾಖಲು; ೪೦ ಮಂದಿ ವಶಕ್ಕೆ 

ಕಾರ್ಯಕ್ರಮದಲ್ಲಿ ಸಿರಿಧಾನ್ಯಗಳ ಸಮರ್ಪಕ ಬಳಕೆ ಹಾಗೂ ಸೂಕ್ತ ಆಹಾರ ಕ್ರಮದ ಮೂಲಕ ಮಧುಮೇಹ, ರಕ್ತದೊತ್ತಡ, ಥೈರಾಯ್ಡ್, ಪಿಸಿಓಡಿ, ಗ್ಯಾಂಗ್ರಿನ್, ಡಯಾಲಿಸಿಸ್ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳ ಕುರಿತು ಡಾ ಖಾದರ್ ವಲಿ ಮಾಹಿತಿ ನೀಡಲಿದ್ದು, ಸಾರ್ವಜನಿಕರೊಂದಿಗೆ ಸಂವಾದ ನಡೆಸಲಿದ್ದಾರೆ.

Chippikallu tragedy/ ಚಿಪ್ಪಿಕಲ್ಲು ದುರಂತಕ್ಕೆ ಮಂಕಾಳ ವೈದ್ಯ ಕಾರಣ: ಮಾಸ್ತಪ್ಪ ನಾಯ್ಕ ಆರೋಪ

ಕಾರ್ಯಕ್ರಮವನ್ನು ಸಚಿವ ಮಂಕಾಳ ವೈದ್ಯ ಉದ್ಘಾಟಿಸಲಿದ್ದು, ನಾಗಯಕ್ಷೆ ಮಹಾಸತಿ ಧರ್ಮದೇವಿ ಸಂಸ್ಥಾನದ ಧರ್ಮದರ್ಶಿ ರಾಮದಾಸ ಪ್ರಭು ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿರುವರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಆರೋಗ್ಯಕರ ಆಹಾರ ಪದ್ಧತಿ ಕುರಿತು ಮಾಹಿತಿ ಪಡೆದು ಪ್ರಯೋಜನ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ  ೬೩೬೧೨೭೩೧೪೨ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಸಂಘಟಕರು ಕೋರಿದ್ದಾರೆ.

Murinakatte incident/ ಭಟ್ಕಳದಲ್ಲಿ ಪೊಲೀಸರ ಪಥ ಸಂಚಲನ